ಇಂದಿನಿಂದ ಮಿನಿ ವಾಹನ ಸಂಚಾರಕ್ಕೆ ಚಾರ್ಮಾಡಿ ಘಾಟ್​ ಮುಕ್ತ; ಘನ ವಾಹನಗಳಿಗೆ ನಿಷೇಧ

ಈ ವರ್ಷ ಮಲೆನಾಡು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್​​ನಲ್ಲಿ ಪದೇ ಪದೇ ಭೂ ಕುಸಿತ ಉಂಟಾಗಿತ್ತು. ಹೀಗಾಗಿ ಆಗಸ್ಟ್​ ತಿಂಗಳಿಂದ ಚಾರ್ಮಾಡಿ ಘಾಟ್​​​ನಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿತ್ತು.

ಚಾರ್ಮಾಡಿ ಘಾಟ್

ಚಾರ್ಮಾಡಿ ಘಾಟ್

  • Share this:
ಮಂಗಳೂರು(ಡಿ.28): ಚಾರ್ಮಾಡಿ ಘಾಟ್​​ ರಸ್ತೆ ದುರಸ್ತಿ ಕಾಮಗಾರಿ ಹಿನ್ನೆಲೆ ಇಂದಿನಿಂದ ಘನ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.  ಮಿನಿ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. 

ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್​.ಆರ್​.ಟಿ.ಸಿ ಬಸ್​​ಗಳಿಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸುವ ಅವಕಾಶ ಕಲ್ಪಿಸಲಾಗಿದೆ. ಘನ ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.‌

‘ಕನ್ನಡ ಭಾಷೆ ಮತ್ತು ಸಂಸ್ಕೃತಿ ಗೌರವಿಸುವುದು ನಮ್ಮ ಜವಾಬ್ದಾರಿ‘: ಖಾಸಗಿ ಸಂಸ್ಥೆಗಳಿಗೆ ಹೈಕೋರ್ಟ್​​​ ಛೀಮಾರಿ

ಮುಂದಿನ ಆದೇಶದವರೆಗೂ ಪರ್ಯಾಯ ರಸ್ತೆ ಮೂಲಕ ತೆರಳಲು ನಿರ್ದೇಶನ ನೀಡಲಾಗಿದೆ. ಕಾರ್ಕಳ-ಸಂಸೆ-ಕುದುರೆಮುಖ ರಸ್ತೆ ಮತ್ತು ಶಿರಾಡಿ ರಸ್ತೆಗ ಮೂಲಕ ಪ್ರಯಾಣಿಕರು ತೆರಳಲು ಅವಕಾಶ ಮಾಡಲಾಗಿದೆ. ಚಾರ್ಮಾಡಿ ಘಾಟ್ ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿದೆ.

ಈ ವರ್ಷ ಮಲೆನಾಡು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್​​ನಲ್ಲಿ ಪದೇ ಪದೇ ಭೂ ಕುಸಿತ ಉಂಟಾಗಿತ್ತು. ಹೀಗಾಗಿ ಆಗಸ್ಟ್​ ತಿಂಗಳಿಂದ ಚಾರ್ಮಾಡಿ ಘಾಟ್​​​ನಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿ (ಲಘು) ವಾಹನಗಳ ಸಂಚಾರ ಆರಂಭವಾಗಿದೆ. ಆದರೆ ಯಾವುದೇ ಘನ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್​​ ಆದೇಶ ಹೊರಡಿಸಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದಾಗಿ ಜಾಗತಿಕವಾಗಿ ಕಳೆದ ನಾಲ್ಕು ವರ್ಷಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಬ್ಯಾಂಕ್​ ಉದ್ಯೋಗಿಗಳಿಗೆ ಗೇಟ್ ಪಾಸ್!

 

 
Published by:Latha CG
First published: