ನಾಳೆಯಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆ; ಪಾಸಿಟಿವ್ ವಿದ್ಯಾರ್ಥಿಗಳಿಗೂ ಎಕ್ಸಾಂ ಬರೆಯಲು ಅವಕಾಶ

ಇನ್ನು ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. 188 ಮಂದಿ ಅಂತಹ ವಿದ್ಯಾರ್ಥಿಗಳಿದ್ದು, ಅವರಿಗೆ ಗಡಿ ಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್,ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಕಾರಣಕ್ಕೆ ಈಗಾಗಲೇ ಅನೇಕ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲಿಯೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. 

news18-kannada
Updated:July 29, 2020, 8:56 PM IST
ನಾಳೆಯಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆ; ಪಾಸಿಟಿವ್ ವಿದ್ಯಾರ್ಥಿಗಳಿಗೂ ಎಕ್ಸಾಂ ಬರೆಯಲು ಅವಕಾಶ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು(ಜು.29): ನಾಳೆಯಿಂದ ಅಂದರೆ ಜುಲೈ 30 ಮತ್ತು 31ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಕೈಗೊಂಡ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಈ ಪರೀಕ್ಷೆಗೂ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆಯನ್ನು ಆಗಸ್ಟ್ 1ರಂದು ನಡೆಸಲಾಗುವುದು. ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯು ಬೆಳಗ್ಗೆ 10.30ರಿಂದ 11.50 ರವರೆಗೆ  ಹಾಗೂ ಮಧ್ಯಾಹ್ನ 2.30ರಿಂದ 3.30 ಗಂಟೆಯವರೆಗೆ ನಡೆಯಲಿದೆ.

ವೇಳಾಪಟ್ಟಿ ಹೀಗಿದೆ

30-7-2020 ರಂದು ಜೀವಶಾಸ್ತ್ರ - ಗಣಿತಶಾಸ್ತ್ರ

31-7-2020 ರಂದು ಭೌತಶಾಸ್ತ್ರ-ರಸಾಯನಶಾಸ್ತ್ರ

1-8-2020 ಕನ್ನಡ ಭಾಷಾ ಪರೀಕ್ಷೆ( ಬೆಂಗಳೂರು ಕೇಂದ್ರದಲ್ಲಿ ಮಾತ್ರ)

ಸಕಲ ಸಿದ್ಧತೆ ಮತ್ತು ಮುನ್ನೆಚ್ಚರಿಕೆ:ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಈಗಾಗಲೇ ಎಸ್‌ಒಪಿ (Standard operating procedure) ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ದೈಹಿಕ ಅಂತರವನ್ನು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಅಮೆರಿಕದಲ್ಲಿ ಕೇರಳ ನರ್ಸ್​​​ ಬರ್ಬರ ಹತ್ಯೆ; ಹೆಂಡತಿಗೆ ಚಾಕುವಿನಿಂದ ಇರಿದು ಕೊಂದ ಗಂಡ

ಪಾಸಿಟಿವ್ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

ಕೊರೋನಾ ಪಾಸಿಟಿವ್​ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುತ್ತದೆ. ಎಲ್ಲಾ ಕೇಂದ್ರಗಳ ಬಳಿ ಆ್ಯಂಬುಲೆನ್ಸ್ ಸೇರಿ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ.  ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ವತಿಯಿಂದ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.

ಕ್ವಾರಂಟೈನ್ ವಿನಾಯಿತಿ:

ಸಿಇಟಿ ಪರೀಕ್ಷೆ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜೊತೆಯಲ್ಲಿ ಬಂದಿರುವ ಪೋಷಕರಿಗೆ 4 ದಿನಗಳ ಕಾಲ ಕ್ವಾರಂಟೈನ್​​ನಿಂದ ವಿನಾಯಿತಿ ನೀಡಲಾಗಿದೆ.  ಅವರೂ ಕೂಡ ಎಲ್ಲಾ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ.

ಗಡಿನಾಡ ವಿದ್ಯಾರ್ಥಿಗಳಿಗೆ ಗಡಿಭಾಗದಲ್ಲೇ ಪರೀಕ್ಷೆ

ಇನ್ನು ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. 188 ಮಂದಿ ಅಂತಹ ವಿದ್ಯಾರ್ಥಿಗಳಿದ್ದು, ಅವರಿಗೆ ಗಡಿ ಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್,ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಕೋವಿಡ್ ಕಾರಣಕ್ಕೆ ಈಗಾಗಲೇ ಅನೇಕ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲಿಯೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಈಗಾಗಲೇ 1,30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್​​ಲೋಡ್ ಮಾಡಿಕೊಂಡಿದ್ದಾರೆ. ಎಲ್ಲ ಮಾಹಿತಿಯೂ ಆನ್​ಲೈನ್​ನಲ್ಲಿರುತ್ತದೆ.
Published by: Latha CG
First published: July 29, 2020, 8:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading