ಕಲಬುರಗಿ: ಜಗತ್ತಿನ ಎಲ್ಲ ವಿಷವನ್ನ ಕುಡಿಯಬಲ್ಲ ನೀಲಕಂಠನ ಸರ್ಪ ನರೇಂದ್ರ ಮೋದಿ (Narendra Modi) ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj bommai) ಅವರು ಕೊಂಡಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನರೇಂದ್ರ ಮೋದಿ (Narendra Modi) ಅವರನ್ನು ವಿಷಸರ್ಪ ಎಂದಿರುವ ಬಗ್ಗೆ ಮಾತನಾಡಿದ ಬೊಮ್ಮಾಯಿ, ನರೇಂದ್ರ ಮೋದಿ ಅವರು ನೀಲಕಂಠ ಎಂದು ಹೇಳಿದರು.
ಇದನ್ನೂ ಓದಿ: Siddaramaiah: ಶೋಭಾ ಕರಂದ್ಲಾಜೆಯನ್ನು ವಿಚಾರಣೆಗೊಳಪಡಿಸಿ ಚುನಾವಣಾ ಪ್ರಚಾರದಿಂದ ನಿಷೇಧಿಸಿ: ಸಿದ್ದರಾಮಯ್ಯ ಆಕ್ರೋಶ
ಮೋದಿ ಎಂದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ಗೆ ನಿದ್ದೆನೇ ಬರೋದಿಲ್ಲ
ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನಾಯಕ ನರೇಂದ್ರ ಮೋದಿಗೆ ವಿಷಸರ್ಪ ಎಂದಿದ್ದಾರೆ ಎಂದು ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಪ ಶಿವನ ಕೊರಳಲ್ಲಿ ಇರುತ್ತದೆ. ಜಗತ್ತಿನ ಎಲ್ಲ ವಿಷವನ್ನ ಕುಡಿಯಬಲ್ಲ ನೀಲಕಂಠ ನರೇಂದ್ರ ಮೋದಿ. ನರೇಂದ್ರ ಮೋದಿ ಎಂದರೆ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ಗೆ ನಿದ್ದೆನೇ ಬರೋದಿಲ್ಲ. ಮೋದಿ ಕಾಲಿಟ್ಟ ಕಡೆ ಕಾಂಗ್ರೆಸ್ ಸೋತು ಸುಣ್ಣವಾಗಿದೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಬಡತನ ಓಡಿಸಿ ಸಶಕ್ತ ಭಾರತ ಕಟ್ಟಲು ಮೋದಿ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.
ಜನರಿಗೆ ಕಾಂಗ್ರೆಸ್ ಮೋಸ ಮಾಡುವ ಕೆಲಸ ಮಾಡುತ್ತಿದೆ
ಇನ್ನು ಮೀಸಲಾತಿ ವಿಚಾರವಾಗಿಯೂ ಮಾತನಾಡಿದ ಸಿಎಂ, ಜೇನು ಗೂಡಿಗೆ ಕೈಹಾಕಿ ಮೀಸಲಾತಿ ಜಾರಿಗೊಳಿಸಿದ್ದೇನೆ. ಜೇನು ಕಡಿದರೂ ಪರ್ವಾಗಿಲ್ಲ ಅಂತಾ ಮೀಸಲಾತಿ ನೀಡಿದ್ದೇನೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕ್ರಾಂತಿಕಾರಿ ನಿರ್ಣಯ ಮಾಡಿದ್ದೇನೆ. ಕಾಂಗ್ರೆಸ್ ದಿನಕ್ಕೊಂದು ಗ್ಯಾರಂಟಿ ಕೊಡುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದಿದ್ದಾರೆ. ನಾವು ಈಗಾಗಲೇ ಉಚಿತ ಬಸ್ ಪಾಸ್ ಬಜೆಟ್ ನಲ್ಲಿ ಘೋಷಿಸಿದ್ದೇನೆ. ಜನರಿಗೆ ಕಾಂಗ್ರೆಸ್ ಮೋಸ ಮಾಡುವ ಕೆಲಸ ಮಾಡುತ್ತಿದೆ. ಮೇ 10 ರವರೆಗೆ ಕಾಂಗ್ರೆಸ್ ಗ್ಯಾರಂಟಿ ಗ್ಯಾರಂಟಿ ನೀಡುತ್ತೆ. ನಂತರ ಗಳಗಂಟಿ ಗಳಗಂಟಿ ನೀಡುತ್ತೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ: Pralhad Joshi: ಕರ್ನಾಟಕಕ್ಕೆ ನರೇಂದ್ರ ಮೋದಿ ಆದೇಶ ಪಾಲಿಸುವ ಸಿಎಂ ಮತ್ತು ಮಂತ್ರಿ ಬೇಕಾಗಿದೆ: ಪ್ರಹ್ಲಾದ್ ಜೋಶಿ
ಇದಕ್ಕೂ ಮುನ್ನ ಸೇಡಂ ಪಟ್ಟಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬೃಹತ್ ರೋಡ್ ಶೋ ನಡೆಸಿದ್ರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಡಿಕೆಶಿ ಸುರ್ಜೆವಾಲ ವಿರುದ್ಧ ವಾಗ್ದಾಳಿ ನಡೆಸಿದ್ರು. ಮೀಸಲಾತಿ ಭಿಕ್ಷೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ, ಹಿಂದುಳಿದ ಲಿಂಗಾಯತರು, ವಕ್ಕಲಿಗರು ಭಿಕ್ಷುಕರಾ? ಸದಾ ಕಾಲ ಇವರನ್ನ ಭಿಕ್ಷುಕರನ್ನಾಗಿ ನೋಡುತ್ತಾ ಬಂದಿದ್ದಾರೆ. ಬಸವರಾಜ್ ಬೊಮ್ಮಾಯಿ ಸಿಎಂ ಆಗ್ತಾರೆ ಅಂತಾ ಗೊತ್ತಿರಲಿಲ್ಲ. 30 ವರ್ಷಗಳಿಂದ ಒಳಮೀಸಲಾತಿ ಹೆಚ್ಚಳ ಬಗ್ಗೆ ಬೇಡಿಕೆ ಇತ್ತು. ಕೆಲ ಸಮುದಾಯಗಳನ್ನ ಓಟ್ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ