HOME » NEWS » State » CENTRAL MINISTER DV SADANANDA GOWDA SAYS CENTRAL GOVT IS ALWAYS READY TO SERVE QUALITY HEALTH FACILITIES HK

ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಸರ್ಕಾರ ಬದ್ಧ : ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ

ಕೇಂದ್ರ ಸರ್ಕಾರ ಕೈಗೆಟಕುವ ದರದಲ್ಲಿ ದೇಶದ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಆಯುಷ್ಮಾನ್ ಭಾರತ್, ಇಂಧ್ರ ಧನುಷ್, ಜನೌಷಧದಂಥ ಮಹತ್ವಪೂರ್ಣ ಯೋಜನೆ ಕಾರ್ಯಗತಗೊಳಿಸಿದೆ

news18-kannada
Updated:June 26, 2020, 8:01 PM IST
ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಸರ್ಕಾರ ಬದ್ಧ : ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
  • Share this:
ನವದೆಹಲಿ(ಜೂ.24) : ಕರ್ನಾಟಕ ಮಾನಸಿಕ ಆರೋಗ್ಯ ನಿರ್ವಹಣಾ ವ್ಯವಸ್ಥೆ ಇ- ಮನಸ್ ನಿರ್ದಿಷ್ಟ ಉದ್ದೇಶಗಳನ್ನು ಈಡೇರಿಸುವ ಮಾರ್ಗವಾಗಿದ್ದು, ಇದು ಖಾಸಗಿ ವಲಯಕ್ಕೂ ಲಭ್ಯವಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ ರಾಷ್ಟ್ರೀಯ ಮಹತ್ವದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ ಓಪಿಡಿ ಸಮುಚ್ಛಯ ಶಿಲಾನ್ಯಾಸ ಮತ್ತು ಇ- ಮನಸ್ ತಂತ್ರಾಂಶ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡ ಮಾತನಾಡಿದ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ದೇಶದ ಜನತೆಗೆ ಸೂಕ್ತ ಆರೋಗ್ಯ ಸೇವೆ ಒದಗಿಸಲು ನಮ್ಮ ಸರ್ಕಾರ ದೊಡ್ಡ ಸಂಖ್ಯೆಯಲ್ಲಿ ದೇಶದಾದ್ಯಂತ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕೈಗೆಟಕುವ ದರದಲ್ಲಿ ದೇಶದ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಆಯುಷ್ಮಾನ್ ಭಾರತ್, ಇಂಧ್ರ ಧನುಷ್, ಜನೌಷಧದಂಥ ಮಹತ್ವಪೂರ್ಣ ಯೋಜನೆ ಕಾರ್ಯಗತಗೊಳಿಸಿದೆ ಎಂದು ತಿಳಿಸಿದರು.

ಬೆಂಗಳೂರಿನ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಇ-ಮನಸ್ ಅಭಿವೃದ್ಧಿಪಡಿಸಲು ಶ್ರಮಿಸಿದ ಪದ್ಮಶ್ರೀ ಪ್ರೊ. ಗಂಗಾಧರ್ ಮತ್ತು ತಂಡಕ್ಕೆ ಮತ್ತು ಐಐಐಟಿಗೆ ಸಚಿವರು ಅಭಿನಂದನೆ ಸಲ್ಲಿಸಿದರು. ಈ ನೂತನ ಉಪಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಜನತೆಗೆ ತಿಳಿಸಿದರು.

ಬೆಂಗಳೂರು ಉತ್ತರ ಭಾಗದ ಜನರಿಗೆ ಅನುಕೂಲವಾಗಲಿರುವ ಓಪಿಡಿಗಾಗಿ ಜಮೀನು ನೀಡಿದ ಮತ್ತು ನಿಮ್ಹಾನ್ಸ್ ಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರನ್ನು ಅಭಿನಂದಿಸಿದರು.

ಇದನ್ನೂ ಓದಿ : ಎಸ್​ಎಸ್​​ಎಲ್​​ಸಿ ಎರಡನೇ ಪರೀಕ್ಷೆ; ಕಂಟೈನ್​ಮೆಂಟ್ ನಿಂದ ಯಾರೂ ಪರೀಕ್ಷೆ ಬರೆದಿಲ್ಲ ; ಸಚಿವ ಸುರೇಶ್ ಕುಮಾರ್

ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿರುವ ನಿಮ್ಹಾನ್ಸ್ ನಲ್ಲಿ ವಾರ್ಷಿಕ ಆರು ಲಕ್ಷ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ರಾಜ್ಯದ ಮತ್ತು ದೇಶದ ಹಲವು ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಕಾರ್ಯವನ್ನು ಈ ಮಾನಸಿಕ ಸಂಸ್ಥೆ ಮಾಡುತ್ತಿದೆ ಎಂದರು.
Youtube Video

ತಂತ್ರಾಂಶಕ್ಕೆ ಚಾಲನೆ ನೀಡಿ, ಹೊರರೋಗಿಗಳ ವಿಭಾಗಕ್ಕೆ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದರು. ನಗರಾಭಿವೃದ್ಧಿ ಸಚಿವ  ಬೈರತಿ ಬಸವರಾಜ್, ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ, ನಿಮ್ಹಾನ್ಸ್ ಪ್ರೊಫೆಸರ್ ಡಾ. ಗಂಗಾಧರ್ ಮತ್ತಿತರರು ಪಾಲ್ಗೊಂಡಿದ್ದರು.
First published: June 26, 2020, 8:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories