ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಚಾಮರಾಜನಗರದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೆ ತರಗತಿ ವಿದ್ಯಾರ್ಥಿನಿ ಅಪೂರ್ವ ಹಾಗೂ ಯಳಂದೂರಿನಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಅರ್ಫತ್ ಪ್ರಬಂಧ ಬರೆದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ

G Hareeshkumar | news18-kannada
Updated:January 9, 2020, 5:06 PM IST
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಚಾಮರಾಜನಗರದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಅರ್ಫತ್ ಹಾಗೂ ಅಪೂರ್ವ
  • Share this:
ಚಾಮರಾಜನಗರ(ಜ.09) : ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಹಾಗು ಪರೀಕ್ಷಾ ಸಮಯದಲ್ಲಿ ಹೇಗೆಲ್ಲಾ ತಯಾರಿ ನಡೆಸಬೇಕು ಯಾವ ರೀತಿ ಪರೀಕ್ಷೆಗೆ ಸಿದ್ದರಾಗಬೇಕು ಎಂಬುದರ ಬಗ್ಗೆ ಸ್ಪತ: ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ  ಸಂವಾದ ನಡೆಸಲಿದ್ದಾರೆ.

ಜನವರಿ 20 ರಂದು ನವದೆಹಲಿಯಲ್ಲಿ ನಡೆಯುಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಗಡಿ ಜಿಲ್ಲೆ ಚಾಮರಾಜನಗರದಿಂದ ಇಬ್ಬರು ವಿದ್ಯಾರ್ಥಿಗಳು  ಆಯ್ಕೆಯಾಗಿದ್ದಾರೆ. ಸ್ವತ: ಪ್ರಧಾನಿ ನರೇಂದ್ರ ಮೋದಿಯವರೇ ನೇರವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಒಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೆ ತರಗತಿ ವಿದ್ಯಾರ್ಥಿನಿ ಅಪೂರ್ವ ಹಾಗೂ ಯಳಂದೂರಿನಲ್ಲಿರುವ ಆದರ್ಶ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿ ಅರ್ಫತ್ ಪ್ರಬಂಧ ಬರೆದು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ.

ಸ್ವತ: ಮೋದಿ ಅವರೊಡನೆ ಸಂವಾದ ನಡೆಸಲು ಖುಷಿಯಾಗುತ್ತಿದೆ. ದೇಶದ ಎಲ್ಲಾ ರಾಜ್ಯಗಳಲ್ಲು ಪ್ರಾಥಮಿಕ ಹಂತದಿಂದಲೇ ಏಕರೂಪ ಶಿಕ್ಷಣ ಪದ್ದತಿ ಜಾರಿಗೆ ತರುವಂತೆ ಪ್ರಧಾನಿಮೋದಿ ಅವರಲ್ಲಿ ಮನವಿ ಮಾಡುವುದಾಗಿ ಯಳಂದೂರಿನ ಅರ್ಫತ್ ಹೇಳುತ್ತಾರೆ.

ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರೂ ಅನಾರೋಗ್ಯ ಕಾರಣದಿಂದ ಭಾಗವಹಿಸಲು ಹಿಂಜರಿದಿದ್ದ ಗುಂಡ್ಲುಪೇಟೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಅಪೂರ್ವ ಇದೀಗ ತನ್ನ ನಿರ್ಧಾರ ಬದಲಿಸಿದ್ದಾಳೆ.

ಇದನ್ನೂ ಓದಿ :  ಪ್ರಧಾನಿಯೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಬಾಗಲಕೋಟೆ ವಿದ್ಯಾರ್ಥಿನಿ ಆಯ್ಕೆ

ಪ್ರಧಾನಿಯವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ ಹಾಗಾಗಿ  ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎನ್ನುವ ಅಪೂರ್ವ  ವಿದ್ಯಾರ್ಥಿಗಳಲ್ಲಿ ಕೃಷಿ ಬಗ್ಗೆ  ಆಸಕ್ತಿ ಕಡಿಮೆ ಯಾಗುತ್ತಿದೆ. ಹಾಗಾಗಿ ಶಿಕ್ಷಣದಲ್ಲಿ ಕೃಷಿಗೆ  ಆಧ್ಯತೆ ನೀಡುವಂತೆ  ಪ್ರಧಾನಿಮೋದಿ ಅವರ ಗಮನ ಸೆಳೆಯುವುದಾಗಿ ಅಪೂರ್ವ ಹೇಳುತ್ತಾಳೆ.ಜನವರಿ 20 ರಂದು ನವದೆಹಲಿಯಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ  ಹಿಂದುಳಿದ ಚಾಮರಾಜನಗರ ಜಿಲ್ಲೆಯಿಂದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

 (ವರದಿ : ಎಸ್ ಎಂ ನಂದೀಶ್)
First published:January 9, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ