HOME » NEWS » State » CHIKMAGALUR RAIN HEAVY RAIN IN CHIKMAGALUR LANDSLIDE IN CHARMADI GHAT SCT

Chikmagalur Rain: ಮಳೆಯಿಂದ ಚಿಕ್ಕಮಗಳೂರಿನ ಜನಜೀವನ ಅಸ್ತವ್ಯಸ್ತ; ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

Karnataka Rain: ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ನಿನ್ನೆ ಸುರಿದ ಮಳೆಗೆ ಕುಸಿದಿದ್ದ ಮಣ್ಣನ್ನು ಜಿಲ್ಲಾಡಳಿತ, ಸ್ಥಳೀಯರು ತೆರವುಗೊಳಿಸುತ್ತಿದ್ದಾರೆ.

news18-kannada
Updated:September 21, 2020, 12:20 PM IST
Chikmagalur Rain: ಮಳೆಯಿಂದ ಚಿಕ್ಕಮಗಳೂರಿನ ಜನಜೀವನ ಅಸ್ತವ್ಯಸ್ತ; ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿದಿರುವುದು
  • Share this:
ಚಿಕ್ಕಮಗಳೂರು (ಸೆ. 21): ಚಿಕ್ಕಮಗಳೂರು ಜಿಲ್ಲೆಯಲ್ಲಿ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇದರಿಂದ ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿರುವುದರಿಂದ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ಚಾರ್ಮಾಡಿ ಘಾಟ್​ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸಣ್ಣ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿಯುತ್ತಿದೆ. ನಿನ್ನೆ ಸುರಿದ ಮಳೆಗೆ ಕುಸಿದಿದ್ದ ಮಣ್ಣನ್ನು ಜಿಲ್ಲಾಡಳಿತ, ಸ್ಥಳೀಯರು ತೆರವುಗೊಳಿಸುತ್ತಿದ್ದಾರೆ. ಸ್ಥಳೀಯರು ಮಣ್ಣನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಮತ್ತೊಂದು ಕಡೆ ಮಳೆಯಿಂದ ಚಾರ್ಮಾಡಿಯ ಜಲಪಾತಗಳು ಜೀವಕಳೆ ಪಡೆದಿವೆ. ಚಾರ್ಮಾಡಿ ಘಾಟಿಯ ಮನಮೋಹಕ ದೃಶ್ಯ ಅನಾವರಣಗೊಂಡಿದೆ. ಇಂದು ಚಾರ್ಮಾಡಿಯಲ್ಲಿ ಎಂದಿನಂತೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಮಲೆನಾಡಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಮಳೆ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಮೂಡಿಗೆರೆ, ಕೊಪ್ಪ, ಎನ್.ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಮಳೆ ಹೆಚ್ಚಾಗಿದೆ. ಕಳಸ, ಕುದುರೆಮುಖ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗಿದೆ. ರಾತ್ರಿ ಇಡೀ ಮಳೆ ಅಬ್ಬರಿಸಿದೆ. ಸತತ ಮಳೆಯಿಂದಾಗಿ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೊಲಗೋಡು ಗ್ರಾಮದಲ್ಲಿ ಹತ್ತಾರು ಎಕರೆ ನಾಟಿ ಮಾಡಿದ ಗದ್ದೆಗಳು ಜಲಾವೃತವಾಗಿವೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: Karnataka Reservoir Water Level: ರಾಜ್ಯಾದ್ಯಂತ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಬಾಳೆಹೊನ್ನೂರಿನಲ್ಲಿ ಭದ್ರಾ ನದಿ ಪಾತ್ರದಲ್ಲಿರುವ ಮನೆಗಳ ಜನರಿಗೆ ಆತಂಕ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಭದ್ರಾ ನದಿ ನೀರಿನಲ್ಲಿ ಕಾಫಿ, ಅಡಿಕೆ ತೋಟಗಳು ಮುಳುಗಡೆಯಾಗಿವೆ. ಭದ್ರಾ ನದಿ ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿದೆ. ಧಾರಾಕಾರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭದ್ರಾ ನದಿಯ ನೀರಿನ ಮಟ್ಟ ಹೆಚ್ಚಿದ್ದು, ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಿದೆ. ಸೇತುವೆ ಮೇಲೆ ಎರಡು ಅಡಿಗಳಷ್ಟು ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ತಾಲ್ಲೂಕುಗಳಾದ ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳಲ್ಲಿ ನೀರಿನ ಹರಿವಿನ ಮಟ್ಟದಲ್ಲಿ ಏರಿಕೆಯಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ನದಿ ಪಾತ್ರದ ಮನೆ, ಜಮೀನುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್, ಕೊಗಿಲೆ, ದೇವರಮನೆ, ಕೊಟ್ಟಿಗೆಹಾರ, ಮೂಲರಹಳ್ಳಿ, ಬಾಳೂರು, ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕಳಸ ಹಾಗೂ ಕುದುರೆಮುಖ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
Published by: Sushma Chakre
First published: September 21, 2020, 12:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories