Chitradurga Fire: ಚಿತ್ರದುರ್ಗದ ಬಳಿ ಬೆಂಗಳೂರು ಬಸ್ಗೆ ಬೆಂಕಿ; ಐವರು ಸಜೀವ ದಹನ, 30 ಪ್ರಯಾಣಿಕರು ಪಾರು
Bus Accident: ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಮಾರ್ಗಮಧ್ಯೆ ಹೊತ್ತಿ ಉರಿದಿದೆ. ಚಿತ್ರದುರ್ಗದ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದ ಬಳಿ ಹೆದ್ದಾರಿಯಲ್ಲಿ ಸುಟ್ಟು ಕರಕಲಾಗಿರುವ ಖಾಸಗಿ ಬಸ್
ಬೆಂಗಳೂರು (ಆ. 12): ವಿಜಯಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ವೊಂದಕ್ಕೆ ಚಿತ್ರದುರ್ಗದ ಬಳಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್ನಲ್ಲಿ ಒಟ್ಟು 35 ಪ್ರಯಾಣಿಕರಿದ್ದರು. ಮಗು ಸೇರಿದಂತೆ ಐವರು ಬಸ್ನಲ್ಲೇ ಸುಟ್ಟು, ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಜಯಪುರದ ಖಾಸಗಿ ಬಸ್ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿ ಉರಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. 30 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಮಾರ್ಗಮಧ್ಯೆ ಹೊತ್ತಿ ಉರಿದಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ನಿದ್ರೆಯಲ್ಲಿದ್ದ ಪ್ರಯಾಣಿಕರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಿಂದ ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಕೆಲವರು ಸುರಕ್ಷಿತವಾಗಿ ಹೊರಗೆ ಬಂದರೆ ಇನ್ನು ಕೆಲವರು ಬಸ್ನಲ್ಲೇ ಸಿಲುಕಿದ್ದಾರೆ. ಅವರಲ್ಲಿ 30 ಮಂದಿಯನ್ನು ರಕ್ಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ.
ಬೆಂಕಿ ಹೊತ್ತಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಬಸ್ನ ಬೆಂಕಿಯನ್ನು ಆರಿಸುವುದರೊಳಗೆ ಬಹುತೇಕ ಬಸ್ ಸುಟ್ಟು ಕರಕಲಾಗಿತ್ತು. ಘಟನೆ ನಡೆದ ಕೂಡಲೆ ಬಸ್ನ ಚಾಲಕ ಪರಾರಿಯಾಗಿದ್ದಾನೆ. ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ)
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ