ಮತ್ತೆ ಪೆಟ್ರೋಲ್​​-ಡೀಸೆಲ್​​ ದರ ಇಳಿಕೆ: ಒಂದು ಲೀಟರ್​​ಗೆ ಎಷ್ಟು ಗೊತ್ತೇ?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​​ ಪೆಟ್ರೋಲ್​​ ಬೆಲೆ 72.65 ರೂ., ಡೀಸೆಲ್ ಬೆಲೆ ಲೀಟರ್​​ಗೆ 65.75 ರೂ. ಆಗಿದೆ ಎನ್ನಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್​​ ಲೀಟರ್​ ದರ 75.13 ರೂ., ಡೀಸೆಲ್​​ಗೆ 67.99 ರೂ.

news18-kannada
Updated:November 4, 2019, 3:42 PM IST
ಮತ್ತೆ ಪೆಟ್ರೋಲ್​​-ಡೀಸೆಲ್​​ ದರ ಇಳಿಕೆ: ಒಂದು ಲೀಟರ್​​ಗೆ ಎಷ್ಟು ಗೊತ್ತೇ?
ಪೆಟ್ರೋಲ್​- ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ನ.04): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ಇಳಿಕೆಯಾಗಿದೆ. ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ನಿನ್ನೆ ಪೆಟ್ರೋಲ್​ ದರ ಲೀಟರ್​​ಗೆ 2 ರೂ. ಮತ್ತು ಡೀಸೆಲ್ ಲೀಟರ್‌ಗೆ 1.50 ರೂ. ಕಡಿಮೆಯಾಗಿತ್ತು. ಇದೀಗ ಸೋಮವಾರ ಬೆಳಿಗ್ಗೆ ಪೆಟ್ರೋಲ್ ದರ ಲೀಟರ್‌ಗೆ 08-10 ಪೈಸೆ ಹಾಗೂ ಡೀಸೆಲ್ ದರ ಲೀಟರ್‌ಗೆ 03-05 ಪೈಸೆ ಕಡಿಮೆ ಆಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​​ ಪೆಟ್ರೋಲ್​​ ಬೆಲೆ 72.65 ರೂ., ಡೀಸೆಲ್ ಬೆಲೆ ಲೀಟರ್​​ಗೆ 65.75 ರೂ. ಆಗಿದೆ ಎನ್ನಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್​​ ಲೀಟರ್​ ದರ 75.13 ರೂ., ಡೀಸೆಲ್​​ಗೆ 67.99 ರೂ. ಇದೆ. ಹಾಗೆಯೇ ಕೊಲ್ಕತ್ತಾದಲ್ಲಿ ಪೆಟ್ರೋಲ್​​-ಡೀಸೆಲ್​​ ಬೆಲೆ ಕ್ರಮವಾಗಿ 75.37 ರೂ. ಮತ್ತು 68.16 ರೂ. ಆಗಿದೆ. ಅಲ್ಲದೇ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​​ಗೆ 78.33 ರೂ. ಮತ್ತು ಡೀಸೆಲ್​​ಗೆ 68.96 ರೂ. ಇದೆ. ಚೆನ್ನೈ ಪೆಟ್ರೋಲ್​ಗೆ 75.50 ರೂ., ಡೀಸೆಲ್​ ದರವೂ 69.50 ರೂ. ಕಡಿಮೆಯಾಗಿದೆ. ಅಂತೆಯೇ ಹೈದರಾಬಾದ್​ನಲ್ಲೂ ಪೆಟ್ರೋಲ್​​​ಗೆ ಲೀಟರ್​​ ಬೆಲೆ 77.31 ರೂ., ಡೀಸೆಲ್​​ ಬೆಲೆ 71.75 ರೂ. ಆಗಿದೆ.

ಈ ಹಿಂದೆ ಸೆಪ್ಟೆಂಬರ್​​ 14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಡ್ರೋನ್​​ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿಢೀರ್​​ ಏರಿಕೆಯಾಗಿತ್ತು. ತೈಲ ಪೂರೈಕೆಯಲ್ಲಿ ವ್ಯತ್ಯಯ ಕಾಣಿಸಿಕೊಂಡ ಕಾರಣದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಮೇಲೆ ಪರಿಣಾ ಬೀರಿತ್ತು. ಇದರಿಂದಲೇ ಬೆಲೆ ಏರಿಕೆ ಕಂಡಿತ್ತು.

ಇದನ್ನೂ ಓದಿ: ಸಾಲಬಾಧೆ ತಾಳಲಾರದೆ ಬಾಗಲಕೋಟೆ ರೈತ ಆತ್ಮಹತ್ಯೆ

ಇದೀಗ ಎಲ್ಲಾ ಸಮಸ್ಯೆಯೂ ಸರಿಪಡಿಸಲಾಗಿದೆ. ಕಚ್ಚಾ ತೈಲದ ಬೆಲೆಯೂ ತುಸು ಇಳಿಕೆಯಾಗಿದೆ. ಹಾಗಾಗಿ ಪೆಟ್ರೋಲ್‌ ಬೆಲೆಯೂ ಇಳಿಯುವ ನಿರೀಕ್ಷೆ ಹೆಚ್ಚಿದ ಎಂದು ಇಂಡಿಯನ್‌ ಆಯಿಲ್‌ನ ಅಧ್ಯಕ್ಷ ಸಂಜೀವ್‌ ಸಿಂಗ್‌ ಹೇಳಿದ್ದಾರೆ.

ಯಾಕೆ ಬೆಲೆ ಕಡಿಮೆ?: ಸುಮಾರು ದಿನಗಳಿಂದ ಪೆಟ್ರೋಲ್-ಡೀಸೆಲ್​​ ಬೆಲೆಗಳು ಇಳಿಕೆಯಾಗುತ್ತಿರವುದನ್ನು ನಾವು ಗಮನಿಸಬಹುದು. ಪೆಟ್ರೋಲ್ ಬೆಲೆ ಇಳಿಕೆಗೆ ಮಾಮೂಲಿಯಂತೆ ಕಾರಣವಾಗಿರುವುದು ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆಯಲ್ಲಿ ಆಗುತ್ತಿರುವ ಗಣನೀಯ ಇಳಿಕೆ. ಪ್ರಮುಖ ತೈಲ ಮಾರುಕಟ್ಟೆಯಾದ ಬ್ರೆಂಟ್ ಕ್ರೂಡ್​ನಲ್ಲಿ ಬ್ಯಾರೆಲ್ ತೈಲವು 59.23 ಡಾಲರ್​ಗೆ ಇಳಿಕೆಯಾಗಿದೆ. ಹಾಗೆಯೇ ಡಬ್ಲ್ಯೂಟಿಐ ಕ್ರೂಡ್​ನಲ್ಲಿನ ಬ್ಯಾರೆಲ್ ತೈಲವು 50.53 ಡಾಲರ್ ಆಗಿದೆ. ಮುಂದಿನ ಕೆಲ ದಿನಗಳವರೆಗೂ ಈ ತೈಲ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುವ ಸಂಭವವಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇನ್ನಷ್ಟು ಇಳಿಯುವ ಸಾಧ್ಯತೆ ಇದೆ.
-----------
First published: November 4, 2019, 3:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading