ಬೆಂಗಳೂರು(ಮಾ.04): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಾಲು-ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ಇಂದೂ ಸಹ ಬೆಂಗಳೂರಿಗರ ಪ್ರತಿಭಟನೆಯ ಬಿಸಿ ತಟ್ಟಲಿದೆ. ಇಂದು ಸಾವಿರಾರು ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಹೀಗಾಗಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದ್ದು, ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ಮಾಡುವ ವಾಹನ ಸವಾರರು ಎಚ್ಚರ ವಹಿಸಬೇಕಿದೆ.
ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಟ್ರಾಫಿಕ್ ಜಾಮ್ ಆಗಲಿದೆ. ಹೀಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಸಂಚರಿಸುವ ವಾಹನ ಸವಾರರು ಮಾರ್ಗ ಬದಲಾಯಿಸಿಕೊಳ್ಳುವುದು ಸೂಕ್ತ. ಇಲ್ಲವೆಂದರೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಪರಿತಪಿಸಬೇಕಾಗುತ್ತದೆ.
ಇಂದು ಪ್ರತಿಭಟನಾಕಾರರು ಸಾವಿರಾರು ಸಂಖ್ಯೆಯಲ್ಲಿ ವಿಧಾನಸೌಧಕ್ಕೆ ಲಗ್ಗೆಯಿಡಲಿದ್ದಾರೆ. ಸಿಐಟಿಯು ಅಡಿಯಲ್ಲಿ ಬರುವ 131 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು ಪ್ರತಿಭಟನೆ ಮಾಡಲಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಸೇರಿದಂತೆ ರಸ್ತೆ ಸಾರಿಗೆ ನೌಕರರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಚಲೋಗೆ ಕರೆ ನೀಡಿದ್ದಾರೆ.
ಪರಿಸರ ಸಂರಕ್ಷಣೆಗೆ ಸರ್ಕಾರಗಳು ಹೆಚ್ಚಿನ ಕೆಲಸ ಮಾಡಬೇಕೆನ್ನುವ ಸಾರ್ವಜನಿಕರು: ಸಮೀಕ್ಷೆ
ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳು
1.ಖಾಯಂ ನೌಕರಿ.
2.ಮಾಸಿಕ ರೂ.24 ಸಾವಿರ ಸಮಾನ ಕನಿಷ್ಠ ವೇತನ.
3. ಲಾಕ್ಡೌನ್, ಸೀಲ್ಡೌನ್ , ಕ್ವಾರಂಟೈನ್ ವೇಳೆಯಲ್ಲಿ ವೇತನ ನೀಡಬೇಕು.
4. ಲೇ- ಆಫ್, ರಿಟ್ರೆಂಚ್ಮೆಂಟ್ ಮುಚ್ಚುವಿಕೆಗೆ ಅನುಮತಿ ನಿರಾಕರಣೆ.
5. ರಾಜ್ಯ ಕಾರ್ಮಿಕ ಸಮ್ಮೇಳನಕ್ಕಾಗಿ ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆ ಬಲಪಡಿಸುವುದು.
ರಾಜಧಾನಿಯಲ್ಲಿ ಇಂದೂ ಸಹ ಪ್ರತಿಭಟನೆಯ ಪರ್ವ ಮುಂದುವರೆಯಲಿದೆ. ಬಿಸಿಯೂಟ ಕಾರ್ಯಕರ್ತೆಯರು ಇಂದು ರಾಜಧಾನಿಯಲ್ಲಿಯೇ ಉಳಿದಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಬಿಸಿಯೂಟ ಕಾರ್ಯಕರ್ತೆಯರು ಇಂದಿನ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಕಾರ್ಮಿಕ ಸಂಘಟನೆ ಕರೆ ನೀಡಿರುವ ಈ ಪ್ರತಿಭಟನೆಗೆ ಬಿಸಿಯೂಟ ಕಾರ್ಯಕರ್ತೆಯರು ಸಾಥ್ ನೀಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ