HOME » NEWS » State » CHAMARAJANAGAR OXYGEN CRISIS CM BS YEDIYURAPPA CALL A URGENT CABINET MEETING TOMORROW LG

Chamarajanagar Oxygen Crisis: ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ; ಮಹತ್ವದ ನಿರ್ಧಾರ ಸಾಧ್ಯತೆ

ಎಲ್ಲಾ ಸ್ಟೀಲ್ ಕಂಪನಿಗಳ ಉತ್ಪಾದನೆ ಸ್ಥಗಿತ ಮಾಡಿ ಆಕ್ಸಿಜನ್ ಪಡೆಯಲು ನಿರ್ಧಾರ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ  ನಾಳೆ ಸರ್ಕಾರದಿಂದ ಮಹತ್ವದ ನಿರ್ಧಾರ ಪ್ರಕಟವಾಗಲಿದೆ. ನಾಳೆ ಸಂಜೆ 4 ಗಂಟೆಗೆ ಸಿಎಂ ಬಿಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. 

news18-kannada
Updated:May 3, 2021, 12:50 PM IST
Chamarajanagar Oxygen Crisis: ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ; ಮಹತ್ವದ ನಿರ್ಧಾರ ಸಾಧ್ಯತೆ
ಸಿಎಂ ಬಿಎಸ್ ಯಡಿಯೂರಪ್ಪ.
  • Share this:
ಬೆಂಗಳೂರು(ಮೇ 03): ಇಂದು ರಾಜ್ಯದಲ್ಲಿ ಅತೀ ದೊಡ್ಡ ದುರಂತವೊಂದು ಸಂಭವಿಸಿದೆ. ಚಾಮರಾಜನಗರ ಕೋವಿಡ್​ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕೊರೋನಾ ಬಿಕ್ಕಟ್ಟಿನಿಂದಾಗಿ ಆಕ್ಸಿಜನ್​ ಕೊರತೆ ಎದುರಾಗಿದೆ. ಪ್ರಾಣವಾಯು ಸಿಗದೇ ಸುಮಾರು 24 ಜನರು ಪ್ರಾಣಬಿಟ್ಟಿದ್ದಾರೆ. ಈ ಘಟನೆಗೆ ಇಡೀ ರಾಜ್ಯವೇ ಮಮ್ಮುಲ ಮರುಗಿದೆ. ಘಟನೆ ಕುರಿತಾಗಿ ಸಿಎಂ ಬಿಎಸ್​ ಯಡಿಯೂರಪ್ಪ ಚಾಮರಾಜನಗರ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ನಾಳೆ ತುರ್ತು ಸಂಪುಟ ಸಭೆಯನ್ನು ಕರೆದಿರುವ ಸಿಎಂ ಬಿಎಸ್​ವೈ, ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಆಕ್ಸಿಜನ್​ ಕೊರತೆಯಿಂದಾಗಿ ರಾಜ್ಯದಲ್ಲಿ ಅತೀ ಹೆಚ್ಚು ಸಾವು ಸಂಭವಿಸಿದ ಹಿನ್ನೆಲೆ ಈ ಸಚಿವ ಸಂಪುಟ ಸಭೆ ಕರೆಯಲಾಗಿದೆ.  ಆಯಾ ಜಿಲ್ಲಾ ಉಸ್ತುವಾರಿಗಳು ಜಿಲ್ಲೆಯಲ್ಲೇ ಠಿಕಾಣಿ ಹೂಡಲು ಸಿಎಂ ನಾಳೆ ಸಂಪುಟ ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಜೊತೆಗೆ ಒಂದು ತಿಂಗಳ ಮಟ್ಟಿಗೆ ಕೈಗಾರಿಕೆ ಬಳಕೆಗೆ ಆಕ್ಸಿಜನ್ ಸ್ಥಗಿತ ಮಾಡಿ ವೈದ್ಯಕೀಯ ಬಳಕೆಗೆ ಆದೇಶ ಮಾಡುವ ಸಾಧ್ಯತೆಯೂ ದಟ್ಟವಾಗಿದೆ.  ಈ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಸಚಿವ ಸುಧಾಕರ್​, ಚಾಮರಾಜನಗರ ಡಿಸಿ ವಿರುದ್ಧ ಸಿಎಂ ಕೆಂಡಾಮಂಡಲ; ಆರೋಗ್ಯಾಧಿಕಾರಿಗಳ ನಿರ್ಲಕ್ಷ್ಯ ಸಹಿಸಲ್ಲ ಎಂದ ಬಿಎಸ್​ವೈ

ಎಲ್ಲಾ ಸ್ಟೀಲ್ ಕಂಪನಿಗಳ ಉತ್ಪಾದನೆ ಸ್ಥಗಿತ ಮಾಡಿ ಆಕ್ಸಿಜನ್ ಪಡೆಯಲು ನಿರ್ಧಾರ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ  ನಾಳೆ ಸರ್ಕಾರದಿಂದ ಮಹತ್ವದ ನಿರ್ಧಾರ ಪ್ರಕಟವಾಗಲಿದೆ. ನಾಳೆ ಸಂಜೆ 4 ಗಂಟೆಗೆ ಸಿಎಂ ಬಿಎಸ್​ ಯಡಿಯೂರಪ್ಪನವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.ಆರೋಗ್ಯ ಸಚಿವ ಡಾ.ಸುಧಾಕರ್​, ಚಾಮರಾಜನಗರ ಜಿಲ್ಲಾಡಳಿತದ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಕೆಂಡಾಮಂಡಲರಾಗಿದ್ದಾರೆ. ಆಂತರಿಕ ತನಿಖೆಗೆ ಸೂಚನೆ ನೀಡಿರುವ ಸಿಎಂ, ಘಟನೆ ಕುರಿತಾಗಿ ವರದಿಯನ್ನೂ ಕೇಳಿದ್ದಾರೆ. ಜೊತೆಗೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಯಡಿಯೂರಪ್ಪ ಕಿಡಿಕಾರಿದರು. ಚಾಮರಾಜನಗರ ಡಿಸಿ ಡಾ.ಎಂ.ಆರ್​.ರವಿಗೆ ಬಿಎಸ್​ವೈ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟೇ ಅಲ್ಲದೇ, ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರನ್ನೂ ತರಾಟೆಗೆ ತೆಗೆದುಕೊಂಡು, ಇನ್ನೊಂದು ಗಂಟೆಯೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
Youtube Video

ಈ ದುರಂತದ ಬಗ್ಗೆ ವಿಪಕ್ಷ ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವೇ ಈ ದುರಂತಕ್ಕೆ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಂಸದ ಧ್ರುವ ನಾರಾಯಣ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಉಸ್ತುವಾರಿ ಸಚಿವ ಎಸ್​.ಸುರೇಶ್​ ಕುಮಾರ್ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಅಸಮಾಧಾನದ ಮಾತುಗಳು ಕೇಳಿ ಬರುತ್ತಿವೆ.
Published by: Latha CG
First published: May 3, 2021, 12:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories