ಧಾರವಾಡ: ನಮ್ಮ ಆರೋಗ್ಯ, ನಮ್ಮ ಸಮೀಪ ಎಂಬ ಧೇಯವಾಕ್ಯದೊಂದಿಗೆ ಸರ್ವಾರಿಗೂ ಉತ್ತಮ ಚಿಕಿತ್ಸಾ ಸೌರ್ಯಗಳು ಲಭ್ಯವಾಗುವಂತೆ ಮಾಡಲು ರಾಜ್ಯ ಸರ್ಕಾರ ಇಂದು ನಮ್ಮ ಕ್ಲಿನಿಕ್ (Namma Clinic) ಯೋಜನೆಯನ್ನು ಉದ್ಘಾಟನೆ ಮಾಡಿದ್ದು, ಏಕಕಾಲದಲ್ಲಿ ಬರೋಬ್ಬರಿ 114 ನಮ್ಮ ಕ್ಲಿನಿಕ್ ಕೇಂದ್ರಗಳಿಗೆ ಚಾಲನೆ ನೀಡಿದೆ. ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಹುಬ್ಬಳಿಯ (Hubli) ರೇಣುಕಾ ನಗರದಲ್ಲಿ ನಮ್ಮ ಕ್ಲಿನಿಕ್ಅನ್ನು ಲೋಕಾರ್ಪಣೆ ಮಾಡುವ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಇಂತಹ ಸಾಧನೆ ಮಾಡಿದ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದಾರೆ.
ಯೋಜನೆ ಲೋಕಾರ್ಪಣೆ ಮಾಡುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಇವತ್ತು ಹುಬ್ಬಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ ಮಾಡಲಿದ್ದೇವೆ. ಈ ಸಂದರ್ಭದಲ್ಲಿ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದೇವೆ. ಪ್ರಾಥಮಿಕ ಹಂತದಲ್ಲೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ. ಈ ಬಜೆಟ್ ನಲ್ಲಿ ನಮ್ಮ ಕ್ಲಿನಿಕ್ ಗೆ ಹೆಚ್ಚು ಒತ್ತು ನೀಡಲಿದ್ದೇವೆ. ಯೋಜನೆಗೆ ಚಾಲನೆ ನೀಡಿದ ಬಳಿಕ ಹುಬ್ಬಳ್ಳಿಯಿಂದ ದೆಹಲಿಗೆ ಹೊರಡುತ್ತಿದ್ದು, ಗಡಿ ವಿಚಾರದಲ್ಲಿ ನಮ್ಮ ನಿಲುವನ್ನು ಗೃಹ ಸಚಿವ ಅಮಿತ್ ಶಾ ಅವರಿಗೆ ಸ್ಪಷ್ಟಪಡಿಸ್ತೇನೆ ಎಂದು ತಿಳಿಸಿದರು.
12 ಪ್ರಮುಖ ಸೇವೆ ಒದಗಿಸಲಿರುವ ನಮ್ಮ ಕ್ಲಿನಿಕ್
* ಗರ್ಭಿಣಿ ಆರೈಕೆ
* ಶಿಶುವಿನ ಆರೈಕೆ
* ಮಕ್ಕಳ ಸೇವೆ
* ಕುಟುಂಬ ಕಲ್ಯಾಣ ಸೇವೆ
* ಸಾಂಕ್ರಾಮಿಕ ರೋಗಗಳ ನಿರ್ವಹಣೆ
* ಸಂಪೂರ್ಣ ಓಪಿಡಿ ಸೇವೆಗಳು
* ಮಧುಮೇಹ, ರಕ್ತದೊತ್ತಡ ಚೆಕ್ ಅಪ್
* ಕ್ಯಾನ್ಸರ್ ಸ್ಕ್ರೀನಿಂಗ್ ಸೇವೆ
ಬಾಯಿ ಆರೋಗ್ಯ ಸಮಸ್ಯೆಗಳು ಸೇವೆ
* ಕಣ್ಣಿನ ತಪಾಸಣೆ
* ಮೂಗು, ಗಂಟಲು ENT ಸೇವೆಗಳು
* ಮಾನಸಿಕ ಆರೋಗ್ಯ ಸ್ಕ್ರೀನಿಂಗ್ ಸೇವೆ
* ವೃದ್ಧಾಪ್ಯ ಆರೈಕೆ
ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಒಟ್ಟು 12 ಪ್ರಮುಖ ಆರೋಗ್ಯ ಸೇವೆಗಳು ನಮ್ಮ ಕ್ಲಿನಿಕ್ ನಲ್ಲಿ ಲಭ್ಯವಿರಲಿದ್ದು, ಎಲ್ಲಾ ಸೇವೆಗಳು ಉಚಿತವಾಗಿ ಸಿಗಲಿದೆ.
ಇದನ್ನೂ ಓದಿ: Food Price Hike: ಹಾಲು, ಮೊಸರು, ತುಪ್ಪ ಏರಿಕೆ ಬೆನ್ನಲ್ಲೇ ಗ್ರಾಹಕರಿಗೆ ಮೊತ್ತೊಂದು ಶಾಕ್!
ಎಲ್ಲಾ ಸೇವೆಗಳು ಉಚಿತ
ಚಿಕಿತ್ಸೆ ಜೊತೆಗೆ ಪ್ರಯೋಗಾಲಯ ಸೇವೆಗಳು ಹಾಗೂ ಔಷಧಿಗಳೂ ಕೂಡ ಸಂಪೂರ್ಣ ಉಚಿತವಾಗಿರಲಿದೆ. 14 ಮಾದರಿಯ ಟೆಸ್ಟ್ ಗಳು ನಮ್ಮ ಕ್ಲಿನಿಕ್ ನಲ್ಲಿ ಸಂಪೂರ್ಣ ಉಚಿತವಿದೆ. ಪ್ರತಿನಿತ್ಯ ಬೆಳಗ್ಗೆ 9 ರಿಂದ ಸಂಜೆ 4:30ರ ವರೆಗೆ ನಮ್ಮ ಕ್ಲಿನಿಕ್ ಓಪನ್ ಇರಲಿದೆ. ಸೋಮವಾರದಿಂದ ಶನಿವಾರದ ವರೆಗೆ ಜನರಿಗೆ ಸೇವೆ, ಭಾನುವಾರ ರಜೆ ಇರಲಿದೆ.
ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್ನಲ್ಲಿ ಒಂದು ಕ್ಲಿನಿಕ್ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದೆ.
ಇದನ್ನೂ ಓದಿ: Shivamogga: ವಿವಾಹಿತೆ ಕಿಡ್ನ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್, ಪ್ರಿಯಕರನಿಂದಲೇ ಮಹಿಳೆಯ ಅಪಹರಣ!
ನಮ್ಮ ಕ್ಲಿನಿಕ್ ಆರಂಭದ ಹಿಂದಿನ ಉದ್ದೇಶವೇನು?
ಜನರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಅನುಕೂಲವಾಗುವಂತೆ. ನಗರ ಪ್ರದೇಶದಲ್ಲಿ ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿನ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್ಗಳನ್ನು ರಾಜ್ಯ ಸರ್ಕಾರ ಆರಂಭ ಮಾಡುತ್ತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ