ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಕೇಂದ್ರಕ್ಕೆ ಸಿಎಂ ಸ್ಪಷ್ಟನೆ

ಪಶ್ಚಿಮ ಘಟ್ಟ ಪ್ರದೇಶದ (Western Ghats) ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ (Kasturi Rangan Report ) ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ

 • Share this:
  ಬೆಂಗಳೂರು (ಡಿ. 4) : ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ (Western Ghats as eco-sensitive zones)  ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಸ್ಪಷ್ಟಪಡಿಸಿದರು.  ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ (Kasturi Rangan Reort) ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ರು ರಾಜ್ಯದ ಈ ನಿಲುವಿನ ಬಗ್ಗೆ ಕೇಂದ್ರಕ್ಕೆ ತಿಳಿಸಿದರು. 

  ಕೂಲಂಕಷವಾಗಿ ಸಮಾಲೋಚನೆ ಬಳಿಕ ನಿರ್ಧಾರ

  ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಭೆಯ ಗಮನಕ್ಕೆ ತಂದರು.

  ಜೀವನೋಪಾಯಕ್ಕೆ ಧಕ್ಕೆ

  ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ.  ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

  ವಸ್ತುಸ್ಥಿತಿ  ಭಿನ್ನ

  ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

  ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು.

  ಇದನ್ನು ಓದಿ: ಪ್ರಥಮ ಮತ್ತು ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಸಮಯ ಬದಲಾವಣೆ

  ಸಭೆಯಲ್ಲಿ ಸಚಿವರಾದ ಅರಗ ಜ್ನಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

  ಏನಿದು ಕಸ್ತೂರಿ ರಂಗನ್‌ ವರದಿ?

  ಸುಪ್ರೀಂಕೋರ್ಟ್‌ ಪಶ್ಚಿಮ ಘಟ್ಟದ ರಕ್ಷಣೆಗಾಗಿ ಕೇಂದ್ರ ಸರ್ಕಾರಕ್ಕೆ ಒತ್ತಡ ತಂದಿತ್ತು. ಈ ಹಿನ್ನೆಲೆಯಲ್ಲಿ 2010ರಲ್ಲಿ ಮಾಧವನ್‌ ಗಾಡ್ಗೀಳ್‌ ಸಮಿತಿ ರಚನೆ ಮಾಡಬೇಕಾಯ್ತು. ಈ ಸಮಿತಿ ನೀಡಿದ ವರದಿ ಕೇಂದ್ರ ಸರ್ಕಾರಕ್ಕೆ ಇಷ್ಟವಾಗದ ಕಾರಣ, ಅಂದಿನ ಮಂತ್ರಿ ನಟರಾಜ್‌ ಬಾಹ್ಯಾಕಾಶ ವಿಜ್ಞಾನಿ ಡಾ. ಕಸ್ತೂರಿ ರಂಗನ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿತು. ಈ ಸಮಿತಿಯೂ 173 ಪುಟಗಳ ವರದಿಯೊಂದಿಗೆ 407 ಪುಟಗಳ ವಿಸ್ತೃತ ವರದಿ ಒಟ್ಟು 580 ಪುಟಗಳ ವರದಿ ಕೇಂದ್ರ ಸರ್ಕಾರಕ್ಕೆ ನೀಡಿತ್ತು.

  ಇದನ್ನು ಓದಿ: ಅಮೆರಿಕಕ್ಕೆ ಹೊರಟ್ಟಿದ್ದ ಏರ್​ ಇಂಡಿಯಾ ಪ್ರಯಾಣಿಕ ಸಾವು; ಮಾರ್ಗ ಮಧ್ಯೆಯೇ ದೆಹಲಿಗೆ ಹಿಂದಿರುಗಿದ ವಿಮಾನ

  ಪಶ್ಚಿಮ ಘಟ್ಟ ಪ್ರದೇಶದಲ್ಲಿ ಜೀವಿ ಪರಿಸರಾತ್ಮಕ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲು ವೈಜ್ಞಾನಿಕ, ವಸ್ತುನಿಷ್ಠ, ಕಾರ್ಯಸಾಧ್ಯವಾದ ಮಾರ್ಗ ವಿಕಾಸಪಡಿಸಲು ರಾಷ್ಟ್ರೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಹಾಯ ಪಡೆದು ಜೈವಿಕ ಶ್ರೀಮಂತಿಕೆ, ಛಿದ್ರೀಕರಣ, ಜನಸಾಂದ್ರತೆಮ, ಸಂರಕ್ಷಿತ ಪ್ರದೇಶ ದತ್ತಾಂಶವನ್ನು ವರದಿಯಲ್ಲಿ ಉಲ್ಲೇಖಿಸಿತು.
  Published by:Seema R
  First published: