CET Exam 2020: ಸಿಇಟಿ ಪರೀಕ್ಷೆ ಬಗ್ಗೆ ಗೊಂದಲಗಳಿದ್ದರೆ ಈ ನಂಬರ್​ಗೆ ಕರೆ ಮಾಡಿ: 080 23460460, 080 23564583

KCET Exam 2020: ಸಿಇಟಿ ಪರೀಕ್ಷೆ ಸಂಬಂಧ ಏನೇ ಅನುಮಾನಗಳಿರಲಿ, ಗೊಂದಲವಿರಲಿ ಅಥವಾ ತೊಂದರೆ ಇದ್ದರೆ ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

news18-kannada
Updated:July 30, 2020, 8:18 AM IST
CET Exam 2020: ಸಿಇಟಿ ಪರೀಕ್ಷೆ ಬಗ್ಗೆ ಗೊಂದಲಗಳಿದ್ದರೆ ಈ ನಂಬರ್​ಗೆ ಕರೆ ಮಾಡಿ: 080 23460460, 080 23564583
ಸಾಂದರ್ಭಿಕ ಚಿತ್ರ
  • Share this:
Karnataka CET Exam 2020 | ಬೆಂಗಳೂರು(ಜು.30): ಇಂದಿನಿಂದ ಅಂದರೆ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇದು ಕೊರೋನಾ ಸಮಯವಾಗಿರುವುದರಿಂದ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ ತಯಾರಿಯಂತೆ ಈ ಸಿಇಟಿ ಪರೀಕ್ಷೆಗೂ ಸಿದ್ದತೆ ಮಾಡಿಕೊಳ್ಳಲಾಗಿದೆ. 

ಇನ್ನು, ಇಂದು ಮತ್ತು ನಾಳೆ ನಡೆಯಲಿರುವ ಸಿಇಟಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಅಥವಾ ಪೋಷಕರಿಗೆ ಯಾವುದೇ ಗೊಂದಲವಿದ್ದರೆ ಈ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

ಸಿಇಟಿ ಹೆಲ್ಪ್ ಲೈನ್: 080 23460460, 080 23564583

ಸಿಇಟಿ ಪರೀಕ್ಷೆ ಸಂಬಂಧ ಏನೇ ಅನುಮಾನಗಳಿರಲಿ, ಗೊಂದಲವಿರಲಿ ಅಥವಾ ತೊಂದರೆ ಇದ್ದರೆ ಈ ಮೇಲ್ಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Unlock 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ; ಅನ್​ಲಾಕ್​ 3 ಬಳಿಕ ಏನಿರುತ್ತೆ? ಏನಿರಲ್ಲ?

ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆ ಆಗಸ್ಟ್ 1ರಂದು ನಡೆಯಲಿದೆ. ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯು ಬೆಳಗ್ಗೆ 10.30ರಿಂದ 11.50 ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 3.30 ಗಂಟೆಯವರೆಗೆ ನಡೆಯಲಿದೆ.
ಪಾಸಿಟಿವ್ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

ಕೊರೋನಾ ಪಾಸಿಟಿವ್​ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುತ್ತದೆ. ಎಲ್ಲಾ ಕೇಂದ್ರಗಳ ಬಳಿ ಆ್ಯಂಬುಲೆನ್ಸ್ ಸೇರಿ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ವತಿಯಿಂದ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.
Published by: Latha CG
First published: July 29, 2020, 10:36 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading