ಕಲಬುರ್ಗಿಯಿಂದ ಲೋಹದ ಹಕ್ಕಿ ಹಾರಾಟಕ್ಕೆ ಇಂದು ಸಿಎಂ ಯಡಿಯೂರಪ್ಪ ಚಾಲನೆ

ಕಲಬುರ್ಗಿಯ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳುತ್ತಿದೆ. ಆದರೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯದೇ ಇರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

news18-kannada
Updated:November 22, 2019, 9:27 AM IST
ಕಲಬುರ್ಗಿಯಿಂದ ಲೋಹದ ಹಕ್ಕಿ ಹಾರಾಟಕ್ಕೆ ಇಂದು ಸಿಎಂ ಯಡಿಯೂರಪ್ಪ ಚಾಲನೆ
ಕಲಬುರ್ಗಿ ವಿಮಾನ ನಿಲ್ದಾಣ
  • Share this:
ಕಲಬುರ್ಗಿ (ನ.22): ಕಲಬುರ್ಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಕಲಬುರ್ಗಿಯ ಸೇಡಂ ರಸ್ತೆಯಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣವನ್ನುಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಜನತೆಯ ಬಹು ದಿನಗಳ ಕನಸು ಕೊನೆಗೂ ನನಸಾಗಲಾರಂಭಿಸಿದೆ. ಲೋಹದ ಹಕ್ಕಿಯ ಹಾರಾಟಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ವಿಮಾನ ನಿಲ್ದಾಣದ ಎದುರಿಗಿನ ಪ್ರದೇಶದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಸ್ಟಾರ್ ಏರ್ಸ್ ವಿಮಾನದ ಮೂಲಕ ಆಗಮಿಸಲಿರುವ ಸಿಎಂ ಯಡಿಯೂರಪ್ಪ, ವಿಮಾನ ನಿಲ್ದಾಣ ಉದ್ಘಾಟಿಸಿ ಅದೇ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಜಗದೀಶ್ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತಿತರರು ಆಗಮಿಸಲಿದ್ದಾರೆ. ಪ್ರಧಾನಿ ಮೋದಿಯವರನ್ನೇ ಉದ್ಘಾಟನೆಗೆ ಕರೆತರಲು ಉದ್ದೇಶಿಸಲಾಗಿತ್ತು. ಆದರೆ ಚಳಿಗಾಲದ ಅಧಿವೇಷನ ನಡೆದಿರುವುದರಿಂದಾಗಿ ಪ್ರಧಾನಿಗಳು ಬರುತ್ತಿಲ್ಲ. ನನ್ನ ಕಾರಣಕ್ಕೆ ಕಾರ್ಯಾರಂಭ ವಿಳಂಬವಾಗಬಾರದು ಎಂದು ಪ್ರಧಾನಿಗಳು ಹೇಳಿರುವುದರಿಂದ ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದಾರೆ ಎಂದು ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ.

2008 ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಿದ್ದ ವೇಳೆ ಕಲಬುರ್ಗಿ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಗಳಿಗೆ ಶಿಲನ್ಯಾಸ ನೆರವೇರಿಸಲಾಗಿತ್ತು. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಲಬುರ್ಗಿ ವಿಮಾನ ನಿಲ್ದಾಣದ ಕಾಮಗಾರಿ ಮಾತ್ರ ಪೂರ್ಣಗೊಂಡಿದೆ. ಕಲ್ಯಾಣ ಕರ್ನಾಟಕದ ಜನತೆಯ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದ್ದು, ಲೋಹದ ಹಕ್ಕಿಯ ಬರುವಿಕೆಗಾಗಿ ಜನತೆ ಎದುರು ನೋಡುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯನ್ನು ಆಹ್ವಾನಿಸದೇ ಇರುವುದಕ್ಕೆ ಆಕ್ರೋಶ

ಕಲಬುರ್ಗಿಯ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳುತ್ತಿದೆ. ಆದರೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಯದೇ ಇರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಹಾಗೂ ಕಲಬುರ್ಗಿಗಳಲ್ಲಿ ಏಕ ಕಾಲಕ್ಕೆ ವಿಮಾನ ನಿಲ್ದಾಣಗಳ ಶಿಲನ್ಯಾಸ ನಡೆದಿತ್ತು. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಮಾತ್ರ ನಿರ್ಮಾಣಗೊಂಡೇ ಇಲ್ಲ. ಕಲಬುರ್ಗಿ ವಿಮಾನ ನಿಲ್ದಾಣ ಪೂರ್ಣಗೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅವರ ಇಚ್ಛಾಶಕ್ತಿಯೇ ಕಾರಣ.  ಹೀಗಿರಬೇಕಾದರೆ ಅವರನ್ನು ಆಹ್ವಾನಿಸುವ ಸೌಜನ್ಯ ತೋರಿಸದೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಬೂದಿಹಾಳ ಆರೋಪಿಸಿದ್ದಾರೆ.ಇದನ್ನೂ ಓದಿ : ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಎಎಐ ಅನುಮತಿ; ಲೋಹದ ಹಕ್ಕಿ ಹಾರಾಟಕ್ಕೆ ಕ್ಷಣಗಣನೆ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೂರ್ಣಗೊಂಡ ವಿಮಾನ ನಿಲ್ದಾಣವನ್ನು ಬಿಜೆಪಿ ನಾಯಕರು ಉದ್ಘಾಟಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
First published: November 22, 2019, 8:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading