ಧಾರವಾಡ: ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು (Congress-JDS Candidates) ಮತ್ತು ಸಂಬಂಧಿಕರ ಮನೆಗಳ ಮೇಲೆ ಐಟಿ ಮತ್ತು ಲೋಕಾಯಕ್ತ ದಾಳಿ (IT And Lokayukta Raid) ನಡೆಯಲಿದೆ ಎಂಬ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Congress MLA Laxmi Hebbalkar) ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ತಿರುಗೇಟು ನೀಡಿದ್ದಾರೆ. ಕಳ್ಳನ ಮನಸ್ಸು ಹುಳ್ಳುಳ್ಳಗೆ ಎಂದು ಹೆಬ್ಬಾಳ್ಕರ್ ಹೇಳಿಕೆಗೆ ಸಿಎಂ ವ್ಯಂಗ್ಯವಾಡಿದರು. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಕಲಘಟಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ್ ಛಬ್ಬಿ (Nagaraj Chabbi), ಹುಬ್ಬಳ್ಳಿ ಪೂರ್ವ ಕ್ಷೇತ್ರದ ಅಭ್ಯರ್ಥಿ ಡಾ. ಕ್ರಾಂತಿಕಿರಣ ರಹಸ್ಯ ಸಭೆ ನಡೆಸಿದ್ದರು. ಕಲಘಟಗಿಯಲ್ಲಿ ಸಂತೋಷ್ ಲಾಡ್ ಕಟ್ಟಿಹಾಕಲು ಸ್ಟಾರ್ ಪ್ರಚಾರಕರನ್ನು ಕಳಿಸುವಂತೆ ನಾಗರಾಜ್ ಛಬ್ಬಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೊಮ್ಮಾಯಿಯೇ ಮುಂದಿನ ಸಿಎಂ ಅಭ್ಯರ್ಥಿ ಎಂಬ ಜೆಪಿ ನಡ್ಡಾ ಹೇಳಿಕೆಗೆ ಪ್ರತಿಕ್ರಿಯಿಸಿದರು. ನನ್ನ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟು ಒಳ್ಳೆಯ ಮಾತು ಹೇಳಿದ್ದಾರೆ. ಅಮಿತ್ ಶಾ ಅವರ ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಹೇಳಿದ್ದೆ. ನಮ್ಮ ಪಕ್ಷದಲ್ಲಿ ಸ್ಪಷ್ಟ ನಿಲುವಿದೆ ಎಂದರು.
ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವೆ
ಕೇಂದ್ರ ಸಂಸದೀಯ ಮಂಡಳಿ ಮತ್ತು ಶಾಸಕರು ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡ್ತಾರೆ. ನಡ್ಡಾ ಅವರು ಹೇಳಿದ ಮಾತಿಗೆ ನಾನು ಚಿರ ಋಣಿಯಾಗಿರುತ್ತೇನೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.
ಪ್ರಿಯಾಂಕಾ ಗಾಂಧಿ ಹೇಳಿಕೆಗೆ ತಿರುಗೇಟು
ಪ್ರವಾಹದ ಸಂದರ್ಭದಲ್ಲಿ ಮೋದಿ ರಾಜ್ಯಕ್ಕೆ ಬಂದಿಲ್ಲ ಎಂಬ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಪ್ರವಾಹ ಬಂದಾಗ ಹೆಚ್ಚಿನ ಅನುದಾನ ಕೊಟ್ಟಿದ್ದು ಮೋದಿ ಸರ್ಕಾರ. ಪ್ರಿಯಾಂಕಾ ಗಾಂಧಿಯವರ ಸರ್ಕಾರ ಇದ್ದಾಗ ಮನೆ ಬಿದ್ದರೆ ಎರಡು ಸಾವಿರ ಕೊಡುತ್ತಿದ್ದರು. ಅತಿವೃಷ್ಟಿ ಪರಿಹಾರ ಮೋದಿ ಅವರ ಕಾಲದಲ್ಲಿ ಹೆಚ್ಚಿಸಲಾಗಿದೆ ಎಂದರು.
ಇದನ್ನೂ ಓದಿ: Hubballi: ಸೋಲಿಸಲು ಕರೆ ನೀಡಿದ್ದ ಯಡಿಯೂರಪ್ಪಗೆ ಟಕ್ಕರ್ ಕೊಟ್ಟ ಜಗದೀಶ್ ಶೆಟ್ಟರ್
ಜನರನ್ನ ಮರಳು ಮಾಡಲು ಸಾಧ್ಯವಿಲ್ಲ
ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕಾ, ರಾಹುಲ್ ಬಂದಿದ್ರಾ? ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ