• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ನನಸಾಗಲಿದೆ ಕನಸು; 2021ಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟಕ್ಕೆ ಸಜ್ಜು: ಬಿಎಸ್​ ಯಡಿಯೂರಪ್ಪ

ನನಸಾಗಲಿದೆ ಕನಸು; 2021ಕ್ಕೆ ಶಿವಮೊಗ್ಗದಲ್ಲಿ ವಿಮಾನ ಹಾರಾಟಕ್ಕೆ ಸಜ್ಜು: ಬಿಎಸ್​ ಯಡಿಯೂರಪ್ಪ

ಕಾಮಗಾರಿ ವೀಕ್ಷಿಸಿದ ಸಿಎಂ ಬಿಎಸ್​ ಯಡಿಯೂರಪ್ಪ

ಕಾಮಗಾರಿ ವೀಕ್ಷಿಸಿದ ಸಿಎಂ ಬಿಎಸ್​ ಯಡಿಯೂರಪ್ಪ

ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕಲಿದೆ. ಈ ಭಾಗದಲ್ಲಿ  ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ.

  • Share this:

ಶಿವಮೊಗ್ಗ (ಅ.19): ಬಹುದಿನಗಳಿಂದ ಜಿಲ್ಲೆಯ ಜನರು ಕಾಯುತ್ತಿರುವ ವಿಮಾನ ನಿಲ್ದಾಣದ ಕನುಸು ಶೀಘ್ರದಲ್ಲಿಯೇ ಈಡೇರಲಿದೆ. ಈಗಾಗಲೇ ಕಾಮಗಾರಿ ಆರಂಭಿಸಿರುವ ಇಲ್ಲಿನ ವಿಮಾನ ನಿಲ್ದಾಣ 2021ಕ್ಕೆ ಹಾರಾಟಕ್ಕೆ ಸಜ್ಜುಗೊಳ್ಳುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಿಳಿಸಿದರು. ಇಂದು ತವರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಗೆ ಭೇಟಿ ನೀಡಿದ್ದ ಅವರು ಇದೇ ವೇಳೆ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ವೀಕ್ಷಿಸಿದರು. ಈ ವೇಳೆ ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,  ಆರಂಭದಲ್ಲಿ 2,500 ಮೀಟರ್ ರನ್ ವೇ  ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು.  ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ  ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ.  ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.


ಇಲ್ಲಿನ ವಿಮಾನ ನಿಲ್ದಾಣವನ್ನು ಕೇಂದ್ರ  ಸರ್ಕಾರದ  ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ  ಕೈಗೊಳ್ಳಲು ಸಾಧ್ಯವಾಗಲಿದೆ. ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ  ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.  ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕಲಿದೆ. ಈ ಭಾಗದಲ್ಲಿ  ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ. ಕೈಗಾರಿಕೆಗಳ ಆಗಮನದಿಂದ ಇಲ್ಲಿ ಉದ್ಯೋಗವಕಾಶಗಳು ಸಹ ಹೆಚ್ಚಲಿದೆ ಎಂದರು.


ಇದನ್ನು ಓದಿ: ಕೋವಿಡ್​, ಪ್ರವಾಹದಿಂದ ರಾಜ್ಯದ ಅಭಿವೃದ್ಧಿ ನಿಲ್ಲಬಾರದು; ಸಿಎಂ ಬಿಎಸ್​ ಯಡಿಯೂರಪ್ಪ


ಸಿಎಂ ಯಡಿಯೂರಪ್ಪನವರ ಕನಸಿನ ಕೂಸಾಗಿರುವ ಈ ವಿಮಾನ ನಿಲ್ದಾಣವನ್ನು 2008 ರಲ್ಲಿ ಅವರು ಸಿಎಂ ಆಗಿದ್ದ ವೇಳೆಯೇ ಆರಂಭಿಸಲಾಗಿತ್ತು. ಆದರೆ ಕೆಲವಾರು ತಾಂತ್ರಿಕ ಕಾರಣಗಳಿಂದ ಈ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಮತ್ತೇ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುತ್ತಿದಂತೆ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ಸಿಕ್ಕಿದೆ.


ಲೂಕಿನ ಸೋಗಾನೆ ಯಲ್ಲಿ 220ಕೋಟಿ ರೂ. ವೆಚ್ಚದಲ್ಲಿ 662.38 ಎಕ್ರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ಎರಡು ಹಂತದಲ್ಲಿ ನಡೆಯುತ್ತಿರುವ ಈ ಯೋಜನೆ ಆದಷ್ಟು ಬೇಗ ಮುಗಿಯಲಿ ಎಂಬುದು ಸಿಎಂ ಸೇರಿದಂತೆ ಇಲ್ಲಿನವರ ಕನಸಾಗಿದೆ. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ವೇಳೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾದಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು  ಉಪಸ್ಥಿತರಿದ್ದರು.

top videos
    First published: