ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ - ಕಣ್ಣೀರಲ್ಲೇ ಹಬ್ಬ ಆಚರಿಸುತ್ತಿರುವ ಸಂತ್ರಸ್ತರು

ರ್ಕಾರದ ಖಜಾನೆಯಲ್ಲಿ ಹಣದ ಕೊರತೆಯಿಲ್ಲ ಎಂದು ಸಿಎಂ ಯಡಿಯೂರಪ್ಪನವರು ಹೇಳಿ ಕೊಳ್ಳುತ್ತಿದ್ದಾರೆ. ಆದರೆ ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಜುಗುಳ, ಮಂಗಾವತಿ, ಮಾಂಜರಿ, ಇಂಗಳಿ ಈ ಭಾಗದ ಹಲವು ಸಂತ್ರಸ್ತರಿಗೆ ಯಾವುದೇ ಪರಿಹಾರ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ

G Hareeshkumar | news18-kannada
Updated:January 15, 2020, 9:03 AM IST
ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ - ಕಣ್ಣೀರಲ್ಲೇ ಹಬ್ಬ ಆಚರಿಸುತ್ತಿರುವ ಸಂತ್ರಸ್ತರು
ಪ್ರವಾಹ ಸಂಸತ್ರಸ್ತರು
  • Share this:
ಚಿಕ್ಕೋಡಿ (ಜ.15) : ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಎಲ್ಲರೂ ಸಡಗರ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಆದರೆ, ಪ್ರವಾಹ ಸಂತ್ರಸ್ತರು ಮಾತ್ರ ಕಣ್ಣೀರಲ್ಲೇ ಹಬ್ಬ ಆಚರಿಸುತ್ತಿದ್ದಾರೆ. ಸರ್ಕಾರ ಎಲ್ಲರಿಗೂ ಪರಿಹಾರ ನೀಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಆದರೆ ಇತ್ತ ಸಂತ್ರಸ್ತರು ಪರಿಹಾರಕ್ಕಾಗಿ ಅಲೆದಾಡಿ ಕಣ್ಣೀರು ಹಾಕುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡಿರುವ ಸಂತ್ರಸ್ತರು ಕಣ್ಣೀರಲ್ಲಿ ಹಬ್ಬ ಆಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ಖಜಾನೆಯಲ್ಲಿ ಹಣದ ಕೊರತೆಯಿಲ್ಲ ಎಂದು ಸಿಎಂ ಯಡಿಯೂರಪ್ಪನವರು ಹೇಳಿ ಕೊಳ್ಳುತ್ತಿದ್ದಾರೆ. ಆದರೆ, ಚಿಕ್ಕೋಡಿ ಹಾಗೂ ಅಥಣಿ ತಾಲೂಕಿನ ಜುಗುಳ, ಮಂಗಾವತಿ, ಮಾಂಜರಿ, ಇಂಗಳಿ ಈ ಭಾಗದ ಹಲವು ಸಂತ್ರಸ್ತರಿಗೆ ಯಾವುದೇ ಪರಿಹಾರ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡಿ ತಮ್ಮ ಚಪ್ಪಲಿ ಸವೆದುಕೊಳ್ಳುತ್ತಿದ್ದಾರೆ. ಸರ್ಕಾರದ ಅಧಿಕಾರಿಗಳು ಮಾತ್ರ ತಾಂತ್ರಿಕ ತೊಂದರೆ ಇದೆ ಎಂದು ಸಂತ್ರಸ್ತರನ್ನು ಮನೆಗೆ ಕಳುಹಿಸಿಕೊಡುತ್ತಿದ್ದಾರೆ.

ಇನ್ನು ಈ ಹಿಂದೆ ಸರ್ವೆ ಮಾಡಿದಾಗ ಅಧಿಕಾರಿಗಳ ನಿರ್ಲಕ್ಷ್ಯ ತೋರಿದ್ದಾರೆ. ಮನೆ ಬಿಳದ ಕುಟುಂಬದವರನ್ನು ಸಹ ಎ ಗ್ರೇಡ್ ಪಟ್ಟಿಯಲ್ಲಿ ಹೆಸರು ದಾಖಲಿಸಿದ್ದರು. ಇದನ್ನರಿತ ಜಿಲ್ಲಾಧಿಕಾರಿ ಮಾಂಜರಿ, ಜುಗುಳ ಮಂಗಾವತಿ ಗ್ರಾಮದ ಸಂಪೂರ್ಣ ಪಟ್ಟಿಯನ್ನೆ ರದ್ದು ಮಾಡಿ ಮತ್ತೊಮ್ಮೆ ಸರ್ವೆ ನಡೆಸಿದರು. ಆದರೆ, ಎರಡನೇ ಸರ್ವೆ ನಡೆಸಿ ಜಿಪಿಎಸ್ ಆದರೂ ಸಹ ಹಲವು ಸಂತ್ರಸ್ತರ ಹೆಸರನ್ನ ಪಟ್ಟಿಯಿಂದ ಕೈ ಬಿಡಲಾಗಿದೆ.

ಇದನ್ನೂ ಓದಿ : ಟ್ರ್ಯಾಕ್​​​​ ಬಿಟ್ಟು ಮೈದಾನಕ್ಕೆ ಬಂದ ಚುಕುಬುಕು ರೈಲು; ಬೋಗಿಯೇ ವಿದ್ಯಾರ್ಥಿಗಳಿಗೆ ಕೊಠಡಿ..!

ಇನ್ನೂ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಇದುವರೆಗೂ 10 ಸಾವಿರ ರೂಪಾಯಿ ಬಿಟ್ಟು ಬೇರೆ ಪರಿಹಾರ ಸಿಕ್ಕಿಲ್ಲ. ತಮ್ಮ ಸ್ವಂತ ಖರ್ಚಿನಿಂದ ಕೆಲವರು ಸಾಲ ಮಾಡಿಕೊಂಡು ಶೆಡ್ ನಿರ್ಮಾಣ ಮಾಡಿಕೊಂಡರು ಶೇಡ್ ನಿರ್ಮಾಣದ ಖರ್ಚನ್ನು ಸಹ ಸರ್ಕಾರ ಕೊಟ್ಟಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಎಲ್ಲಿ ಹಬ್ಬ ಆಚರಣೆ ಮಾಡೋಣ ಎಂದು ಸಂತ್ರಸ್ತರು ತಮ್ಮ ಅಳಲನ್ನ ತೋಡಿಕೊಂಡಿದ್ದರೆ.

ಒಟ್ಟಿನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ ಪ್ರವಾಹ ಕಳೆದು ನಾಲ್ಕು ತಿಂಗಳಾದರೂ ಸಂತ್ರಸ್ತರ ಕಣ್ಣೀರಿನ ಕಥೆ ಮಾತ್ರ ಮುಗಿಯುತ್ತಿಲ್ಲ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಮುಂದಾಗಬೇಕಿದೆ.
  • ವಿಶೇಷ ವರದಿ : ಲೋಹಿತ್ ಶಿರೋಳ


First published:January 15, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ