Basavaraja Bommai| ರೈತರ ಆದಾಯ ದ್ವಿಗುಣ, ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ; ಸಿಎಂ ಘೋಷಣೆ

ಇಂದು ರಾಜ್ಯ ಮತ್ತು ದೇಶದಲ್ಲಿ ಕೃಷಿ ಉತ್ಪಾದನೆ ಕೇಂದ್ರಿತ ವಾಗಿದ್ದು, ಇದು ರೈತರಿಗೆ ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿಯಲ್ಲಿ ಬದಲಾ ವಣೆಯಾಗಬೇಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ.

ಬಸವರಾಜ ಬೊಮ್ಮಾಯಿ.

 • Share this:
  ಬೆಂಗಳೂರು (ಆಗಸ್ಟ್​ 25); ಕರ್ನಾಟಕ ರಾಜ್ಯವು ರೈತರ ಆದಾಯ ದ್ವಿಗುಣಗೊ ಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉತ್ಸುಕವಾಗಿದ್ದು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕ (State of Karnataka) ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹು ದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಇಂದು ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಆದಾಯ (Formers Profit) ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ (Central Government) ರಚಿಸಿರುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ, ನಿವೃತ್ತ ಐ ಎ ಎಸ್ ಅಧಿಕಾರಿ (IAS Officers) ಅಶೋಕ್ ದಳವಾಯಿ (Ashok Dalavai) ಅವರ ವರದಿಯ ಮುಖ್ಯಾಂಶಗಳ ಪ್ರಾತ್ಯಕ್ಷಿಕೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಇಂದು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

  ಅಧಿಕಾರಿಗಳ ಸಭೆಯ ನಂತರ ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, "ಇಂದು ರಾಜ್ಯ ಮತ್ತು ದೇಶದಲ್ಲಿ ಕೃಷಿ ಉತ್ಪಾದನೆ ಕೇಂದ್ರಿತ ವಾಗಿದ್ದು, ಇದು ರೈತರಿಗೆ ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿಯಲ್ಲಿ ಬದಲಾ ವಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ಸಮಿತಿಯು ಕೇಂದ್ರ ಸರ್ಕಾರದ ಸಮಿತಿಯೊಂ ದಿಗೆ ನಿಕಟವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕವು ರಾಜ್ಯದ ಕೃಷಿ ಚಟುವಟಿಕೆ, ಹವಾಮಾನ, ಭೂ ಮಾಲೀಕತ್ವ ಮೊದಲಾದ ವಿಷಯಗಳಲ್ಲಿ ಅತ್ಯುತ್ತಮ ದತ್ತಾಂಶವನ್ನು ಹೊಂದಿದ್ದು, ಇದರ ಆಧಾರದಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಸಮಿತಿಯು ವರದಿ ನೀಡಬೇಕು" ಎಂದು ಆಶಯ ವ್ಯಕ್ತಪಡಿಸಿದರು.

  ಕೃಷಿ ಸಚಿವರ ನೇತೃತ್ವದಲ್ಲಿ ಸಮಿತಿ; 

  ಇದಲ್ಲದೆ, ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳು ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತಿರಬೇಕು. ರಾಜ್ಯದ ಕೃಷಿ ವಲಯದಲ್ಲಿ ಬೀಜ, ಗೊಬ್ಬರ ಹಾಗೂ ಕೀಟಗಳ ನಿರ್ವ ಹಣೆಗೆ ಕೃಷಿ ವಿಶ್ವವಿದ್ಯಾಲಯಗಳ ನೆರವಿನಿಂದ ಕ್ರಮ ವಹಿಸಲು, ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

  ಇದನ್ನೂ ಓದಿ: Basanagouda Patil Yatnal| ರಾಹುಲ್ ಗಾಂಧಿ ವಿರುದ್ಧ ಯತ್ನಾಳ್ ಟೀಕೆ ಸರಿಯಲ್ಲ, ಪಂಚಮಸಾಲಿ ಮುಖಂಡರಿಂದಲೇ ಟೀಕೆ!

  ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ

  ಕೃಷಿ, ತೋಟಗಾರಿಕೆ, ಡೈರಿ, ಪ್ರಾಣಿಜನ್ಯ ಉತ್ಪನ್ನಗಳ ಸಂಸ್ಕರಣೆ ಹಾಗೂ ಗ್ರಾಮೀಣ ಮತ್ತು ಗುಡಿ ಕೈಗಾರಿಕೆಯ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದ ಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ ಪೂರಕವಾಗಿ ಸೆಕೆಂಡರಿ ಅಗ್ರಿಕಲ್ಚರ್ (ಡೈರೆಕ್ಟೊರೇಟ್ ) ನಿರ್ದೇ ನಾಲಯವನ್ನು ಸ್ಥಾಪಿಸಲಾಗುವುದು. ಇದರಿಂದ ಕೃಷಿ ಉತ್ಪನ್ನಗಳಿಂದ ಉಪ ಕೃಷಿ ಉತ್ಪನ್ನ ತಯಾರಿಸಲಾಗುವುದು.

  ಇದನ್ನೂ ಓದಿ: Anand Singh| ಅಸಮಾಧಾನ ಕೈಬಿಟ್ಟ ಆನಂದ್​ ಸಿಂಗ್; ಇಂದು ಪರಿಸರ ಇಲಾಖೆ ಅಧಿಕಾರಿಗಳ ಜೊತೆ ಸಭೆ!

  ಇದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಒಟ್ಟಾರೆ ರೈತರ ಆದಾಯ ಹೆಚ್ವುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ತಿಳಿಸಿದರು. ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂ ಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳ ಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: