• Home
  • »
  • News
  • »
  • state
  • »
  • CM Bommai: ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ,  3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ; ಸಿಎಂ ಬೊಮ್ಮಾಯಿ

CM Bommai: ಗಡಿನಾಡಿನ ಅಭಿವೃದ್ಧಿಗೆ 100 ಕೋಟಿ,  3 ಕೋಟಿ ವೆಚ್ಚದಲ್ಲಿ ಹಾವೇರಿಯಲ್ಲಿ ಕಸಾಪ ಭವನ; ಸಿಎಂ ಬೊಮ್ಮಾಯಿ

ಬಸವರಾಜ್ ಬೊಮ್ಮಾಯಿ, ಸಿಎಂ

ಬಸವರಾಜ್ ಬೊಮ್ಮಾಯಿ, ಸಿಎಂ

Kannada Sahitya Sammelana: ರಾಜ್ಯದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಿಗೆ ಪಿಂಚಣಿ ನೀಡುವ ರೀತಿ, ಗಡಿಯಾಚೆ  ಹೋರಾಡಿದ ಕನ್ನಡಿಗರಿಗೂ ಪಿಂಚಣಿ ನೀಡುವ ಕಾರ್ಯವನ್ನು ಸರ್ಕಾರ ಪ್ರಾರಂಭಿಸಲಿದೆ.

  • Share this:

ಹಾವೇರಿ: ಗಡಿನಾಡಿನ ಜನರ ಶಿಕ್ಷಣ (Education), ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ (Health infrastructure Development) ಸರ್ಕಾರ 100 ಕೋಟಿ ರೂಪಾಯಿ ಒದಗಿಸಲಿದೆ.  ಕನ್ನಡದ ಶಾಸ್ತ್ರೀಯ ಭಾಷೆ  ಸ್ಥಾನಮಾನದ ಸಂಶೋಧನಾ ಕಾರ್ಯಗಳಿಗೆ ಉನ್ನತ ಮಟ್ಟದಲ್ಲಿ ಸಾಹಿತಿಗಳ ಸಮಿತಿ ರಚಿಸಲಾಗುವುದು.  ಸಮಿತಿ ಸೂಚಿಸುವ ಸಂಶೋಧನಾ ಕಾರ್ಯಗಳಿಗೆ ಬೇಕಾದ ಹಣವನ್ನು (Fund Release) ಸರ್ಕಾರ ಒದಗಿಸಲಿದೆ. ಸಮ್ಮೇಳನದ (Kannada Sahitya Sammelana) ನೆನಪಿಗೆ ಹಾವೇರಿಯಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ಕಸಾಪ ಭವನ (KaSaPa Bhavan) ನಿರ್ಮಿಸಿ,  ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (CM Basavaraj Bommai) ಎಂದು ಘೋಷಣೆ ಮಾಡಿದರು.


86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ  ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು. ಗಡಿನಾಡಿನ ಶಿಕ್ಷಣ, ಆರೋಗ್ಯ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಈಗಾಗಲೆ 25 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ ಇನ್ನೂ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದರು.


ಕನ್ನಡ ಸಾಹಿತ್ಯ ಸಮ್ಮೇಳನ


ಕನ್ನಡಕ್ಕಾಗಿ ಹೋರಾಡಿದ ಹೋರಾಟಗಾರರ ಮೇಲಿರುವ ಕಾಗ್ನಿಜಬಲ್ ಹೊರತುಪಡಿಸಿದ ಉಳಿದ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ಇರುವಂತಹ ಅವಕಾಶಗಳನ್ನು ಪರಿಶೀಲಿಸಿ, ಕೇಸ್‍ಗಳನ್ನು ಹಿಂದೆ ಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.


ಹಿರಿಯ ಸಾಹಿತಿಗಳ ಸಮಿತಿ ರಚನೆ


2008 ರಿಂದ ಕನ್ನಡ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದಿದೆ.  ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ 13.30 ಕೋಟಿ ರೂ. ನೆರವು ದೊರೆತಿದೆ.  ಮೈಸೂರು ವಿವಿಯ ದೊಡ್ಡ  ಕಟ್ಟಡವೊಂದನ್ನು ಈಗಾಗಲೇ ಅಧ್ಯಯನ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಿಎಂ  ಹೇಳಿದರು.


ಶಾಸ್ತ್ರೀಯ ಭಾಷೆ ಕುರಿತ ಸಂಶೋಧನೆ,  ಗ್ರಂಥಾಲಯ, ಚರ್ಚೆಗಳಿಗೆ ಮಾರ್ಗದರ್ಶನ ಮಾಡಲು ಸಮ್ಮೇಳನಾಧ್ಯಕ್ಷರ ಮಾರ್ಗದರ್ಶನದಲ್ಲಿ ನಾಡಿನ ಹಿರಿಯ ಸಾಹಿತಿಗಳ ಸಮಿತಿ ರಚಿಸಲಾಗುವುದು. ಸಮಿತಿ ಸೂಚಿಸುವ ಕಾರ್ಯಗಳಿಗೆ ಎಷ್ಟು ಅನುದಾನ ಬೇಕಾದರೂ ಸರ್ಕಾರ ಒದಗಿಸಲಿದೆ. ಹಾವೇರಿ ಜಿಲ್ಲಾ ಕಸಾಪ ಭವನ ನಿರ್ಮಾಣಕ್ಕೆ 3 ಕೋಟಿ ರೂ.ಒದಗಿಸಲಾಗುವುದು.ಕರ್ನಾಟಕ ಜಾನಪದ ವಿವಿ ಸಹಯೋಗದಲ್ಲಿ ಅಲ್ಲೊಂದು ಗುಣಮಟ್ಟದ ಸಂಶೋಧನಾ ಕೇಂದ್ರವನ್ನು ಕಸಾಪ ರೂಪಿಸಬೇಕು ಎಂದರು.


ಕನ್ನಡ ಸಾಹಿತ್ಯ ಸಮ್ಮೇಳನ


ಕನ್ನಡ ಸಾಹಿತ್ಯ ಸತ್ಯದ ದರ್ಶನ


ರಾಜ್ಯದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಿಗೆ ಪಿಂಚಣಿ ನೀಡುವ ರೀತಿ, ಗಡಿಯಾಚೆ  ಹೋರಾಡಿದ ಕನ್ನಡಿಗರಿಗೂ ಪಿಂಚಣಿ ನೀಡುವ ಕಾರ್ಯವನ್ನು ಸರ್ಕಾರ ಪ್ರಾರಂಭಿಸಲಿದೆ.


ತಾಯಿ ಕನ್ನಡ ಭುವನೇಶ್ವರಿಯ ಒಡಲು ಶ್ರೀಮಂತವಾದುದು.  ಇಲ್ಲಿನ ಜ್ಞಾನ, ಸಾಹಿತ್ಯ, ತಂತ್ರಜ್ಞಾನ ಎಲ್ಲವೂ ಸಿರಿವಂತವಾಗಿದೆ. ಕನ್ನಡ ಭಾಷೆಯಲ್ಲಿ ಸ್ಪಷ್ಟತೆ, ನಿಖರತೆ, ಪ್ರಖರತೆಗಳಿವೆ.  ಕನ್ನಡದ ಮನಸ್ಸುಗಳು ಸ್ವಚ್ಛ ಹಾಗೂ ಪಾರದರ್ಶಕವಾಗಿವೆ. ಬಹುತೇಕ ಸಾಹಿತ್ಯ ಹೃದಯದಿಂದ ಬಂದಿರುವ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಸತ್ಯದ ದರ್ಶನವಾಗಿದೆ.


ನೀರಾವರಿ ಯೋಜನೆಗಳು


ಈ ಭಾಷೆಗೆ ಉಜ್ವಲ ಭವಿಷ್ಯವಿದೆ.  ಕಾಲ ಕಾಲಕ್ಕೆ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಮುಂದೆ ಸಾಗುತ್ತಿದೆ.  ಪಶ್ಚಿಮ ಘಟ್ಟದ ನದಿ ಸಂಪತ್ತಿನ ಸಂಪೂರ್ಣ ಪ್ರಯೋಜನ ಪಡೆದರೆ ನಾಡು ಇನ್ನಷ್ಟು ಶ್ರೀಮಂತವಾಗಲಿದೆ.


ಕಾನೂನು ತೊಡಕು ನಿವಾರಿಸಿಕೊಂಡು ಮಹದಾಯಿ ಯೋಜನೆ, ಕಳಸಾ ಬಂಡೂರಿ ಯೋಜನೆಯಾಗಿ ಅನುಷ್ಠಾನವಾಗಲಿದೆ.


ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರಿಗೆ ಹೆಚ್ಚಿಸಲು ಶೀಘ್ರ ನ್ಯಾಯಮಂಡಳಿಯ ಅನುಮೋದನೆ ಸಿಗುವ ಭರವಸೆ ಇದೆ.  ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಮಧ್ಯ ಕರ್ನಾಟಕದ ಲಕ್ಷಾಂತರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.


ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ


ಮೇಕೆದಾಟು ಯೋಜನೆ ಜಾರಿಗೂ ಕೂಡ ಸರ್ವ ರೀತಿಯ ಪ್ರಯತ್ನವನ್ನು ನಮ್ಮ ಸರ್ಕಾರ ನಡೆಸಿದೆ.  ಎಲ್ಲಾ ಮಾತೃ ಭಾಷೆಗಳಿಗೆ ಸಂವಿಧಾನದ ರಕ್ಷಣೆಯ ಅಗತ್ಯವಿದೆ.  ಪ್ರಾಥಮಿಕ ಹಂತದ ಶಾಲಾ ಶಿಕ್ಷಣ ಮಾತೃ ಭಾಷೆಯಲ್ಲಿಯೇ ಆಗಬೇಕು ಎಂಬುದು ನ್ಯಾಯಾಲಯದಲ್ಲಿ ವಿಫಲವಾಗುತ್ತಿದೆ.  ಬರುವ ದಿನಗಳಲ್ಲಿ ಸಂವಿಧಾನ ರಕ್ಷಣೆ ಪಡೆಯಲು ಶ್ರಮಿಸಲಾಗುವುದು.


ಇದನ್ನೂ ಓದಿ:  Kannada Sahitya Sammelana: ನುಡಿ ಜಾತ್ರೆಗೆ ಸಂಭ್ರಮದ ತೆರೆ; ಸಮಾರೋಪದಲ್ಲಿ ರಾಜಕೀಯದ ಮಾತುಗಳು; ವೇದಿಕೆಯಲ್ಲಿ ಏಟು-ತಿರುಗೇಟು


ಇದಕ್ಕಾಗಿ ಕೇಂದ್ರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು.  ಕರ್ನಾಟಕಕ್ಕೆ ಹೊರ ರಾಜ್ಯದ ಜನ ದೊಡ್ಡ ಪ್ರಮಾಣದಲ್ಲಿ ಬರುತ್ತಿದ್ದಾರೆ ಆದರೆ ಕನ್ನಡ ಕಲಿಯುತ್ತಿಲ್ಲ, ಈ ನಾಡಿನಲ್ಲಿ ನೆಲೆಸಲು ಇಚ್ಛಿಸುವವರು ಕಡ್ಡಾಯವಾಗಿ ಕನ್ನಡ ಕಲಿಯಲೇಬೇಕೆಂಬ ನೀತಿ ಜಾರಿಗೊಳಿಸಲು ಚಿಂತನೆ ನಡೆದಿದೆ.


ಗಡಿಯಾಚೆ ಹೋರಾಡಿದ ಕನ್ನಡಿಗರಿಗೆ ಪಿಂಚಣಿ


ವಲಸೆ ಬಂದು ಇಲ್ಲಿ ನೆಲೆಸುವವರಿಗೆ ಕನ್ನಡ ಕಲಿಸಲು ವಿಶೇಷ ಕೋರ್ಸ್ ರೂಪಿಸಿ, ಜಾರಿಗೊಳಿಸುವ ಕಾರ್ಯಕ್ಕೆ ಆದಷ್ಟು ಬೇಗ ಕಾಯಕಲ್ಪ ನೀಡುತ್ತೇವೆ. ಕನ್ನಡಕ್ಕಾಗಿ ಗಡಿಯಾಚೆ ಹೋರಾಡಿದ  ಕನ್ನಡಿಗರಿಗೆ ಪಿಂಚಣಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.


ವರದಿ: ರಮೇಶ್ ಹುಣಸಿಮರದ

Published by:Mahmadrafik K
First published: