HOME » NEWS » State » CHIKKABALLAPUR CONGRESS AND JDS LEADERS JOINING BJP AMID OF GRAMA PANCHAYAT ELECTION NKCKB SCT

ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷಾಂತರ ಪರ್ವ; ಭಾರೀ ಸಂಖ್ಯೆಯಲ್ಲಿ ಜೆಡಿಎಸ್, ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ

ಸಚಿವ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾರೋಬಂಡೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. 

news18-kannada
Updated:December 12, 2020, 8:14 AM IST
ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷಾಂತರ ಪರ್ವ; ಭಾರೀ ಸಂಖ್ಯೆಯಲ್ಲಿ ಜೆಡಿಎಸ್, ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ
ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ಸೇರಿದ ಚಿಕ್ಕಬಳ್ಳಾಪುರದ ಜೆಡಿಎಸ್, ಕಾಂಗ್ರೆಸ್ ನಾಯಕರು
  • Share this:
ಚಿಕ್ಕಬಳ್ಳಾಪುರ (ಡಿ.12): ನಗರಸಭೆ ಅಧಿಕಾರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಗ್ರಾಮ ಪಂಚಾಯಿತಿ ಅಖಾಡದಲ್ಲಿ ಚುನಾವಣೆಗೂ ಮೊದಲೇ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನ ಹಲವಾರು ಮುಖಂಡರು ತಮ್ಮ  ಬೆಂಬಲಿಗರ ಜೊತೆ ಸಚಿವ ಡಾ.ಕೆ. ಸುಧಾಕರ್ ನಾಯಕತ್ವವನ್ನು ಬೆಂಬಲಿಸಿ ಬಿಜೆಪಿಯತ್ತ ವಲಸೆ ಹೊರಟಿದ್ದಾರೆ.

ಸಚಿವ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾರೋಬಂಡೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೆರೆಸದೆ ಸಮಗ್ರ ಅಭಿವೃದ್ಧಿ ಕಲ್ಪನೆಯಲ್ಲಿ ಸಚಿವ ಸುಧಾಕರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕಮಲ ಅರಳಿಸಲು ಮುಂದಾಗಿದ್ದಾರೆ. ಅನೇಕ ವರ್ಷಗಳಿಂದ ಒಣಗಿ ನಿಂತಿರುವ ಕೆರೆಗಳಿಗೆ ನೀರು, ಇನ್ನೂ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿರುವ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿರುವುದಾಗಿ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: Namma Metro: ಇಂದು ಕೂಡ KSRTC, BMTC ನೌಕರರ ಮುಷ್ಕರ; ಬೆಂಗಳೂರು ಮೆಟ್ರೋದಿಂದ ಹೆಚ್ಚುವರಿ ರೈಲು ಸಂಚಾರ

ಗುವ್ವಲಕಾನಹಳ್ಳಿ, ದೇವಸ್ಥಾನದ ಹೊಸಹಳ್ಳಿ, ಚಂಬಳ್ಳಿ, ಕಲ್ಕುಂಟೆ, ಹುನೇಗಲ್ ಗ್ರಾಮಗಳ ಹಾಲಿ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ದೊಡ್ಡ ಸಂಖ್ಯೆ ಬೆಂಬಲಿಗರ ಜತೆ ಜೆಡಿಎಸ್, ಕಾಂಗ್ರೆಸ್ ತೊರೆದು ಸಚಿವ ಸಮ್ಮುಖದಲ್ಲಿ ಬಿಜೆಪಿ ಸೇರಿದರು‌.
Youtube Video

ಬಿಜೆಪಿಗೆ ನೆಲೆ‌ ಇಲ್ಲದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಕ್ಷಕ್ಕೆ ಬಲ‌ ತುಂಬಲು ಸಚಿವ ಡಾ. ಕೆ. ಸುಧಾಕರ್ ಖುದ್ದು ಅಖಾಡಕ್ಕೆ ಇಳಿದು ಬಾರಿ ಕಾರ್ಯತಂತ್ರ ರೂಪಿಸುತ್ತಿರುವುದು ಬಯಲು ಸೀಮೆಯಲ್ಲಿ ಕಮಲಕ್ಕೆ ನೆಲೆ ಕಲ್ಪಿಸುವ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಭಾರೀ ಪ್ಲಾನ್ ಮಾಡಿರುವುದುದಾಗಿ ಕಾಣುತ್ತಿದೆ.
Published by: Sushma Chakre
First published: December 12, 2020, 8:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories