ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ, ಬಿಎಸ್​ವೈ, ಕಿಚ್ಚ ಸುದೀಪ್

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಕೂಡ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.

ನರೇಂದ್ರ ಮೋದಿ-ಕಿಚ್ಚ ಸುದೀಪ್

ನರೇಂದ್ರ ಮೋದಿ-ಕಿಚ್ಚ ಸುದೀಪ್

  • Share this:
    ಬೆಂಗಳೂರು(ಜು.28): ಕರ್ನಾಟಕದ ನೂತನ ಮುಖ್ಯಮಂತ್ರಿಗಾಗಿ ಇಂದು ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯದ 30ನೇ ಸಿಎಂ ಆಗಿ ಬೊಮ್ಮಾಯಿ ಅವರು ರಾಜಭವನದ ಗಾಜಿನ ಮನೆಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ನೂತನ ಸಿಎಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

    ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ತಿಳಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿರುವ ಮೋದಿ, ಶುಭಾಶಯ ತಿಳಿಸಿದ್ದಾರೆ. ಅವರಿಗೆ ಸಾಕಷ್ಟು ಅನುಭವ ಇರುವುದರಿಂದ ಬೊಮ್ಮಾಯಿ ಉತ್ತಮ ಆಡಳಿತ ನೀಡಲಿದ್ದಾರೆ.  ಅವರು ಉತ್ತಮ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದ್ದಾರೆ.





    ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ಕೂಡ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.





    ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್​ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಅವರ ಸರಳತೆಯ ಜೀವನ ನೋಡಿ ನಾನು ಬೆಳೆದೆ. ನಾನು ನನ್ನ ವೃತ್ತಿ ಜೀವನ ಆರಂಭಿಸಿದ ದಿನಗಳಲ್ಲಿ ವೈಯಕ್ತಿಕವಾಗಿ ಬಹಳಷ್ಟು ಸಹಾಯ ಮಾಡಿದ್ದಾರೆ ಎಂದು ಹೇಳಿರುವ ಕಿಚ್ಚ ಸುದೀಪ್, ಕೊನೆಯಲ್ಲಿ ವಿಶಿಂಗ್​ ಯು ದಿ ಬೆಸ್ಟ್ ಮಾಮ ಎಂದು ಶಭಾಶಯ ತಿಳಿಸಿದ್ದಾರೆ.







    ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಹಿನ್ನೆಲೆ, ಬೊಮ್ಮಾಯಿಗೆ ಹೈಕಮಾಂಡ್ ನಾಯಕರು ಶುಭಾಶಯ ಕೋರಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಸೇರಿದಂತೆ ಹಲವು ನಾಯಕರು ದೂರವಾಣಿ ಮೂಲಕ ಶುಭ ಹಾರೈಸಿದ್ದಾರೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
    Published by:Latha CG
    First published: