ಬೆಂಗಳೂರು(ಆ. 04): ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಇಂದು ನಗರದ ಹದಿನೈದು ಕಡೆ ರೇಡ್ ಮಾಡಿದ್ದಾರೆ. ಸುಳ್ಳು ದಾಖಲೆಗಳನ್ನ ನೀಡಿ ಕೋಟಿಗಟ್ಟಲೆ ಸಾಲ ಪಡೆದವರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದೆ.
ಸಿಐಡಿಯ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳ ವಿವಿಧ ತಂಡಗಳು ಹಲಸೂರು, ರಾಜಾಜಿನಗರ, ಸದಾಶಿವನಗರ, ಜಯನಗರ ಮೊದಲಾದ ಸ್ಥಳಗಳಲ್ಲಿ ದಾಳಿ ಮಾಡಿವೆ. ಗುರುರಾಘವೇಂದ್ರ ಬ್ಯಾಂಕ್ನಿಂದ ಸಾಲ ಪಡೆದು ಮರುಪಾವತಿ ಮಾಡದವರ ಮನೆಗಳನ್ನ ಸಿಐಡಿ ಪೊಲೀಸರು ಶೋಧಿಸುತ್ತಿದ್ದಾರೆ.
ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ನ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಾಜಿ ಸಿಇಒ ವಾಸುದೇವ್ ಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕ ಹೈಕೋರ್ಟ್ ಸಿಐಡಿಗೆ ತನಿಖೆಯ ಜವಾಬ್ದಾರಿ ಹೊರಿಸಿದೆ. ಬ್ಯಾಂಕ್ನ ವಂಚನೆ ಪ್ರಕರಣ ಮತ್ತು ಮಯ್ಯ ಆತ್ಯಹತ್ಯೆ ಪ್ರಕರಣ ಎರಡನ್ನೂ ಸಿಐಡಿ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: ಕೊರೋನಾ ನಡುವೆ ಗಾಂಜಾ ಗ್ಯಾಂಗ್ ಅಟ್ಟಹಾಸ ; ಪೊಲೀಸರಿಗೆ ದೂರು ನೀಡಿದ್ದಕ್ಕೆ ಯುವಕನಿಗೆ ಮಚ್ಚೇಟು
ಸಹಕಾರಿ ಬ್ಯಾಂಕ್ನಲ್ಲಿ ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ. ಇದೇ ಜನವರಿ ತಿಂಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಮೇಲೆ ನಿರ್ಬಂಧಗಳನ್ನ ಹಾಕಿದ ಬಳಿಕ ಈ ಅವ್ಯವಹಾರ ಬೆಳಕಿಗೆ ಬಂದಿತ್ತು. ಬ್ಯಾಂಕ್ನ ಕೆಲ ಅಧಿಕಾರಿಗಳು ನಕಲಿ ಠೇವಣಿಗಳನ್ನ ಸೃಷ್ಟಿಸಿ ಕೋಟ್ಯಂತರ ರೂ ಅಕ್ರಮ ಎಸಗಿರುವುದು ಕಂಡುಬಂದಿದೆ. ಬ್ಯಾಂಕ್ನ ಮಾಜಿ ಸಿಇಒ ವಾಸುದೇವ್ ಮಯ್ಯ ಅವರ ವಿರುದ್ಧವೂ ಆರೋಪ ಇತ್ತು. ಆದರೆ, ಜುಲೈ 7ರಂದು ಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ