ಚಿಕ್ಕಮಗಳೂರು: ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ತಿಂಗಳ ಕೊನೆ ವಾರದಲ್ಲಿ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿದೆ. ಆದರೆ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡುವ ಮುನ್ನವೇ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದಿದ್ದು, ಟಿಕೆಟ್ಗಾಗಿ ಫೈಟ್ ಶುರುವಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಮೂಡಿಗೆರೆಯಲ್ಲಿ ಟಿಕೆಟ್ ಘೋಷಣೆಗೂ ಮೊದಲೇ ಭಿನ್ನಮತ ಸ್ಫೋಟಗೊಂಡಿದೆ. ಒಂದೆಡೆ ಟಿಕೆಟ್ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು, ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ನಡೆಸುತ್ತಿದ್ದಾರೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಶುರುವಾಗಿದ್ದು, ಒಂದು ತಿಂಗಳ ಅಂತರದಲ್ಲಿ ಕಾಂಗ್ರೆಸ್ ಮುಖಂಡರು ಐದು ಸಭೆಗಳನ್ನು ನಡೆಸಿದ್ದಾರೆ. ನಯನಾ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: Elephants: ಆನೆ ಹಾವಳಿಗೆ ಹೈರಾಣದ ಮೂಡಿಗೆರೆ ತಾಲೂಕಿನ ಜನ; ಒಂಟಿ ಸಲಗ ಭೈರನ ಜೊತೆ ಸಕಲೇಶಪುರ ಗಜಪಡೆಯ ಭಯ
ಡಿಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರೋ ನಯನಾ
ಅಂದಹಾಗೇ, ನಯನಾ ಮೋಟಮ್ಮ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ನಯನಾ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆಯಂತೆ.
ಈ ಹಿನ್ನೆಲೆಯಲ್ಲಿ ಬಂಡಾಯ ಸಭೆಯಲ್ಲಿ ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಭಾಗಿಯಾಗಿ ಚರ್ಚೆ ನಡೆಸಿದ್ದಾರೆ.
ನಯನ ಮೋಟಮ್ಮಗೆ ಟಿಕೆಟ್ ಕೊಟ್ರೆ ಪಕ್ಷ ಸೋಲುತ್ತೆ ಅಂತ ಕಿಡಿ
ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತದೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು ಎಂದು ಗೋಣಿಬೀಡು ಹೋಬಳಿಯಲ್ಲಿ ಕಾಂಗ್ರೆಸ್ ಮುಖಂಡರು ಬಂಡಾಯದ ಸಭೆ ನಡೆಸಿದ್ದಾರೆ. ಆ ಮೂಲಕ ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಬಂಡಾಯ ಕಾರ್ಯಜರ್ತರು ಕಿಡಿಕಾರಿದ್ದಾರೆ.
ಈ ಹಿಂದೆಯೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಭೆಯಲ್ಲಿ ಗಲಾಟೆ
ಈ ಹಿಂದೆಯೂ ಮೂಡಿಗೆರೆ ಕಾಂಗ್ರೆಸ್ ಸಭೆಯಲ್ಲಿ ಅಸಮಾಧಾನ ಸ್ಪೋಟಗೊಂಡಿತ್ತು. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದರು. ಅಂದು ಕೂಡ ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟ್ಟು ಹಿಡಿದ್ದರು. ನಯನ ಮೋಟಮ್ಮ, ಪಕ್ಷದ ಕಾರ್ಯಕರ್ತರನ್ನು ಕಡಗಣೆ ಮಾಡ್ತಾರೆ ಎಂದು ಕಾರ್ಯಕರ್ತರು ಆರೋಪ ಮಾಡಿದ್ದರು.
ಕಾಂಗ್ರೆಸ್ನಿಂದ ಸುಳ್ಳು ಭರವಸೆ ಅಂತ ಬಿಜೆಪಿ ತಿರಗೇಟು
ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೇ ರಾಜ್ಯದ ಎಲ್ಲ ನಿವಾಸಗಳಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಕಾಂಗ್ರೆಸ್ ಪ್ರಾಣಾಳಿಕೆಗೆ ಬಿಜೆಪಿ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಸಿಎಂ ಬೊಮ್ಮಾಯಿ ಮಾತನಾಡಿ, ಕಾಂಗ್ರೆಸ್ ನವರು ಹತಾಶೆ ಮನೋಭವನೆಯಿಂದ ಹೇಳಿದ್ದಾರೆ ಅಂತ ಟಾಂಗ್ ಕೊಟ್ಟರು. ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್ಸ್ನವರು ಸುಳ್ಳು ಘೋಷಣೆ ಮಾಡ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗಲೇ ಅವರಿಗೆ ಏನು ಮಾಡಲಾಗಿಲ್ಲ. ಈಗ ಅಧಿಕಾರಕ್ಕಾಗಿ ಸುಳ್ಳು ಭರವಸೆ ನೀಡುತ್ತಿದ್ದಾರೆ ಅಂತ ಆರೋಪಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ