HOME » NEWS » State » CHIKKABALLAPUR BLAST KARNATAKA CHIEF MINISTER BS YEDIYURAPPA ORDERS PROBE ON CHIKKABALLAPUR GELATIN BLAST SCT

Chikkaballapur Blast: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಚಿವ ಸುಧಾಕರ್ ನೇರ ಹೊಣೆ; ಕಾಂಗ್ರೆಸ್ ಆರೋಪ

Chikkaballapur Blast: ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ನೇರ ಆರೋಪ ಮಾಡಿದೆ.

Sushma Chakre | news18-kannada
Updated:February 23, 2021, 10:30 AM IST
Chikkaballapur Blast: ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಚಿವ ಸುಧಾಕರ್ ನೇರ ಹೊಣೆ; ಕಾಂಗ್ರೆಸ್ ಆರೋಪ
ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಡಾ. ಕೆ. ಸುಧಾಕರ್
  • Share this:
ಬೆಂಗಳೂರು (ಫೆ. 23): ಶಿವಮೊಗ್ಗದ ಭದ್ರಾವತಿ ಬಳಿ ಜಿಲೆಟಿನ್ ಸ್ಫೋಟಗೊಂಡ ದುರಂತ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅದೇ ರೀತಿಯ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟಗೊಂಡು 6 ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆಯ ಬಗ್ಗೆ ಟ್ವೀಟ್ ಮಾಡಿ, ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ಈ ಪ್ರಕರಣದ ತನಿಖೆ ನಡೆಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ನಿನ್ನೆ ರಾತ್ರಿ 12.30ಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಟೀಕಿಸಿರುವ ಕಾಂಗ್ರೆಸ್, ಈ ದುರಂತಕ್ಕೆ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಶಿವಮೊಗ್ಗದ ಜಿಲೆಟಿನ್ ಸ್ಫೋಟದ ಆಘಾತ ಮಾಸುವ ಮೊದಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇದು ಬಹಳ ಆಘಾತಕಾರಿಯಾದ ಸಂಗತಿ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.


ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟದ ನಂತರವೂ ಎಚ್ಚೆತ್ತುಕೊಳ್ಳದ ಸರ್ಕಾರ ಅಕ್ರಮ ಕಲ್ಲು ಕ್ವಾರಿಗಳಿಗೆ, ಅಕ್ರಮ ಸ್ಫೋಟಕಗಳಿಗೆ ಕಡಿವಾಣ ಹಾಕುವ ಬದಲು ಬೆಂಬಲವಾಗಿ ನಿಂತಿದೆ. ಇದರ ಪರಿಣಾಮವಾಗಿ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಸಂಭವಿಸಿದೆ. ಶಿವಮೊಗ್ಗದಂತೆ ಇಲ್ಲೂ ಅಕ್ರಮಗಳ ಹಿಂದೆ ಬಿಜೆಪಿಗರೇ ಇದ್ದಾರೆ. ಈ ದುರಂತಕ್ಕೆ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ನೇರ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ನೇರ ಆರೋಪ ಮಾಡಿದೆ.



ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತದ ಹಿನ್ನೆಲೆ ಪ್ರಕರಣದ ಕುರಿತು ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ 6 ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.



ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಟ್ವಿಟ್ಟರ್​ನಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಜಿಲೆಟಿನ್ ದುರಂತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಮೂವರ ಆರೋಗ್ಯ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಭಾರೀ ಸ್ಫೋಟದಿಂದ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ. 6 ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಭ್ರಮರವಾಸಿನಿ ಕ್ರಷರ್​ನಿಂದ ಒಂದೂವರೆ ಕಿ.ಮೀ. ದೂರದ ಕಾಡಿನಲ್ಲಿ ಈ ಜಿಲೆಟಿನ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಗಂಗಾಧರ್, ವಾಚ್​ಮನ್ ಮಹೇಶ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ.
Published by: Sushma Chakre
First published: February 23, 2021, 10:29 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories