Basavaraj Bommai: ಇಂದು ಹೈಕಮಾಂಡ್​ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ; ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

ಇದರೊಂದಿಗೆ ಆನಂದ್ ಸಿಂಗ್ ಖಾತೆ ಬದಲಾವಣೆ ವಿಚಾರವನ್ನೂ ಸಹ ಬೊಮ್ಮಾಯಿ ಹೈಕಮಾಂಡ್​ ಮುಂದೆ ಪ್ರಸ್ತಾಪಿಸಲಿದ್ದಾರೆ. ಸಿಂಗ್ ಖಾತೆಯನ್ನು ಅದಲು-ಬದಲು ಮಾಡುವ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಸಚಿವ ಆನಂದ್ ಸಿಂಗ್​ ಸಿಎಂ ದೆಹಲಿ ಪ್ರವಾಸದಿಂದ ತಮ್ಮ ಖಾತೆ ಬದಲಾವಣೆ ನಿರೀಕ್ಷೆಯಲ್ಲಿದ್ದಾರೆ. 

ಬಸವರಾಜ ಬೊಮ್ಮಾಯಿ.

ಬಸವರಾಜ ಬೊಮ್ಮಾಯಿ.

 • Share this:
  ಬೆಂಗಳೂರು(ಆ.25): ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ನಾಯಕರನ್ನು ಭೇಟಿಯಾಗಲು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​​ ಅವರನ್ನು ಭೇಟಿಯಾಗಲಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.20ಕ್ಕೆ ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಸಿಎಂ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡ ಸಿಎಂ ಜೊತೆ ಪ್ರಯಾಣ ಬೆಳೆಸಲಿದ್ದಾರೆ.

  ದೆಹಲಿಯಲ್ಲಿ ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ.  ಮೇಕೆದಾಟು ಯೋಜನೆ ಕಾಮಗಾರಿಗೆ ಕೇಂದ್ರ ನೀರಾವರಿ ಸಚಿವರಿಂದ ಒಪ್ಪಿಗೆ ಪಡೆಯುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಕಳಸಾ ಬಂಡೂರಿ ಯೋಜನೆ ಕಾಮಗಾರಿಗಳ ಬಗ್ಗೆಯೂ ಸಿಎಂ ಬೊಮ್ಮಾಯಿ ಕೇಂದ್ರ ಸಚಿವ ಶೇಖಾವತ್​ ಜೊತೆ ಚರ್ಚಿಸಲಿದ್ದಾರೆ.

  ಇದನ್ನೂ ಓದಿ:Karnataka Weather Today: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ

  ಇದರೊಂದಿಗೆ ಅಂತರ್ ರಾಜ್ಯ ನದಿ ನೀರು ವಿವಾದ ಕುರಿತಾಗಿಯೂ ಕೇಂದ್ರ ಸಚಿವರೊಂದಿಗೆ  ಚರ್ಚೆ ನಡೆಸಲಿದ್ದಾರೆ. ಕೇಂದ್ರ ನೀರಾವರಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ ಜೊತೆಗೆ ಮಾತುಕತೆ ನಡೆಸುವ ಜೊತೆಗೆ ಕಾನೂನು ತಂಡದೊಂದಿಗೂ ಚರ್ಚೆ ನಡೆಸಲಿದ್ದಾರೆ.

  ಇದಾದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್​ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಆಡಳಿತದ ಬಗ್ಗೆಯೂ ಸಿಎಂ ಹೈಕಮಾಂಡ್​​ಗೆ ಮಾಹಿತಿ ನೀಡಲಿದ್ದಾರೆ. ಮುಖ್ಯವಾಗಿ ಇನ್ನೂ ಖಾಲಿ ಉಳಿದಿರುವ ನಾಲ್ಕು ಸಚಿವ ಸ್ಥಾನ ಭರ್ತಿ ಸಂಬಂಧ ಸಿಎಂ ಹೈಕಮಾಂಡ್​ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಈ ಕುರಿತು ಚರ್ಚಿಸಲಿದ್ದಾರೆ.

  ಇದರೊಂದಿಗೆ ಆನಂದ್ ಸಿಂಗ್ ಖಾತೆ ಬದಲಾವಣೆ ವಿಚಾರವನ್ನೂ ಸಹ ಬೊಮ್ಮಾಯಿ ಹೈಕಮಾಂಡ್​ ಮುಂದೆ ಪ್ರಸ್ತಾಪಿಸಲಿದ್ದಾರೆ. ಸಿಂಗ್ ಖಾತೆಯನ್ನು ಅದಲು-ಬದಲು ಮಾಡುವ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಸಚಿವ ಆನಂದ್ ಸಿಂಗ್​ ಸಿಎಂ ದೆಹಲಿ ಪ್ರವಾಸದಿಂದ ತಮ್ಮ ಖಾತೆ ಬದಲಾವಣೆ ನಿರೀಕ್ಷೆಯಲ್ಲಿದ್ದಾರೆ.

  ಇದನ್ನೂ ಓದಿ:Gold Price Today: ಭಾರೀ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ..!

  ನಿನ್ನೆ ಸಿಎಂ ಮನವೊಲಿಕೆ ಬಳಿಕ ಸಚಿವ ಆನಂದ್​ ಸಿಂಗ್​ ಅವರು ಪ್ರವಾಸೋದ್ಯಮ ಖಾತೆಯನ್ನು ಸ್ವೀಕರಿಸಿದ್ದರು. ಬುಧವಾರ ಹೈ ಕಮಾಂಡ್​ ಭೇಟಿ ಮಾಡಿ ಅಲ್ಲಿ ಈ ಖಾತೆ ಬದಲು ವಿಚಾರವನ್ನು ಪ್ರಸ್ತಾಪಿಸುವುದಾಗಿ ಸಿಎಂ ಆನಂದ್​ ಸಿಂಗ್​ಗೆ ಹೇಳಿದ್ದರು. ಇದಕ್ಕೆ ಒಪ್ಪಿದ ಆನಂದ್ ಸಿಂಗ್ ಸಿಎಂ ಮೇಲೆ ಭರವಸೆ ಇಟ್ಟು ಅಧಿಕಾರ ಸ್ವೀಕಾರ ಮಾಡಿದ್ದರು. ಇಂದು ಬೊಮ್ಮಾಯಿ ಅವರು ಹೈಕಮಾಂಡ್​ ಭೇಟಿ ಮಾಡಿ ಈ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಆನಂದ್​ ಸಿಂಗ್ ಇದ್ದಾರೆ.

  ಇಂದು ಮಧ್ಯಾಹ್ನ 1.20ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡುವ ಸಿಎಂ ಬೊಮ್ಮಾಯಿ, ಗುರುವಾರ ಸಂಜೆಯೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನಾಳೆ ಸಂಹೆ 4.05ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Latha CG
  First published: