• Home
  • »
  • News
  • »
  • state
  • »
  • Prahlad Joshi: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೋನಾ ಸೋಂಕು ಧೃಡ..!

Prahlad Joshi: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೋನಾ ಸೋಂಕು ಧೃಡ..!

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ತಮಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿಯವರು, ಆತ್ಮೀಯರೇ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ

  • Share this:

    ದೆಹಲಿ(ಅಕ್ಟೋಬರ್​. 07) : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೋನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೋನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ.


    ಸೋಂಕು ತಗುಲಿರುವ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿಯವರು, ಆತ್ಮೀಯರೇ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.



    ಸಚಿವ ಎಸ್​ ಟಿ ಸೋಮಶೇಖರ್​, ವಿಧಾನ ಪರಿಷತ್​ ಸದಸ್ಯ  ರವಿಕುಮಾರ್​ ಸೇರಿದಂತೆ ಹಲವರು ಕೋವಿಡ್ ಸೋಂಕಿನಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶೀಘ್ರ ಗುಣಮುಖರಾಗುವಂತೆ  ಹಾರೈಸಿದ್ದಾರೆ.




    ಇತ್ತೀಚೆಗಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕೂಡ ಕೊರೊನಾ ಚಿಕಿತ್ಸೆ ಫಲಿಸದೇ ವಿಧವಶರಾಗಿದ್ದರು. ಈ ಹಿಂದೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ರಾಜ್ಯದ ಹಲವಾರು ರಾಜಕೀಯ ಗಣ್ಯರಿಗೆ ಕೊಋಒನಾ ಸೋಂಕು ತಗುಲಿತ್ತು.

    Published by:G Hareeshkumar
    First published: