• Home
  • »
  • News
  • »
  • state
  • »
  • CM Basavaraj Bommai: ಗುಜರಾತ್ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

CM Basavaraj Bommai: ಗುಜರಾತ್ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬೊಮ್ಮಾಯಿ

ಬಸವರಾಜ್ ಬೊಮ್ಮಾಯಿ , ಸಿಎಂ

ಬಸವರಾಜ್ ಬೊಮ್ಮಾಯಿ , ಸಿಎಂ

ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಹೇಳಿದ್ದಾರೆ. ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆಗಾಗಿ ಕಾಯುತ್ತಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಬೆಂಗಳೂರು (ನ.25): ಕೆಲ ತಿಂಗಳಿಂದ ರಾಜ್ಯ ಸಚಿವ  ಸಂಪುಟ ವಿಸ್ತರಣೆಯನ್ನು (State Cabinet Expansion) ಮುಂದೂಡಿಕೊಂಡೆ ಬರಲಾಗ್ತಿದೆ. ಇತ್ತ ಸಂಪುಟ ವಿಸ್ತಾರಣೆ ಯಾವಾಗ ಮಾಡ್ತಾರೆ ಎಂದು ಸಚಿವಾಕಾಂಕ್ಷಿಗಳು ಕಾತುರದಿಂದ ಕಾಯುತ್ತಿದ್ದಾರೆ.  ಶಿವಮೊಗ್ಗದಲ್ಲಿ (Shivamogga) ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುಜರಾತ್ ವಿಧಾನಸಭಾ ಚುನಾವಣೆ (Gujarat Assembly Election) ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಹೇಳಿದ್ದಾರೆ.


ಸಚಿವ ಸಂಪುಟ ವಿಸ್ತರಣೆಗಾಗಿ ಸಚಿವ ಸ್ಥಾನಸ ಆಕಾಂಕ್ಷಿಗಳು ಕಾಯುತ್ತಿದ್ದಾರೆ. 40 ಪರ್ಸೆಂಟ್​ ಕಮಿಷನ್​ ಆರೋಪದಿಂದ ಮಂತ್ರಿಗಿರಿ ಕಳೆದುಕೊಂಡ ಈಶ್ವರಪ್ಪ ಮತ್ತೆ ಸಂಪುಟ ಸೇರಲು ಕಾಯುತ್ತಿದ್ದಾರೆ. ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕೂಡ ಸಚಿವ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಮುಕ್ತವಾಗಿಯೇ ಹೇಳಿಕೊಂಡಿದ್ದರು. ಸಾಹುಕಾರ್ ರಮೇಶ ಜಾರಕಿಹೊಳಿ ಕೂಡ ಆಕಾಂಕ್ಷಿಗಳಾಗಿದ್ದಾರೆ.


ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗುತ್ತೆ


ಮತದಾರರ ಪಟ್ಟಿ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ  ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ತನಿಖೆ ತೀವ್ರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಎಲ್ಲಾ ವಿಚಾರಗಳನ್ನು ಸೂಕ್ಷ್ಮವಾಗಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಮುಕ್ತವಾಗಿ ತನಿಖೆ ನಡೆಸಲು ಬಿಟ್ಟಿದ್ದೇವೆ. ಇದರಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗುತ್ತದೆ ಎಂದು ಸಿಎಂ ಹೇಳಿದ್ದಾರೆ.


cm basavaraj bommai hit back maharashtra dcm devendra fadnavis statement mrq
ಬಸವರಾಜ್ ಬೊಮ್ಮಾಯಿ, ಸಿಎಂ


 ಡಿಸಿಯಿಂದ ಮಾಹಿತಿ ಪಡೆದಿದ್ದೇನೆ


ಶರಾವತಿ ಸಂತ್ರಸ್ತರ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿ ಅವರಿಂದ ಮಾಹಿತಿ ಪಡೆದಿದ್ದೇನೆ. ಈ ಹಿಂದೆ ನೋಟಿಫಿಕೇಶನ್ ಆಗಿರುವ ಕುರಿತಾದ ಮಾಹಿತಿಯನ್ನು ಡಿಸಿಯಿಂದ ತರಿಸಿಕೊಳ್ಳುತ್ತೇನೆ. ಡಿಸೆಂಬರ್ 3ನೇ ವಾರದೊಳಗೆ ವರದಿ ಕೊಡಲು ಸೂಚಿಸಿದ್ದೇನೆ. ಡಿಸಿ ಅವರು ವರದಿ ಕೊಟ್ಟ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ.


ಆದಷ್ಟು ಬೇಗ ಸಮಸ್ಯೆ ಪರಿಹರಿಸುತ್ತೇವೆ


ಈ ಹಿಂದಿನ ಸರಕಾರ ಅನುಮತಿ ಪಡೆಯದ ಕಾರಣ ಕೇಂದ್ರ ಸರಕಾರದಿಂದ ಅನುಮತಿ ಪಡೆಯಬೇಕಿದೆ. ಈಗಾಗಲೇ ಸಂಬಂಧಿಸಿದ ಕೇಂದ್ರ ಸಚಿವರಿಗೆ ವಿಷಯ ತಿಳಿಸಲಾಗಿದೆ. ಆದಷ್ಟು ಬೇಗ ಅನುಮತಿ ಪಡೆದು ಸಮಸ್ಯೆ ಪರಿಹರಿಸುತ್ತೇವೆ. ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ.


ಸಮರ್ಥವಾಗಿ ವಾದ ಮಂಡಿಸುತ್ತೇವೆ 


ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗಡಿ ವಿಚಾರದಲ್ಲಿ ನಮ್ಮ‌ ನಿಲುವು ತಿಳಿಸಿದ್ದೇವೆ. ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, ನಮಗೆ ಕಾನೂನಿನ‌ ಗಟ್ಟಿಯಾದ ನೆಲೆಗಟ್ಟಿದೆ. ನಮ್ಮ ರಾಜ್ಯದ ವಿಚಾರ ಪರ್ಫೆಕ್ಟ್ ಆಗಿದ್ದವು. ಈ ಬಗ್ಗೆ ಸರ್ವಪಕ್ಷ ಸಭೆ ಕರೆದು ಚರ್ಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸುತ್ತೇವೆ. ಸಮರ್ಥವಾಗಿ ವಾದ ಮಂಡಿಸುತ್ತೇವೆ ಎಂದು ಹೇಳಿದ್ದಾರೆ.


24 ಗಂಟೆಯಲ್ಲಿ ಆರೋಪಿ ಬಂಧನ


ಮಂಗಳೂರು ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಾಧಾರ ಸಂಗ್ರಹಿಸಿದ್ದಾರೆ. ಇಂತಹ ಪ್ರಕರಣ ಇದ್ದಾಗ ಯುಎಪಿಎ ಅಡಿ ಕೇಸ್ ದಾಖಲಾಗಬೇಕು, ಇಂತಹ ಪ್ರಕರಣ ಎನ್ ಐಎ ಗೆ ವಹಿಸಬೇಕು  ಮಂಗಳೂರು ಪ್ರಕರಣದಲ್ಲಿ 24 ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಇದನ್ನೂ ಓದಿ: Bus Accident: ಕರ್ನಾಟಕದಿಂದ ಶಬರಿಮಲೆಗೆ ತೆರಳಿದ್ದ ಬಸ್​ ಅಪಘಾತ; 23 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ


ಬಗರ್ ಹುಕ್ಕುಂ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ  ಡೀಮ್ಡ್ ಫಾರೆಸ್ಟ್ ವಿಚಾರ ಕುರಿತಂತೆ ಸರಕಾರ ಒಂದು ನಿರ್ಣಯ ಕೈಗೊಂಡಿದೆ. ಸುಮಾರು 6 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ಲ್ಯಾಂಡನನ್ನು ಕಂದಾಯ ಇಲಾಖೆಗೆ ವಹಿಸಲಾಗಿದ್ದು, ಡೀಮ್ಡ್ ಫಾರೆಸ್ಟ್ ಮಲೆನಾಡು ಭಾಗದಲ್ಲಿ ಹೆಚ್ಚಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Published by:ಪಾವನ ಎಚ್ ಎಸ್
First published: