• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • CET Exam ವೇಳೆಯೇ ಪ್ರಮಾಣವಚನ; ಮೋದಿ ಟೀಕಿಸಿದ್ದ ಸಿದ್ದುಗೆ ಬಿಎಲ್​ ಸಂತೋಷ್​ ಕೌಂಟರ್​!

CET Exam ವೇಳೆಯೇ ಪ್ರಮಾಣವಚನ; ಮೋದಿ ಟೀಕಿಸಿದ್ದ ಸಿದ್ದುಗೆ ಬಿಎಲ್​ ಸಂತೋಷ್​ ಕೌಂಟರ್​!

ಬಿಎಲ್ ಸಂತೋಷ್ ಟ್ವೀಟ್

ಬಿಎಲ್ ಸಂತೋಷ್ ಟ್ವೀಟ್

ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ, ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

 • News18 Kannada
 • 5-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections) ಸಂದರ್ಭದಲ್ಲಿ ಬೆಂಗಳೂರಿನಲ್ಲಿ (Bengaluru) ಬೃಹತ್ ರೋಡ್ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ಟೀಕಿಸಿ ಟ್ವೀಟ್​ ಮಾಡಿದ್ದ ನಿಯೋಜಿತ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh)​ ತಿರುಗೇಟು ನೀಡಿದ್ದಾರೆ. ನರೇಂದ್ರ ಮೋದಿ ನಡೆಸಿದ್ದ ರೋಡ್ ಶೋ (Roadshow) ವೇಳೆ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿ ಬಹಳ ದಿನ ಕಳೆದೇ ಇಲ್ಲ, ಆದರೆ ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ (Bengaluru) ಸಿಇಟಿ ಪರೀಕ್ಷೆಗಳು ಇವೆ. ಹೀಗಿರುವಾಗ ವಿದ್ಯಾರ್ಥಿಗಳಿಗೆ (Students) ತೊಂದರೆ ಯಾಗದಂತೆ ನಿಮ್ಮ ಕಾರ್ಯಕ್ರಮ ವನ್ನು ಒಂದು ದಿನ ಅಥವಾ ಎರಡು ದಿನಕ್ಕೆ ಮುಂದೂಡಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.


ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಪ್ರಶ್ನೆ ಮಾಡಿರುವ ಬಿಎಲ್​ ಸಂತೋಷ್ ಅವರು, ನಮ್ಮ ನಿಯೋಜಿತ ಸಿಎಂ ಈ ಟ್ವೀಟ್ ಮಾಡಿ ಹಲವು ದಿನಗಳು ಕಳೆದಿಲ್ಲ. ನಾಳೆ ರಾಜ್ಯ ಮತ್ತು ಬೆಂಗಳೂರಿನಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ನಿಮ್ಮ ಪ್ರಮಾಣ ವಚನ ಸ್ವೀಕಾರವನ್ನು ಒಂದು ಅಥವಾ ಎರಡು ದಿನ ಮುಂದೂಡಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್​​ನಲ್ಲಿ ಏನಿತ್ತು?


ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ? ಎಂದು ಬರೆದುಕೊಂಡಿದ್ದರು.


ಬಿಎಲ್ ಸಂತೋಷ್ ಟ್ವೀಟ್


ಇನ್ನು, ನಾಳಿನ ಸಿಇಟಿ ಪರೀಕ್ಷೆಗಳ ಕುರಿತಂತೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್​ ಅವರು, ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ‌ ಸಮಾರಂಭ ಇರುವ ಕಾರಣ ಸುತ್ತಮುತ್ತಲಿನ ಸಿಇಟಿ ಪರೀಕ್ಷಾ ಕೇಂದ್ರ ತಲುಪಬೇಕಿರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.


ಬೆಳಗ್ಗೆ 9.30ರೊಳಗೆ ಪರೀಕ್ಷಾ ಕೇಂದ್ರ ತಲುಪಿ, ಆಯ್ದ ಕೇಂದ್ರಗಳಲ್ಲಿ ಮಧ್ಯಾಹ್ನ ಪರೀಕ್ಷೆ ಬರೆಯುವವರಿಗೆ ಊಟದ ವ್ಯವಸ್ಥೆ ಮಾಡುವಂತೆ ವ್ಯವಸ್ಥಾಪಕ ಮಂಡಳಿಗೆ ತಿಳಿಸಲಾಗಿದೆ. ಯಾವುದೇ ಸಹಾಯ ಬೇಕಿದ್ದರೂ ಪೊಲೀಸರನ್ನು ಸಂಪರ್ಕಿಸಿ ಎಂದು ಮನವಿ ಮಾಡಿದ್ದಾರೆ.

First published: