news18-kannada Updated:November 14, 2020, 11:25 AM IST
ಸಿಎಂ ಬಿಎಸ್ ಯಡಿಯೂರಪ್ಪ
ಬೆಂಗಳೂರು (ನವೆಂಬರ್ 14): ರಾಜ್ಯದ 13 ಜಿಲ್ಲೆಗಳಲ್ಲಿ ಈ ವರ್ಷ ಭಾರೀ ಮಳೆಯಿಂದ ಪ್ರವಾಹ ಬಂದು ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮತ್ತು ಬೆಳೆ ನಷ್ಟ ಉಂಟಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರ 577 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ಬಿಡುಗಡೆ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಕಾಟಾಚಾರಕ್ಕೆ ಹಣ ಬಿಡುಗಡೆ ಮಾಡಿದ್ದು, ಈ ಮೊತ್ತ ಕಡಿಮೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದಕ್ಕೆ ಬಿಎಸ್ವೈ ಉತ್ತರ ನೀಡಿದ್ದು, ಕೇಂದ್ರದಿಂದ ಇನ್ನೂ ಹೆಚ್ಚಿನ ನೆರೆ ಪರಿಹಾರಕ್ಕೆ ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಜವಾಹರಲಾಲ ನೆಹರು ಅರವರ 131 ನೇ ಜನ್ಮದಿನ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರು ಪ್ರತಿಮೆಗೆ ಬಿಎಸ್ವೈ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮದ ಜೊತೆ ಮಾತಾನಾಡಿದ ಅವರು, "ಕೇಂದ್ರ ನೀಡಿದ ಎನ್ಡಿಆರ್ಎಫ್ ಪರಿಹಾರ ಕಡಿಮೆ ಆಯಿತು ಎನ್ನುವ ಆರೋಪ ಕೇಳಿ ಬಂದಿದೆ. ಆದರೆ, ಕೇಂದ್ರದಿಂದ ನಿನ್ನೆ ಕೊಟ್ಟಿದ್ದು ಮೊದಲ ಕಂತು ಎಂದು ನಾವು ಭಾವಿಸುತ್ತೇವೆ. ಇನ್ನೂ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ಪಡುತ್ತೇವೆ. ಇನ್ನಷ್ಟು ಪರಿಹಾರ ಬರುವ ವಿಶ್ವಾಸ ನಮಗೆ ಇದೆ," ಎಂದರು.
ಯಪಿಎಸ್ ಸಿ ಕೆಪಿಎಸ್ ಪರೀಕ್ಷೆಗಳು ಒಟ್ಟೊಟ್ಟಿಗೆ ಬಂದಿದೆ. ಹೀಗಾಗಿ, ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡುವಂತೆ ವಿಧ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು ಬಿಎಸ್ವೈ.
ಕುಮಾರಸ್ವಾಮಿ ಭೇಟಿ ಬಗ್ಗೆ ಸ್ಪಷ್ಟನೆ:
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಈ ಬೆನ್ನಲ್ಲೇ ನಿನ್ನೆ ಸಂಜೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಬಿಎಸ್ವೈ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ಕೂತಹಲಕ್ಕೆ ಬಿಎಸ್ವೈ ತೆರೆ ಎಳೆದಿದ್ದಾರೆ. ಡಿಸಿಸಿ ಬ್ಯಾಂಕ್ ಸಂಬಂಧ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚಿಸಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ ಎಂದರು.
ನೆಹರು ನೆನೆದ ಬಿಎಸ್ವೈ:ಜವಾಹರಲಾಲ್ ನೆಹರು ಬಗ್ಗೆ ಯೂ ಮಾತನಾಡಿದ ಬಿಎಸ್ವೈ, ಅವರು ನೆಹರು ಈ ದೇಶ ಕಂಡ ಮಹಾನ್ ನಾಯಕ. ಸ್ವಾತಂತ್ರ ಹೋರಾಟದಲ್ಲಿ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಿದರು. ಅವರು ದೇಶದ ಅಭಿವೃದ್ಧಿಯ ಹರಿಕಾರ. ಅವರ ಜನ್ಮದಿನದಂದು ಅವರನ್ನ ಗೌರವಪೂರ್ವಕವಾಗಿ ನೆನೆಪಿಸಿಕೊಳ್ಳೋಣ, ಎಂದರು.
Published by:
Rajesh Duggumane
First published:
November 14, 2020, 11:25 AM IST