ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೈತ್ರಿ ನಾಯಕರು ಯಾವ ಮುಖ ಇಟ್ಕೊಂಡು ಬರ್ತಾರೆ?; ಕಿಡಿಕಾರಿದ ಸದಾನಂದ ಗೌಡ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಬೇಕು. ಆದರೆ, ಮೈತ್ರಿ ನಾಯಕರು ಕಳೆದ 14 ತಿಂಗಳಿನಿಂದ ರಾಜ್ಯದಲ್ಲಿ ದುರಾಡಳಿತ ನೀಡಿದ್ದಾರೆ. ಈ ಸರ್ಕಾರದ ಕಾರ್ಯವೈಖರಿಯಿಂದ ಅಭಿವೃದ್ಧಿ ಕುಂಠಿತವಾಗಿದೆ. ಜನಸಾಮಾನ್ಯರು ಕಷ್ಟಕ್ಕೆ ನೂಕಲ್ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇವರು ಯಾವ ಮುಖ ಇಟ್ಟುಕೊಂಡು ಯಡಿಯೂರಪ್ಪ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ದೂಷಿಸಿದ್ದಾರೆ.

MAshok Kumar | news18
Updated:July 26, 2019, 6:46 PM IST
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮೈತ್ರಿ ನಾಯಕರು ಯಾವ ಮುಖ ಇಟ್ಕೊಂಡು ಬರ್ತಾರೆ?; ಕಿಡಿಕಾರಿದ ಸದಾನಂದ ಗೌಡ
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
  • News18
  • Last Updated: July 26, 2019, 6:46 PM IST
  • Share this:
ಬೆಂಗಳೂರು (ಜುಲೈ.26); ರಾಜ್ಯದಲ್ಲಿ 14 ತಿಂಗಳು ದುರಾಡಳಿತ ನೀಡಿದ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಯಾವ ಮುಖ ಇಟ್ಕೊಂಡು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕಿಡಿಕಾರಿದ್ದಾರೆ.

ಇಂದು ನಾಲ್ಕನೇ ಬಾರಿ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಇದು ಪ್ರಜಾಪ್ರಭುತ್ವದ ವಿರೋಧಿ ನಡೆ. ಹೀಗಾಗಿ ತಮ್ಮ ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು ತಮ್ಮ ಪಕ್ಷದ ಎಲ್ಲಾ ನಾಯಕರಿಗೂ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಡಿಕಾರಿರುವ ಸದಾನಂದ ಗೌಡ,

“ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಬೇಕು. ಆದರೆ, ಮೈತ್ರಿ ನಾಯಕರು ಕಳೆದ 14 ತಿಂಗಳಿನಿಂದ ರಾಜ್ಯದಲ್ಲಿ ದುರಾಡಳಿತ ನೀಡಿದ್ದಾರೆ. ಈ ಸರ್ಕಾರದ ಕಾರ್ಯವೈಖರಿಯಿಂದ ಅಭಿವೃದ್ಧಿ ಕುಂಠಿತವಾಗಿದೆ. ಜನಸಾಮಾನ್ಯರು ಕಷ್ಟಕ್ಕೆ ನೂಕಲ್ಪಟ್ಟಿದ್ದಾರೆ. ಅಲ್ಲದೆ ಎರಡೂ ಪಕ್ಷದ ನಾಯಕರ ಕಚ್ಚಾಟದಿಂದಾಗಿ ಎಲ್ಲೆಡೆ ಗೊಂದಲ ಮನೆಮಾಡಿತ್ತು. ಈ ಹಿನ್ನೆಲೆಯಲ್ಲಿ ಇವರು ಯಾವ ಮುಖ ಇಟ್ಟುಕೊಂಡು ಯಡಿಯೂರಪ್ಪ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ” ಎಂದು ಅವರು ದೂಷಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, “ಹಲವು ದಿನಗಳ ಹಿಂದೆಯೆ ಬಿಎಸ್​ವೈ ಸಿಎಂ ಆಗಬೇಕಿತ್ತು, ಆದ್ರೆ ಈಗ ಸಿಎಂ ಆಗುತ್ತಿದ್ದಾರೆ. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ರಾಜ್ಯದ ಶಾಪ ವಿಮೋಚನೆಯಾದಂತಾಗಿದೆ. ಮೈತ್ರಿ ಸರ್ಕಾರದ ಆಂತರಿಕ ಜಗಳದಿಂದ ಅಭಿವೃದ್ದಿ ಕುಂಠಿತವಾಗಿತ್ತು. ಆದರೆ, ಇದೀಗ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ನಡೆಸಲಿದೆ. ಅಲ್ಲದೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಸ್ಥಾಪಿಸುವ ಮೂಲಕ ದಕ್ಷಿಣ ಭಾರತದಲ್ಲಿ ದೊಡ್ಡ ಶಕ್ತಿಯೊಂದು ರೂಪಗೊಂಡಂತಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಮಾಸ್ತಗಿರಿಯಿಂದ ಸಿಎಂ ಹುದ್ದೆಯವರೆಗೆ; 1970-2019 ಯಡಿಯೂರಪ್ಪ ಸವೆಸಿದ ಅತಿರಂಜಕ ರಾಜಕೀಯ ಪಯಣ!

First published:July 26, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading