ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ
ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರು (ಆಗಸ್ಟ್ 17); ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸ ಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿ ಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸಲಹೆ ನೀಡಲಾಯಿತು.
ಈ ನೀತಿ ಜಾರಿಗೆ ಕರ್ನಾಟಕ ರಾಜ್ಯ ಶಿಕ್ಷಣ ಆಯೋಗ ಮತ್ತು ಇತರ ಸಾಂಸ್ಥಿಕ ವ್ಯವಸ್ಥೆಯನ್ನು ಸ್ಥಾಪಿಸುವ ಕುರಿತೂ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಯಿತು. ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಸಲಹೆ ನೀಡಲಾಯಿತು. ರಾಜ್ಯದ ಜಿ ಇ ಆರ್ (Gross Enrollment Ratio) ಶೇ. 32 ರಷ್ಟು ಇದ್ದು, ಮುಂದಿನ ದಿನಗಳಲ್ಲಿ ಇದನ್ನು ಶೇ. 50 ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪೂರಕವಾಗಿ ಬಿ.ಎಡ್., ಡಿ.ಎಡ್. ಪಠ್ಯ ವಿಷಯವನ್ನು ಇನ್ನಷ್ಟು ಪರಿಣಾಮಕಾರಿಯಾಗುವಂತೆ ಪರಿಷ್ಕರಿಸಲು ಮುಖ್ಯಮಂತ್ರಿಗಳು ಸೂಚಿಸಿದರು.
ಯುವಕರು ಉದ್ಯೋಗ ಪಡೆದುಕೊಳ್ಳಲು ಅನುವಾಗುವಂತೆ ಜಿಲ್ಲೆಗೊಂದು ತಾಂತ್ರಿಕ ಶಿಕ್ಷಣ ಶಾಲೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯ್ಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣ ವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊ ಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾ ಜಿಕ ಅಂತರ ಕಾಯ್ದು ಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧ ದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿ ಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತ ರರಿಗೆ ಸೋಂಕು ಹಬ್ಬ ದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ