ಕಳೆದ ಎರೆಡು ವರ್ಷಗಳಿಂದ ಕೊರೊನಾ (Corona) ಕಾರಣದಿಂದ ಆತಂಕದ ನಡುವೆ ನಡೆಯುತ್ತಿದ್ದ ಎಸ್ಎಸ್ಎಲ್ಸಿ ಪರೀಕ್ಷೆ (SSLC Exam) ಈ ಬಾರಿ ನಿರಾಂತಕವಾಗಿ ನಡೆಯಲಿದೆ. ನಾಳೆಯಿಂದ ಪರೀಕ್ಷೆ ಆರಂಭವಾಗಲಿದ್ದು, ಈಗಾಗಲೇ ಸಕಲ ಸಿದ್ಧತೆ ಆಗಿದ್ದು, ಈ ಬಗ್ಗೆ ಹುಬ್ಬಳಿಯಲ್ಲಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರೀಕ್ಷೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳು ತಮ್ಮ ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಿಎಂ ಕರೆ ನೀಡಿದ್ದಾರೆ.
ಈ ಬಾರಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 45,289 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ನಾಲ್ವರು ತೃತೀಯ ಲಿಂಗಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.
ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ
ರಾಜ್ಯದಲ್ಲಿ ಕೊರೊನಾ ಆತಂಕ ಕಡಿಮೆಯಾಗಿದ್ದರೂ ಸಹ ಪರೀಕ್ಷೆ ಸಮಯದಲ್ಲಿ ಹೆಚ್ಚು ಕಾಳಜಿ ವಹಿಸಲಾಗುವುದು ಮತ್ತು ಎಲ್ಲಾ ಕೋವಿಡ್ ನಿಯಮಗಳನ್ನು ಪಾಲಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇನ್ನು ಪರೀಕ್ಷೆಗೂ ಮುನ್ನ ಕೊಠಡಿಗಳನ್ನು ಸ್ಯಾನಿಟೈಜ್ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ತಾಲ್ಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಮಾಡಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದು, ಕೊರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳ ಬಗ್ಗೆ ಎಲ್ಲಾ ಮಾಹಿತಿ ಪಡೆಯುತ್ತಿದ್ದು, ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ನಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಸಿಲಿಕಾನ್ ಸಿಟಿಯ ಈ ಏರಿಯಾಗಳಲ್ಲಿ ಭಾನುವಾರ, ಸೋಮವಾರ ಕರೆಂಟೇ ಇರಲ್ಲ
ಜಲ ವಿವಾದ ಬಗೆ ಹರಿಸಲಾಗುವುದು
ಇನ್ನು ಜಲ ವಿವಾದಗಳ ಬಗ್ಗೆ ಮಾತನಾಡಿದ ಸಿಎಂ, ಈ ಬಗೆ ಹರಿಸೋಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದ್ದು, ಮೊದಲು ನಾನು ದೆಹಲಿಗೆ ಹೋಗಿ ಮಾತುಕತೆ ಮಾಡ್ತೇನೆ. ನಂತರ ಅಗತ್ಯ ಬಿದ್ದಲ್ಲಿ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗುತ್ತೇವೆ. 30 ರಂದು ಬಜೆಟ್ ಅಧಿವೇಶನ ಮುಗಿಯುತ್ತೆ. ಎಲ್ಲವೂ ಅನುಷ್ಠಾನಕ್ಕೆ ಬರುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಅಂತರಾಜ್ಯ ಜಲ ವಿವಾದ ಶೀಘ್ರದಲ್ಲೇ ಬಗೆಹರಿಯುತ್ತದೆ, ಕಾನೂನಾತ್ಮಕ ರೀತಿಯಲ್ಲಿ ಕೆಲವು ನ್ಯಾಯಾಲಯಗಳಿಂದ ನಮಗೆ ಪರಿಹಾರ ಪಡೆಯಬೇಕಿದೆ. ಕೇಂದ್ರದಿಂದ ಸಹ ಹಲವು ಅನುಮತಿ ಗೆ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ ಎಂದಿದ್ಧಾರೆ.
ಇದನ್ನೂ ಓದಿ: ಸೋಮವಾರದಿಂದ SSLC ಪರೀಕ್ಷೆ; ಕೋವಿಡ್ ನಿಯಮ, ಸಮವಸ್ತ್ರ ಪಾಲನೆ ಕಡ್ಡಾಯ
ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ
ಎರಡು ವರ್ಷಗಳ ಕಾಲ ಕೋವಿಡ್ ಇದ್ದ ಕಾರಣ ಯಾವುದೇ ಅಭಿವೃದ್ಧಿ ಆಗಿಲ್ಲ, ಇದು ಅಭಿವೃದ್ಧಿ ಕಾಲ ಆಗಿರುವುದರಿಂದ, ಆದಷ್ಟು ಬೇಗ ಅಭಿವೃದ್ಧಿಗೆ ವೇಗ ಹೆಚ್ಚಲಿದೆ. ಇದೀಗ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪರ್ವ ಆರಂಭಗೊಳ್ಳಲಿದೆ ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ