• Home
  • »
  • News
  • »
  • state
  • »
  • Basavaraj Bommai: ದೇವೇಂದ್ರ ಫಡ್ನವಿಸ್ ಹೇಳಿಕೆಗೆ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

Basavaraj Bommai: ದೇವೇಂದ್ರ ಫಡ್ನವಿಸ್ ಹೇಳಿಕೆಗೆ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

ಬಸವರಾಜ್ ಬೊಮ್ಮಾಯಿ , ಸಿಎಂ

ಬಸವರಾಜ್ ಬೊಮ್ಮಾಯಿ , ಸಿಎಂ

ಮಹಾರಾಷ್ಟ್ರ ಸರ್ಕಾರ (Maharashtra Government) 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್​​ನಲ್ಲಿ (Supreme Court) ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ.

  • Share this:

ಮಹಾರಾಷ್ಟ್ರದ (Maharashtra) ಒಂದೇ ಒಂದು ಗ್ರಾಮ, ಪಟ್ಟಣವನ್ನು ಕರ್ನಾಟಕದಲ್ಲಿ (Karnataka) ವಿಲೀನಗೊಳಿಸುವುದಿಲ್ಲ ಎಂಬ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Maharashtra DCM Devendra Fadnvis) ಸರಣಿ ಟ್ವೀಟ್​​ಗೆ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ತಿರುಗೇಟು ನೀಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ (Karnataka-Maharashtra Border) ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ (Karnataka Government) ಕಟಿ ಬದ್ಧವಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ (Solapur), ಅಕ್ಕಲಕೋಟೆ (Akkalakote) ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ.


ಮಹಾರಾಷ್ಟ್ರ ಸರ್ಕಾರ (Maharashtra Government) 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್​​ನಲ್ಲಿ (Supreme Court) ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದು ಹೇಳಿದ್ದಾರೆ.


ಸರ್ವಪಕ್ಷಗಳ ಸಭೆ ಕರೆಯುವ ಸಾಧ್ಯತೆ


ಇನ್ನೂ ಶೀಘ್ರವೇ ಗಡಿ ವಿಚಾರ ಸಂಬಂಧಿಸಿದಂತೆ ಚರ್ಚೆ ಮಾಡಲು ಸಿಎಂ ಬೊಮ್ಮಾಯಿ, ಸರ್ವಪಕ್ಷಗಳ ಸಭೆ ಕರೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಗಡಿ ವಿವಾದ ಇತ್ಯರ್ಥಕ್ಕೆ ಏಕನಾಥ್ ಶಿಂಧೆ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಮನವಿ ನೀಡುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ನಿಯೋಗವು ಮೋದಿ ಅವರನ್ನ ಭೇಟಿ ಮಾಡಿ ತಿರುಗೇಟು ನೀಡುವ ಸಾಧ್ಯತೆ ಇದೆ.


cm basavaraj bommai hit back maharashtra dcm devendra fadnavis statement mrq
ಬಸವರಾಜ್ ಬೊಮ್ಮಾಯಿ, ಸಿಎಂ


ಸರ್ವಪಕ್ಷ ಸಭೆ ಕರೆಯಿರಿ: ಸಿದ್ದರಾಮಯ್ಯ


ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ:  Border Conflict: ಇಂದು ಸುಪ್ರೀಂ ಕೋರ್ಟ್​ನಲ್ಲಿ ಬೆಳಗಾವಿ ಗಡಿ ವಿವಾದ ಕೇಸ್ ವಿಚಾರಣೆ; ಕುತೂಹಲಕ್ಕೆ ಇಂದೇ ಬೀಳಲಿದ್ಯಾ ತೆರೆ?


ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿ ವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ.


cm basavaraj bommai hit back maharashtra dcm devendra fadnavis statement mrq
ಮಾಜಿ ಸಿಎಂ ಸಿದ್ದರಾಮಯ್ಯ


ಸಿಎಂ ಬೊಮ್ಮಾಯಿಗೆ ಸಲಹೆ


ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ‌. ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ ಮಾಡಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


ಇದನ್ನೂ ಓದಿ:  Karnataka: ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಸರ್ಕಾರದಿಂದ ಅನುದಾನ; ಸಿಎಂ ಬೊಮ್ಮಾಯಿ


ಎಲ್ಲರ ಚಿತ್ತ ಸುಪ್ರೀಂ ನತ್ತ


ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇಂದು ಅಂತಿಮ ತೀರ್ಪುನ್ನು ಸುಪ್ರೀಂ ಕೋರ್ಟ್ ಪ್ರಕಟ ಮಾಡೋ ನಿರೀಕ್ಷೆ ಇದೆ. ಗಡಿ ವಿವಾದ ಕೋರ್ಟ್ ವ್ಯಾಪ್ತಿಗೆ ಬರುತ್ತೋ? ಇಲ್ವೋ? ಎಂಬ ಬಗ್ಗೆ ಅಂತಿಮ ತೀರ್ಪು ಪ್ರಕಟವಾಗಲಿದೆ.


ಗಡಿ ವಿವಾದ ಸುಪ್ರೀಂ ಕೋರ್ಟ್ ವ್ಯಾಪ್ತಿಗೆ ಬರಲ್ಲ ಎಂದು ಕರ್ನಾಟಕ ಪ್ರಬಲ ವಾದ ಮಾಡುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪಿಗೆ ಕೌಂಟ್‌ಡೌನ್ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಸರ್ಕಾರ ಅಲರ್ಟ್ ಆಗಿವೆ.

Published by:Mahmadrafik K
First published: