news18-kannada Updated:February 23, 2021, 12:34 PM IST
ಮಾಜಿ ಸಿಎಂ ಸಿದ್ದರಾಮಯ್ಯ.
ಬೆಂಗಳೂರು(ಫೆ.23): ಚಿಕ್ಕಬಳ್ಳಾಪುರದ ಕಲ್ಲು ಕ್ವಾರಿ ಬಳಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾಗಿದೆ. ಇದೊಂದು ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದಿದ್ದಾರೆ.
ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಶಿವಮೊಗ್ಗದ ಜಿಲೆಟಿನ್ ಸ್ಪೋಟ ನಡೆದ ತಿಂಗಳ ಅವಧಿಯಲ್ಲಿಯೇ ಚಿಕ್ಕಬಳ್ಳಾಪುರ ಸ್ಪೋಟ ನಡೆದಿದೆ. ಇದು ರಾಜ್ಯ ಸರ್ಕಾರದ ನಿಷ್ಕ್ರಿಯತೆ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ತೊಡಗಿರುವವರ ಭ್ರಷ್ಟತನಕ್ಕೆ ಸಾಕ್ಷಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಸಿಎಂ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಸಿಎಂ ಯಡಿಯೂರಪ್ಪನವರಿಗೆ ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.
ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು ಮಂದಿ ಸಾವಿಗೀಡಾಗಿರುವುದು, ಜಿಲೆಟಿನ್ ಸ್ಪೋಟದಿಂದ ಅಲ್ಲ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
Published by:
Latha CG
First published:
February 23, 2021, 12:34 PM IST