Karnataka-Maharashtra Border Issue: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಕೇಂದ್ರ ಸರ್ಕಾರ (Central Government) ಮಧ್ಯ ಪ್ರವೇಶ ಮಾಡಲಿದೆ. ಈ ಸಂಬಂಧ ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸುವ ಸಾಧ್ಯತೆಗಳಿವೆ. ಕರ್ನಾಟಕದ bಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (CM Basavaraj Bommai), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Maharashtra CM Eknath Shinde) ಭಾಗಿಯಾಗಲಿದ್ದು, ಎರಡು ರಾಜ್ಯಗಳ ನಡುವೆ ಸೌಹಾರ್ದ ಮೂಡಿಸುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಹಾರಾಷ್ಟ್ರ ನಾಯಕರ ನಿಯೋಗ ಭೇಟಿ ಮಾಡಿದೆ.
ಯಾವುದೇ ಕಾರಣಕ್ಕೂ ಕರ್ನಾಟಕದ ನಿಲುವಿನಲ್ಲಿ ಬದಲಾವಣೆ ಇಲ್ಲ. ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದೆ. ಮಹಾರಾಷ್ಟ್ರ ಸರ್ಕಾರ ನಮ್ಮ ತಂಟೆಗೆ ಬರದಂತೆ ಹೇಳಿ ಎಂದು ಆಗ್ರಹಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಮುಂದಾಗಿದ್ದಾರೆ.
ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಂಇಎಸ್ ಮಹಾಮೇಳಕ್ಕೂ ಅವಕಾಶ ಕೊಡದಂತೆ ಹಾಗೂ ಅಂದಿನ ಸಮ್ಮೇಳನಕ್ಕೆ ಮಹಾರಾಷ್ಟ್ರ ನಾಯಕರು ಬರದಂತೆ ಸೂಚಿಸುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿಕೊಳ್ಳಲಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಮೀಟಿಂಗ್ನಲ್ಲಿ ಏನಾಗಲಿದೆ ಎಂಬುದರ ಬಗ್ಗೆ ಎರಡೂ ರಾಜ್ಯದ ಜನರು ಕಾಯುತ್ತಿದ್ದಾರೆ.
ಕೊಲ್ಲಾಪುರದಲ್ಲಿ ಕನ್ನಡಿಗರ ಅಂಗಡಿಗಳು ಬಂದ್
ಕರ್ನಾಟಕ ಸರ್ಕಾರ ಹಾಗೂ ಕನ್ನಡಿಗರ ವಿರುದ್ಧ ಮತ್ತೆ ಖ್ಯಾತೆ ತೆಗೆಯಲು ಮಹಾರಾಷ್ಟ್ರದ ಪುಂಡರು ಮುಂದಾಗಿದ್ದು, ಇಂದು ಮಹಾರಾಷ್ಟ್ರದ ಗಡಿ ಜಿಲ್ಲೆಯ ಕೊಲ್ಲಾಪುರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಪುಂಡರು ಪ್ರತಿಭಟನೆ ನಡೆಸಲಿದ್ದಾರೆ. ಮಹಾವಿಕಾಸ್ ಆಘಾಡಿ ಸಂಘಟನೆಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜನೆ ಮಾಡಿದ್ದು, ಕೊಲ್ಲಾಪುರ್ ನಗರದ ಶಾಹೂ ಸಮಾಧಿ ಸ್ಥಳದಲ್ಲಿ ನಡೆಯಲಿದೆ.
ಇದನ್ನೂ ಓದಿ: Siddaramaiah: ಬಿಜೆಪಿ ಕೇಳ್ತಿರೋ ‘ಆ’ ಒಂದು ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡೋದು ಯಾವಾಗ?
ಮತ್ತೊಂದು ಕಡೆ ಹಲವು ಶಿವಸೇನೆ ಮುಖಂಡರ ನೇತೃತ್ವದಲ್ಲಿ ಧರಣಿ ಸಹ ನಡೆಯಲಿದೆ. ಪ್ರತಿಭಟನೆ ಹಿನ್ನೆಲೆ ಕೊಲ್ಲಾಪುರ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಕನ್ನಡಿಗರು ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದಾರೆ.
ಬೆಳಗಾವಿ ಗಡಿ ವಿವಾದ ಕುರಿತು ನಟ ಶಿವರಾಜ್ಕುಮಾರ್ ಪ್ರತಿಕ್ರಿಯೆ
ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬೆಳಗಾವಿ ಗಡಿ ಭಾಗ ತಮ್ಮದು ಎಂದು ಮಹಾರಾಷ್ಟ್ರದ ಪುಂಡರು ಆಗಾಗ್ಗೆ ಕಾಲು ಕೆದರಿ ಕ್ಯಾತೆ ತೆಗೆಯುತ್ತಾರೆ. ಈ ಬಗ್ಗೆ ಈಗ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಯಾರದ್ದೋ ಬೇಳೆ ಬೇಯಿಸಿಕೊಳ್ಳುವುದಕ್ಕೋಸ್ಕರ ಸಾಮಾನ್ಯ ಜನರ ಜೀವನ ಹಾಳು ಮಾಡುವುದು ಸರಿಯಲ್ಲ ಅಂತಾ ನಟ ಶಿವರಾಜ್ ಕುಮಾರ್, ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: Karnataka Politics: ಬಿಜೆಪಿ ಸರ್ಕಾರ, ಪಕ್ಷದಲ್ಲಿ ಮಹತ್ವದ ಬದಲಾವಣೆ?
‘ನಾನು ಹೋಗುವಾಗ ಯಾರು ಬೇಕಾದ್ರೂ ಕಲ್ಲಲ್ಲಿ ಹೊಡೆಯಬಹುದು’
ನಾನು ಸಾಮಾನ್ಯ ಜನರಲ್ಲಿ ಒಬ್ಬ. ನಾನು ಹೋಗುವಾಗ ನನಗೂ ಸಹ ಯಾರೋ ಕಲ್ಲಲ್ಲಿ ಹೊಡೆಯಬಹುದು. ಸ್ಟಾರ್ ಡಮ್ ಇದೆ ಅನ್ನೋ ಕಾರಣಕ್ಕೆ ನಮಗೆ ಪೊಲೀಸ್ ಪ್ರೊಟೆಕ್ಷನ್ ಸಿಗುತ್ತೆ. ಆದ್ರೆ ಸಾಮಾನ್ಯ ಜನರಿಗೆ ಹಾಗೇ ಆಗಲ್ಲ. ಅವರು ಕಲ್ಲೇಟು ತಿಂತಾರೆ. ಈ ರೀತಿಯಾಗಲು ಬಿಡಬಾರದು. ಬೆಳಗಾವಿ ವಿಭಾಗಕ್ಕೆ ಸಂಬಂಧಪಟ್ಟವರು ಬುದ್ಧಿ ಉಪಯೋಗಿಸಿ ಮಾತಾಡಿ ಎಂದು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ