ಬೆಂಗಳೂರು (ಡಿ. 9): 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಸಮಗ್ರ ಚಿತ್ರಣ ಇಂದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ. ಈಗಾಗಲೇ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದೆ. ತಮ್ಮ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರನ್ನು 13 ಕ್ಷೇತ್ರಗಳಲ್ಲಿ ಅಖಾಡಕ್ಕಿಳಿಸಿದ್ದ ಬಿಜೆಪಿ ನಾಯಕರು ಸಮಾಧಾನ ನಿಟ್ಟುಸಿರುವ ಬಿಡುತ್ತಿದ್ದಾರೆ. 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳು ತಲಾ 1 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಯಲ್ಲಾಪುರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಭರ್ಜರಿ ಗೆಲುವಿನ ನಗು ಬೀರಿದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಗೆಲುವು ಬಹುತೇಕ ಖಚಿತವಾಗಿದೆ. ಚಿಕ್ಕಬಳ್ಳಾಪುರದಲ್ಲಿ 12ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ 20,344 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ನಂದಿ ಎಂ. ಅಂಜಿನಪ್ಪ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್. ರಾಧಾಕೃಷ್ಣ ಅವರನ್ನು ಹಿಂದಿಕ್ಕಿ ಡಾ. ಕೆ. ಸುಧಾಕರ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.
Karnataka By Election Results 2019: ಯಲ್ಲಾಪುರದಲ್ಲಿ ಗೆಲುವಿನ ನಗು ಬೀರಿದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್
2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಡಾ. ಕೆ. ಸುಧಾಕರ್ 82,006 ಮತಗಳನ್ನು ಪಡೆದುಕೊಂಡಿದ್ದರು. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಭಾರೀ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಡಾ. ಕೆ. ಸುಧಾಕರ್ ಗೆಲುವು ಬಹುತೇಕ ನಿಶ್ಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈಗಾಗಲೇ 31,875 ಮತಗಳ ಅಂತರದಿಂದ ಶಿವರಾಮ್ ಹೆಬ್ಬಾರ್ ಯಲ್ಲಾಪುರದಲ್ಲಿ ಗೆಲುವು ಸಾಧಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ