HOME » NEWS » State » CHAMARAJANAGAR DISTRICT ADMINISTRATIVE APPOINT A MEMBERS FOR CREATING AWARENESS ABOUT CORONAVIRUS AT TOURIST PLACES NCHM LG

ಪ್ರವಾಸಿ ತಾಣಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಪ್ರವಾಸಿ ಮಿತ್ರರನ್ನು ನೇಮಿಸಿದ ಚಾಮರಾಜನಗರ ಜಿಲ್ಲಾಡಳಿತ

ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಜರ್, ಸೋಪು ಬಳಸಬೇಕು ಎಂಬ ಬಗ್ಗೆ ವ್ಯಾಪಕವಾಗಿ ಪ್ರವಾಸಿ ಮಿತ್ರರು ಪ್ರವಾಸಿಗರಿಗೆ ಜಾಗೃತಿ ಮೂಡಿಸಲಿದ್ದಾರೆ. 

news18-kannada
Updated:April 10, 2021, 11:25 AM IST
ಪ್ರವಾಸಿ ತಾಣಗಳಲ್ಲಿ ಕೊರೋನಾ ಜಾಗೃತಿ ಮೂಡಿಸಲು ಪ್ರವಾಸಿ ಮಿತ್ರರನ್ನು ನೇಮಿಸಿದ ಚಾಮರಾಜನಗರ ಜಿಲ್ಲಾಡಳಿತ
ಚಾಮರಾಜನಗರ ಜಿಲ್ಲಾಡಳಿತ
  • Share this:
ಚಾಮರಾಜನಗರ (ಏ. 10): ಚಾಮರಾಜನಗರ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗತೊಡಗಿವೆ. ಒಂದು ವಾರದ ಹಿಂದಷ್ಟೇ ಕೇವಲ ಬೆರಣಿಕೆಯಷ್ಟಿದ್ದ ಕೋರೋನಾ ಸೋಂಕಿತರ ಸಂಖ್ಯೆ ಇದೀಗ 200 ಗಡಿ ದಾಟಿದೆ. ಈ ಹಿನ್ನಲೆಯಲ್ಲಿ ಕೋವಿಡ್-19 ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಹಲವಾರು ಕ್ರಮಗಳಿಗೆ ಮುಂದಾಗಿರುವ ಚಾಮರಾಜನಗರ ಜಿಲ್ಲಾಡಳಿತ ಜಿಲ್ಲೆಯಲ್ಲಿರುವ  ಪ್ರವಾಸಿ ತಾಣಗಳಲ್ಲಿಯೂ ಪ್ರವಾಸಿಗರಿಗೆ ಕೋವಿಡ್ ಕುರಿತು ಜಾಗೃತಿ ಮೂಡಿಸಲು ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರರನ್ನು ಸಜ್ಜುಗೊಳಿಸಿದೆ. 

ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಹಲವಾರು ಪ್ರವಾಸಿ ತಾಣಗಳಲ್ಲಿ ಈಗಾಗಲೇ ಪ್ರವಾಸಿಗರಿಗೆ ಮಾಹಿತಿ ನೀಡುವ ಸಲುವಾಗಿ ನಿಯೋಜನೆಗೊಂಡಿರುವ ಪ್ರವಾಸಿ ಮಿತ್ರರನ್ನು ಬಳಸಿಕೊಂಡು ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ಕೋವಿಡ್ ಶಿಷ್ಟಾಚಾರ ಪಾಲನೆ ಬಗ್ಗೆ ಜಾಗೃತಿ ಉಂಟುಮಾಡುವ ವಿನೂತನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ

ಹೆಚ್ಚು ಜನರು ಭೇಟಿ ನೀಡುವ ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣಗಳು ಹಾಗೂ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರವಾಸಿಗರಿಗೆ ಕ್ಷೇತ್ರ ಕುರಿತು ಸಮಗ್ರ ಪರಿಚಯ ಮಾಡಿಸುವ ಪ್ರವಾಸಿ ಮಿತ್ರರಿಂದಲೇ ಪ್ರವಾಸಿಗರಿಗೆ ಕೋವಿಡ್-19 ಬಗ್ಗೆ ತಿಳುವಳಿಕೆ, ಜಾಗೃತಿ ಮೂಡಿಸುವ ಕಾರ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ  ಆದೇಶ ಹೊರಡಿಸಿದ್ದಾರೆ.

Coronavirus Updates: ದೇಶದಲ್ಲಿ ಒಂದೇ ದಿನ ಒಂದೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ಶಿವನ ಸಮುದ್ರದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನ, ದರ್ಗಾ, ಕೆ.ಗುಡಿ, ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನ, ಬಿಳಿಗಿರಿರಂಗನ ಬೆಟ್ಟ, ಬಂಡೀಪುರ, ಹಿಮವದ್ ಗೋಪಾಲ ಸ್ವಾಮಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ, ಚಾಮರಾಜೇಶ್ವರ ದೇವಾಲಯದಂತಹ ಸ್ಥಳಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಕೋವಿಡ್ ನಿಯಂತ್ರಣಕ್ಕೆ ಪಾಲನೆ ಮಾಡಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರವಾಸಿ ಮಿತ್ರರು ಅರಿವು ಉಂಟು ಮಾಡಲಿದ್ದಾರೆ.

ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ಕೋವಿಡ್ ಹರಡುವಿಕೆಯನ್ನು ತಡೆಯಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಜರ್, ಸೋಪು ಬಳಸಬೇಕು ಎಂಬ ಬಗ್ಗೆ ವ್ಯಾಪಕವಾಗಿ ಪ್ರವಾಸಿ ಮಿತ್ರರು ಪ್ರವಾಸಿಗರಿಗೆ ಜಾಗೃತಿ ಮೂಡಿಸಲಿದ್ದಾರೆ.
ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಹಲವಾರು ವಿಶ್ವ ವಿಖ್ಯಾತ ಪ್ರವಾಸಿ ತಾಣಗಳು ಜಿಲ್ಲೆಯಲ್ಲಿವೆ. ಅಲ್ಲದೇ ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಪ್ರಸಿದ್ದ ಯಾತ್ರಾ ಕ್ಷೇತ್ರಗಳು ಇಲ್ಲಿವೆ. ಪ್ರಸ್ತುತ ಇರುವ ಕೋವಿಡ್ ಸಂದರ್ಭದಲ್ಲಿ ಪ್ರವಾಸಿಗರು ಹಾಗೂ ಭಕ್ತಾಧಿಗಳ ಆರೋಗ್ಯ ರಕ್ಷಣೆಯನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯಲು ಪಾಲಿಸಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರವಾಸಿಗರಿಗೆ ಹಾಗೂ ಭಕ್ತಾಧಿಗಳಿಗೆ ಮಾಹಿತಿ ಮಾರ್ಗದರ್ಶನ ಮಾಡಲು 20 ಪ್ರವಾಸಿ ಮಿತ್ರರು ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ  ತಿಳಿಸಿದ್ದಾರೆ.
Published by: Latha CG
First published: April 10, 2021, 11:25 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories