ಭೀಕರ ಪ್ರವಾಹ: ಬೆಳಗಾವಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಮನವಿ ಮಾಡಲಿದೆ. ಈ ಪ್ರಸ್ತಾವ ಆಧರಿಸಿ ನಾವು ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ. ಬಳಿಕ ನಮ್ಮ ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದರು.

news18
Updated:August 25, 2019, 7:01 PM IST
ಭೀಕರ ಪ್ರವಾಹ: ಬೆಳಗಾವಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ
ಬೆಳಗಾವಿ ಪ್ರವಾಹ ಸಂತ್ರಸ್ಥರು
  • News18
  • Last Updated: August 25, 2019, 7:01 PM IST
  • Share this:
ಬೆಂಗಳೂರು(ಆಗಸ್ಟ್​​​.25): ಭೀಕರ ಪ್ರವಾಹಕ್ಕೆ ತತ್ತರಿಸಿ ಹೋಗಿರುವ ಬೆಳಗಾವಿ ಜಿಲ್ಲೆಗೆ ಇಂದು ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು. ಇಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚಾರ ನಡೆಸಿದ ತಂಡ ಎಷ್ಟು ಪ್ರಮಾಣದ ಹಾನಿ ಸಂಭವಿಸಿದೆ ಎಂದು ಪರಿಶೀಲಿಸಿತು. ಜತೆಗೆ ನೆರೆ ಸಂತ್ರಸ್ತರಿಗೆ ಸದ್ಯದಲ್ಲೇ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಭರವಸೆ ನೀಡಿದರು.

ಗೃಹ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ್​​ ನೇತೃತ್ವದಲ್ಲಿ 7 ಅಧಿಕಾರಿಗಳು ತಂಡ ಮೊದಲ ದಿನವೇ ಬೆಳಗಾವಿಯ ನೆರೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಶೀಲಿಸಿದೆ. ಈ ಭೀಕರ ಪ್ರವಾಹದಿಂದ ಜಿಲ್ಲೆ ಅಧೋಗತಿಗೆ ತಲುಪಿದೆ. ಕಬ್ಬಿನ ಬೆಳೆಯೂ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದೆ. ಸುಧಾರಣೆಗಾಗಿ ಸಾಕಷ್ಟು ಸಮಯ ಬೇಕಾಗಬಹುದು ಎಂದು ಪ್ರಕಾಶ್​​ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಮನವಿ ಮಾಡಲಿದೆ. ಈ ಪ್ರಸ್ತಾವ ಆಧರಿಸಿ ನಾವು ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ. ಬಳಿಕ ನಮ್ಮ ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ ಎಂದರು.

ಇದನ್ನೂ ಓದಿ: ಕಾಶ್ಮೀರಿಗಳ ಹಕ್ಕು ಕಸಿದುಕೊಳ್ಳುವುದು ದೇಶದ್ರೋಹಕ್ಕಿಂತ ದೊಡ್ಡ ಕೃತ್ಯ; ಕೇಂದ್ರದ ವಿರುದ್ಧ ಪ್ರಿಯಾಂಕಾ ಕಿಡಿ

ಇನ್ನು ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಪ್ರಕಾಶ್ ನೇತೃತ್ವದ ತಂಡದಲ್ಲಿ ಎಫ್.ಸಿ.ಡಿ ನಿರ್ದೇಶಕರಾದ ಎಸ್.ಸಿ ಮೀನಾ, ಕೃಷಿ ಮತ್ತು ರೈತರ ಸಹಕಾರ ಇಲಾಖೆಯ ಜಂಟಿ ನಿರ್ದೇಶಕ ಡಾ. ಪುನ್ನುಸ್ವಾಮಿ, ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅಧೀಕ್ಷ ಎಂಜಿನಿಯರ್ ಜಿತೇಂದ್ರ ಪನ್ವಾರ್, ಕೇಂದ್ರ ರಸ್ತೆ ಸಾರಿಗೆ ಇಲಾಖೆಯ ವಿಜಯಕುಮಾರ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಮಾಣಿಕ್ ಚಂದ್ರ ಪಂಡಿತ್, ಕೇಂದ್ರ ಇಂಧನ ಇಲಾಖೆಯ ಉಪ ನಿರ್ದೇಶಕ ಓ.ಪಿ ಸುಮನ್ ತಂಡದಲ್ಲಿದ್ದರು ಎನ್ನಲಾಗಿದೆ.

ಉತ್ತರ ಕರ್ನಾಟಕ ಪ್ರವಾಹಕ್ಕೆ ತತ್ತರಿಸಿದೆ. ಅದರಲ್ಲೂ ಬೆಳಗಾವಿ ಜಿಲ್ಲೆ ಬಹುತೇಕ ಮುಳುಗಡೆಯಾಗಿದೆ. ಉತ್ತರ ಭಾರತದಲ್ಲಿ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ದಟ್ಟವಾದ ಮೋಡಗಳ ಸಾಲು ಉಂಟಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಈ ಮಳೆಗೆ ಕರಾವಳಿ, ಮಲೆನಾಡು, ಬೆಳಗಾವಿ ಜಿಲ್ಲೆಗಳು ಅಧೋಗತಿಗೆ ತಲುಪಿವೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ-------------
First published: August 25, 2019, 6:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading