ಕರ್ತವ್ಯ ಲೋಪ ಎಸಗಿದ ಪಿಎಸ್​ಐ ಸೇರಿ ಚಿಕ್ಕಮಗಳೂರಿನ 7 ಪೊಲೀಸರು ಸಸ್ಪೆಂಡ್

ಅಮಾನತುಗೊಂಡ ಬಸವನಹಳ್ಳಿ ಪೊಲೀಸರು ಗಾಂಜಾ ಕೇಸ್​ನಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3. 40 ಲಕ್ಷ ರೂ. ಹಣ ಪಡೆದಿದ್ದರು ಎಂದು ಹೇಳಲಾಗಿದೆ.

ಅಮಾನತುಗೊಂಡ ಪಿಎಸ್​ಐ

ಅಮಾನತುಗೊಂಡ ಪಿಎಸ್​ಐ

  • Share this:
ಚಿಕ್ಕಮಗಳೂರು: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಓರ್ವ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಸೇರಿದಂತೆ ಏಳು ಜನ ಪೊಲೀಸ್ ಪೇದೆಗಳನ್ನು ಅಮಾನತು ಮಾಡಿ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಆದೇಶ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ. ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನು ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವವರನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡ ಬಸವನಹಳ್ಳಿ ಪೊಲೀಸರು ಗಾಂಜಾ ಕೇಸ್​ನಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3. 40 ಲಕ್ಷ ರೂ. ಹಣ ಪಡೆದಿದ್ದರು ಎಂದು ಹೇಳಲಾಗಿದೆ. ಇನ್ನು ಬಗ್ಗೆ ಹಣ ಕಳೆದುಕೊಂಡವರು ಎಸ್ಪಿಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ಆಲಿಸಿದ ಎಸ್ಪಿ ಅಕ್ಷಯ್ ಪಿಎಸ್ ಐ ಸೇರಿದಂತೆ ಪೊಲೀಸ್ ಕಾನ್ಸ್ ಟೇಬಲ್ ಗಳನ್ನ ಅಮಾನತು ಮಾಡಿ ಆದೇಶ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ತನಿಖೆ ಎದುರಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಠಾಣಾ ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದ ಹಿನ್ನೆಲೆ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್  ಎಸ್ಪಿ ಅಮಾನತು ಮಾಡಿದ್ದಾರೆ. ಈ ಇನ್ನು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಓರ್ವ ಪಿ.ಎಸ್.ಐ. ಸೇರಿದಂತೆ ಏಳು ಸಿಬ್ಬಂದಿಗಳನ್ನು ಅಮಾನತು ಮಾಡಿದ್ದು, ಅಮಾನತ್ತಾದ ಎಲ್ಲರೂ ಇಲಾಖಾ ತನಿಖೆ ಎದುರಿಸಬೇಕೆಂದು ಸೂಚನೆ ನೀಡಿದ್ದಾರೆ.
Published by:Sushma Chakre
First published: