ಚಿಕ್ಕಮಗಳೂರು (ನ. 27): ಉಪ್ಪಾರ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಗಿರೀಶ್ ಉಪ್ಪಾರ್ ಅವರನ್ನು ನೇಮಿಸಿರುವುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಬಿಜೆಪಿಯಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಕಡೂರು ಬಿಜೆಪಿ ಮಂಡಲದ ಪದಾಧಿಕಾರಿಗಳು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರ ಆಯ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಕಡೂರು ತಾಲೂಕಿನ ಜಿ.ಕೆ. ಗಿರೀಶ್ ಉಪ್ಪಾರ್ ಅವರನ್ನು ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮ ಅಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಬಿ.ಎಸ್ ಯಡ್ಯೂರಪ್ಪ ಆಯ್ಕೆ ಮಾಡಿ ಆದೇಶ ಮಾಡಿದ ಹಿನ್ನೆಲೆಯಲ್ಲಿ ಕಡೂರು ಬಿಜೆಪಿ ಮಂಡಲದ ಎಲ್ಲಾ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಅವರಿಗೆ ಸಾಮೂಹಿಕ ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಗಿರೀಶ್ ಉಪ್ಪಾರ್ 2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪವಿದ್ದ ಹಿನ್ನೆಲೆಯಲ್ಲಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.
ಇದನ್ನೂ ಓದಿ: Bangalore Rain: ನಿವಾರ್ ಚಂಡಮಾರುತದ ಎಫೆಕ್ಟ್; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಸಂಜೆ ಮಳೆ ಸಾಧ್ಯತೆ
ಈ ಮಧ್ಯೆ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಸೇರಿ ಮುಖಂಡರ ಗಮನಕ್ಕೂ ತರದೇ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರ ನೇಮಕ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷ ಸಂಘಟನೆ ಮತ್ತು ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭಾಗವಹಿಸದ ಗಿರೀಶ್ ಉಪ್ಪಾರ್ ಅವರ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರ ನೇಮಕ ಆದೇಶವನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ