ಬೆಂಗಳೂರು: ಈ ಬಾರಿ ಗಣರಾಜ್ಯೋತ್ಸವ (Republic Day 2023) ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ (Karnataka Tableau) ಅನುಮತಿಯನ್ನ ನಿರಾಕರಿಸಲಾಗಿತ್ತು. ಅನುಮತಿ ನಿರಾಕರಣೆಗೆ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಪತ್ರದ ಬೆನ್ನಲ್ಲೇ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ಸಿಕ್ಕಿದೆ. ಕರ್ನಾಟಕ ನಾರಿಶಕ್ತಿ ಸ್ತಬ್ಥಚಿತ್ರದ ವಿಷಯದ ವಿನ್ಯಾಸದ ಮಾದರಿಯನ್ನು ಪ್ರದರ್ಶಿಸಿತ್ತು. ಮೊದಲ ಎರಡು ಸುತ್ತಿನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿತ್ತು. ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ಕಾರಣ ಹೇಳಿ ಅಂತಿಮ ಕ್ಷಣದಲ್ಲಿ ಅನುಮತಿಯನ್ನು ನಿರಾಕರಿಸಲಾಗಿರತ್ತು.
ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಾ ಬಂದಿದೆ. ಕಳೆದ ಬಾರಿ ಎರಡನೇ ಸ್ಥಾನ ಪ್ರಶಸ್ತಿ ಪಡೆದುಕೊಂಡಿತ್ತು.
ಕರ್ನಾಟಕ ಪ್ರತಿನಿಧಿಸಿದ್ದ ಮಹಿಳಾ ಸಬಲೀಕರಣ ವಿಷಯಾಧರಿತ ಸ್ತಬ್ಧಚಿತ್ರ ಆರಂಭದ ಕೆಲವು ಸುತ್ತಿನಲ್ಲಿ ಆಯ್ಕೆಯಾಗಿತ್ತು. ಸ್ತಬ್ಧಚಿತ್ರದ ವಿನ್ಯಾಸ ಮತ್ತು ಸಂಗೀತಕ್ಕೆ ತಜ್ಞರ ಸಮಿತಿ ಒಪ್ಪಿಗೆ ಸಹ ನೀಡಿತ್ತು.
ಕಳೆದ ಕೆಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗುತ್ತಿದೆ ಎಂಬ ಮಾತುಗಳ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಈ ಬಾರಿ 13 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಕಳೆದ ವರ್ಷಕ್ಕೆ ಕೇರಳಕ್ಕೆ ಅವಕಾಶ ತಪ್ಪಿತ್ತು
2022ರ ಗಣರಾಜ್ಯೋತ್ಸವದಲ್ಲಿ ಕೇರಳ ಸಲ್ಲಿಸಿದ್ದ ನಾರಾಯಣಗುರು ಸ್ಥಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿರಲಿಲ್ಲ. ಈ ವರ್ಷ ಕರ್ನಾಟಕಕ್ಕೆ ಅವಕಾಶ ನೀಡಿಲ್ಲ.
ಇಂದು ಹುಬ್ಬಳ್ಳಿಗೆ ಪ್ರಧಾನಿ ಮೋದಿ
ಇಂದು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಬರ್ತಿದ್ದಾರೆ. ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಮೋದಿ ಬರುವ ಮಾರ್ಗ ಉದ್ದಕ್ಕೂ ಪೊಲೀಸ್ ಹದ್ದಿನ ಕಣ್ಣಿಟ್ಟಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆಯಲಿರುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಂಜೆ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರೈಲ್ವೆ ಮೈದಾನಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ಈ ವೇಳೆ ಮಾತಾಡಿದ ಜೋಶಿ, ರಾಷ್ಟ್ರೀಯ ಯುವಜನೋತ್ಸವಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮೋದಿ ಕಾರ್ಯಕ್ರಮಕ್ಕೆ ದೊಡ್ಡ ಪ್ರಮಾಣದಲ್ಲಿ ನೋಂದಣಿಯಾಗಿದೆ. ಲಕ್ಷಾಂತರ ಜನ ಬರ್ತಿದ್ದಾರೆ ಅಂತ ಹೇಳಿದ್ರು.
ಇದನ್ನೂ ಓದಿ: Bengaluru: ಲೈವ್ ಬ್ಯಾಂಡ್ನಲ್ಲಿ ಯುವತಿಯರ ಡ್ಯಾನ್ಸ್ ನೋಡಲು ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಗ್ಯಾಂಗ್ ಅಂದರ್
ಇನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಕೈಬಿಡಲಾಗಿತ್ತು. ಗಮನಕ್ಕೆ ಬಂದ ಕೂಡಲೇ ಅದನ್ನ ಸರಿ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಉದ್ದೇಶಪೂರ್ವಕವಾಗಿ ಬಿಡಲಾಗಿಲ್ಲ. ಶೆಟ್ಟರ್ ಜೊತೆ ಬೇರೆ ಶಾಸಕರಿಗೂ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗುತ್ತೆ ಅಂತ ಪ್ರಹ್ಲಾದ್ ಜೋಶಿ ಹೇಳಿದ್ರು.
ಎರಡು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ
ಭದ್ರತೆ ದೃಷ್ಟಿಯಿಂದ 2 ಸಾವಿರ 900 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ADGP ಅಲೋಕ್ ಕುಮಾರ್ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವ್ಯಾವ ಅಧಿಕಾರಿಗಳಿಗೆ ಎಲ್ಲಿ ನಿಯೋಜನೆ ಮಾಡಲಾಗಿದೆ ಅಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ.
ಯಾವುದೇ ಪ್ರತಿಭಟನೆ, ಮನವಿಗೆ ಅವಕಾಶವಿಲ್ಲ ಅಂತ ಹೇಳಿದ್ರು. ಇನ್ನು ಭದ್ರತೆಗಾಗಿ 7 ಎಸ್ಪಿ ದರ್ಜೆ ಅಧಿಕಾರಿಗಳು, 25 ಡಿವೈಎಸ್ಪಿ ದರ್ಜೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ರೈಲ್ವೆ ಮೈದಾನದ ಮುಖ್ಯ ವೇದಿಕೆಯ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಜನರಿಗೆ ತೊಂದರೆ ಆಗದಂತೆ ಟ್ರಾಫಿಕ್ ನಿಯಂತ್ರಣಕ್ಕಾಗಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ