• Home
  • »
  • News
  • »
  • state
  • »
  • CM Basavaraj Bommai: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

CM Basavaraj Bommai: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ, ರಾಹುಲ್​ ಗಾಂಧಿ

ಬಸವರಾಜ ಬೊಮ್ಮಾಯಿ, ರಾಹುಲ್​ ಗಾಂಧಿ

ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು ಎಂದು ಪರಿಶೀಲನೆ ಮಾಡಲಾಗುವುದು. ರಾಹುಲ್​ ಗಾಂಧಿ ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ ಮಾನವೀಯ ದೃಷ್ಟಿಯಿಂದ ಅದರ ಅಗತ್ಯವೂ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

  • Share this:

ಬೆಂಗಳೂರು (ಅ.06): ರಾಹುಲ್​ ಗಾಂಧಿ (Rahul Gandhi) ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಆನೆ ಗಾಯಗೊಂಡಿರುವುದನ್ನು (Elephant Injured) ಕಂಡು ಮರುಕ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಆನೆಗಳಿಗೆ ಸೂಕ್ತ ಚಿಕಿತ್ಸೆ (Treatment) ಕೊಡಿಸುವಂತೆ ಸಹ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಹುಲ್ ಗಾಂಧಿ ಪತ್ರ (Letter) ಕೂಡ ಬರೆದಿದ್ದರು. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ಅವರು, ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಇದನ್ನು ಗಮನಿಸಿದ್ದು, ಇನ್ನು ಅರ್ಧ ಗಂಟೆಯಲ್ಲಿ ಮಾಹಿತಿ ಪಡೆದು ಅಗತ್ಯ ಚಿಕಿತ್ಸೆ ಕೊಡಿಸುವ ಸೂಚಿಸೋದಾಗಿ ಸಿಎಂ ಹೇಳಿದ್ದಾರೆ. 


ರಾಹುಲ್​ ಪತ್ರಕ್ಕೆ ಸಿಎಂ ಸ್ಪಂದನೆ


ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು ಎಂದು ಪರಿಶೀಲನೆ ಮಾಡಲಾಗುವುದು. ರಾಹುಲ್​ ಗಾಂಧಿ ಅವರು ಸರ್ಕಾರದ ಗಮನಕ್ಕೆ ತಂದಿರುವ ವಿಷಯದ ಬಗ್ಗೆ ಸ್ಪಂದಿಸಲಾಗುವುದು ಹಾಗೂ ಮಾನವೀಯ ದೃಷ್ಟಿಯಿಂದ ಅದರ ಅಗತ್ಯವೂ ಇದೆ ಎಂದು ಬೊಮ್ಮಾಯಿ ಹೇಳಿದ್ದಾರೆ.


ಭಾರತ್ ಜೋಡೋ ಯಾತ್ರೆ ಯಾವುದೇ ಪರಿಣಾಮ ಬೀರಲ್ಲ


ಭಾರತ್​ ಜೋಡೋ ಯಾತ್ರೆಯಿಂದ ಬಿಜೆಪಿಗೆ ಭಯ ಶುರುವಾಗಿದೆ ಎಂದು ಕಾಂಗ್ರೆಸ್​ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್​ ಯಾತ್ರೆ ಬಿಜೆಪಿ ಮೇಲೆ ಯಾವುದೇ ಪರಿಣಾಮಬೀರುವುದಿಲ್ಲ ಎಂದು ತಿಳಿಸಿದ್ದಾರೆ.


cm Basavaraj bommai responded to rahul gandhi letter on elephant treatment
ಬಸವರಾಜ ಬೊಮ್ಮಾಯಿ, ರಾಹುಲ್​ ಗಾಂಧಿ


ಸೋನಿಯಾ ಗಾಂಧಿ ಅರ್ಧ ಕಿಲೋ ಮೀಟರ್​ ನಡೆದಿದ್ದಾರೆ


ಸಹಜವಾಗಿ ಎಲ್ಲಾ ಪಕ್ಷದ ಮುಖ್ಯಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ ಅರ್ಧ ಕಿಮೀ ನಡೆದು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮ ಬೀರುವುದಿಲ್ಲ. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ. ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ ಎಂದು ಹೇಳಿದರು.


ಬಿಜೆಪಿ ಕೂಡ ರ‍್ಯಾಲಿಗಳನ್ನು ಕೈಗೊಳ್ಳಲಿದೆ


ಬಿಜೆಪಿ ಕೂಡ ಆರು ರ‍್ಯಾಲಿಗಳನ್ನು ಹಮ್ಮಿಕೊಂಡಿದೆ. ಈ ಮಧ್ಯೆ ಅಧಿವೇಶನ ಹಾಗೂ ದಸರಾ ಇದ್ದುದರಿಂದ ತಡವಾಗಿದೆ. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಜಂಟಿ ಪ್ರವಾಸ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.


ಇದನ್ನೂ ಓದಿ: Sonia Gandhi: ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ, ಅಮ್ಮನ ಶೂ ಲೇಸ್ ಕಟ್ಟಿದ ರಾಗಾ 


ಸಫಾರಿಗೆ ತೆರಳಿದ್ದ ವೇಳೆ ಮರಿಯಾನೆ ಕಂಡ ರಾಹುಲ್​


ರಾಹುಲ್​ ಗಾಂಧಿ ಸಫಾರಿಗೆ ತೆರಳಿದ್ದ ವೇಳೆ ತಾಯಿಯ ಜತೆಗಿದ್ದ ಆನೆ ಮರಿಯೊಂದು ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡಿದ್ದರು. ಆನೆ ಗಾಯಗೊಂಡು ನರಳಾಡುತ್ತಿತ್ತು. ಈ ಕುರಿತು ಮುಖ್ಯಮಂತ್ರಿಗೆ ಬುಧವಾರ ಪತ್ರ ಬರೆದು ಮಾಹಿತಿ ನೀಡಿದ್ದರು.


ಮರಿಯಾನೆಯ ಬಾಲ, ಸೊಂಡಲಿಗೆ ಗಾಯ


ತಾಯಿಯ ಜತೆಗಿದ್ದ ಚಿಕ್ಕ ಆನೆ ಮರಿಯ ಬಾಲ ಮತ್ತು ಸೊಂಡಿಲಿಗೆ ಗಾಯಗಳಾಗಿವೆ. ಅದು ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ನಿಸರ್ಗ ಸಹಜವಾಗಿಯೇ ಪ್ರಕ್ರಿಯೆಗಳು ನಡೆಯಬೇಕು ಎಂಬ ಅಭಿಪ್ರಾಯ ಇದೆ. ಆದರೂ, ಅಳಿವಿನಂಚಿನಲ್ಲಿರುವ ಪ್ರಭೇದದ ಜೀವಿಗಳು ಮತ್ತು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಂತಹ ಅಭಿಪ್ರಾಯದ ಹೊರತಾಗಿ ಯೋಚಿಸಬೇಕಾಗುತ್ತದೆ. ಈ ಆನೆ ಮರಿಗೆ ತುರ್ತಾಗಿ ವೈದ್ಯಕೀಯ ನೆರವು ಬೇಕಿರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದರು.


ಇದನ್ನೂ ಓದಿ:  Karnataka Politics: ಸಿದ್ದರಾಮಯ್ಯ ವಿರುದ್ಧ ‘ಭೂ ಚಕ್ರ’ ಪ್ರಯೋಗಿಸಲು ಬಿಜೆಪಿ ಸಿದ್ಧತೆ


ಆನೆ ಮರಿಗೆ ಚಿಕಿತ್ಸೆ ನೀಡಿ ರಕ್ಷಿಸಿ


ಆನೆ ಮರಿಗೆ ಚಿಕಿತ್ಸೆ ನೀಡಿ, ಅದನ್ನು ರಕ್ಷಿಸುವ ವಿಚಾರದಲ್ಲಿ ರಾಜಕೀಯ ಗಡಿಗಳನ್ನು ಮೀರಿ ನಾನು ನಿಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಸರಿಯಾದ ಚಿಕಿತ್ಸೆ ಲಭಿಸಿದರೆ ಆ ಮರಿಯು ಜೀವಂತವಾಗಿ ಉಳಿಯುತ್ತದೆ ಎನ್ನುವ ವಿಶ್ವಾಸವಿದೆ. ಈ ಆನೆ ಮರಿಯ ಜೀವ ಉಳಿಸಲು ನೀವು ಸಕಾಲಕ್ಕೆ ನೆರವು ನೀಡುತ್ತೀರಿ ಎಂಬ ಭರವಸೆ ಇದೆ ಎಂದು ರಾಹುಲ್‌ ಪತ್ರದಲ್ಲಿ ಉಲ್ಲೇಖಿಸಿದ್ದರು.

Published by:ಪಾವನ ಎಚ್ ಎಸ್
First published: