ಮೇ 19, ಕುಂದಗೋಳದ ಜೊತೆ ಚಿಂಚೋಳಿ ವಿಧಾನಸಭಾ ಉಪಚುನಾವಣೆ: ಚು. ಆಯೋಗ ಪ್ರಕಟಣೆ

ಉಮೇಶ್ ಜಾಧವ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಚಿಂಚೋಳಿ ಕ್ಷೇತ್ರ ತೆರವಾಗಿದೆ. ಸಿಎಸ್ ಶಿವಳ್ಳಿ ನಿಧನದಿಂದ ಕುಂದಗೋಳ ತೆರವಾಗಿದೆ. ಈ ಎರಡೂ ಕ್ಷೇತ್ರಗಳ ಉಪಚುನಾವಣೆ ಮೇ 19ರಂದು ನಡೆಯಲಿದೆ.

news18
Updated:April 16, 2019, 9:44 PM IST
ಮೇ 19, ಕುಂದಗೋಳದ ಜೊತೆ ಚಿಂಚೋಳಿ ವಿಧಾನಸಭಾ ಉಪಚುನಾವಣೆ: ಚು. ಆಯೋಗ ಪ್ರಕಟಣೆ
ಕೇಂದ್ರ ಚುನಾವಣಾ ಆಯೋಗ
news18
Updated: April 16, 2019, 9:44 PM IST
ಬೆಂಗಳೂರು(ಏ. 16): ಉಮೇಶ್ ಜಾಧವ್ ಅವರಿಂದ ತೆರವಾದ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಮೇ 19ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಇವತ್ತು ಚಿಂಚೋಳಿ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸಿತು. ಇದರೊಂದಿಗೆ ಕುಂದಗೋಲ ಮತ್ತು ಚಿಂಚೋಳಿ ಎರಡೂ ಕ್ಷೇತ್ರಗಳಿಗೂ ಮೇ 19ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಮೇ 23ರಂದು ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಜೊತೆಗೆ ಈ ಎರಡೂ ವಿಧಾನಸಭಾ ಕ್ಷೇತ್ರಗಳ ಫಲಿತಾಂಶವೂ ಪ್ರಕಟವಾಗಲಿದೆ.

ಉಮೇಶ್ ಜಾಧವ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈಗ ಅವರು ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಕಾಂಗ್ರೆಸ್​ನ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ಸಮೀಕ್ಷೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಒಕ್ಕಲಿಗರು ಕೈ ಹಿಡಿಯುವ ಅಭ್ಯರ್ಥಿಯೇ ಮುಂದಿನ ಸಂಸದ!

ಇನ್ನು, ಕುಂದಗೋಳ ವಿಧಾನಸಭಾ ಕ್ಷೇತ್ರ ಕೂಡ ಹಾಲಿ ಕಾಂಗ್ರೆಸ್ ಶಾಸಕ ಸಿಎಸ್ ಶಿವಳ್ಳಿ ಅವರ ನಿಧನದಿಂದ ತೆರವಾಗಿದೆ.

ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಉಪಚುನಾವಣೆಯ ದಿನಾಂಕಗಳು:
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 29
Loading...

ನಾಮಪತ್ರ ಪರಿಶೀಲನೆ: ಏಪ್ರಿಲ್ 30
ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಮೇ 2
ಮತದಾನದ ದಿನ: ಮೇ 19
ಮತ ಎಣಿಕೆ: ಮೇ 23

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಿವಳ್ಳಿ ಅವರು ಬಿಜೆಪಿಯ ಚಿಕ್ಕನಗೌಡ್ರ ವಿರುದ್ಧ 634 ಮತಗಳ ಅಲ್ಪ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: ಮಂಡ್ಯದಲ್ಲಿ ಬೃಹತ್ ಸ್ವಾಭಿಮಾನ ಸಮಾವೇಶ; ಸ್ವಾಭಿಮಾನ ಬಿಡದೆ ಮತ ಹಾಕುವಂತೆ ಸುಮಲತಾ ಕರೆ

ಚಿಂಚೋಳಿ ಮತ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಅವರು 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದರು. ಬಿಜೆಪಿಯ ಸುನೀಲ್ ವಲ್ಯಾಪುರೆ ಅವರು 54,693 ಮತ ಪಡೆದು ಎರಡನೇ ಸ್ಥಾನ ಪಡೆದಿದ್ದರು.

ಈಗ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಪ್ರತಿಷ್ಠೆಯ ಸವಾಲಾಗಿದೆ. ಎರಡೂ ಕ್ಷೇತ್ರಗಳನ್ನ ಉಳಿಸಿಕೊಳ್ಳುವ ಒತ್ತಡದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಇವೆರಡನ್ನೂ ಗೆದ್ದು ತನ್ನ ಸಂಖ್ಯಾಬಲ ಹೆಚ್ಚಿಸಿಕೊಳ್ಳುವ ಹತಾಶೆಯಲ್ಲಿದೆ.
First published:April 16, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626