ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರು ಇಂದು ಸಂಜೆ ದೆಹಲಿಗೆ (Delhi) ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಅಂದ್ರೆ ಮಂಗಳವಾರ ಪಕ್ಷದ ಹೈಕಮಾಂಡ್ ನಾಯಕರನ್ನು (BJP High command) ಭೇಟಿಯಾಗುವ ಸಾಧ್ಯತೆಗಳಿವೆ. ಈ ವೇಳೆ ಸಂಪುಟ ವಿಸ್ತರಣೆ (Cabinet Expansion) ಮತ್ತು ರಾಜಕೀಯ ವಿದ್ಯಮಾನಗಳ (Karnataka Politics Update) ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ (Karnataka Assembly Election) ನಾಲ್ಕರಿಂದ ಐದು ತಿಂಗಳು ಮಾತ್ರ ಬಾಕಿ ಉಳಿದಿದೆ. ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಬೇಕು ಎಂಬ ಒತ್ತಡ ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಎಂ ದೆಹಲಿ ಪ್ರವಾಸ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಟೆನ್ಷನ್ ಶುರುವಾಗಿದೆ.
ಒಂದು ವೇಳೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ರೆ ಮುಂದಿನ ವಾರವೇ ಸಂಪುಟ ವಿಸ್ತರಣೆ ಆಗಬಹುದು. ಆದ್ರೆ ಗುಜರಾತ್ ಚುನಾವಣೆಯಲ್ಲಿ (Gujarat Election) ಬಿಜೆಪಿ ಹೈಕಮಾಂಡ್ ನಾಯಕರು ಬ್ಯುಸಿಯಾಗಿರುವ ಕಾರಣ, ಸಂಪುಟ ವಿಸ್ತರಣೆಗೆ ಅನುಮತಿ ಸಿಗೋದು ಅನುಮಾನ ಎನ್ನಲಾಗುತ್ತಿದೆ.
ಮುಕುಲ್ ರೋಹ್ಟಗಿ ಭೇಟಿ
ಮಹಾರಾಷ್ಟ್ರ ಗಡಿ ವಿವಾದ ತೆಗೆದಿದ್ದು, ಶಾಂತಿ ಕದಡುವ ಪ್ರಯತ್ನವನ್ನು ಮಾಡುತ್ತಿದೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಮಂಗಳವಾರ ಸಂಜೆಯೇ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ. ಈ ವೇಳೆ ಸುಪ್ರೀಂಕೋರ್ಟ್ನಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸುವ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ಸಚಿವ ಸ್ಥಾನಕ್ಕಾಗಿ ಮುನಿಸಿಕೊಂಡ ಜಾರಕಿಹೊಳಿ
ಬೆಳಗಾವಿಯ ಸಾಹುಕಾರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮೊದಲಿಗರಾಗಿದ್ದಾರೆ. ಸಿಡಿ ಪ್ರಕರಣದ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಎಸ್ಐಟಿ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದೆ.
ಇದನ್ನೂ ಓದಿ: Basanagowda Patil Yatnal: ಈ ಕೆಲಸ ಮಾಡಿದ ದಿನದಂದು ಯತ್ನಾಳ್ ಮುಖ್ಯಮಂತ್ರಿ ಆಗ್ತಾರೆ: ಸಿಎಂ ಇಬ್ರಾಹಿಂ ಭವಿಷ್ಯ
ಕ್ಲೀನ್ಚಿಟ್ ಸಿಕ್ಕ ಬಳಿಕವೂ ರಮೇಶ್ ಜಾರಕಿಹೊಳಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಇದೇ ಕಾರಣಕ್ಕೆ ಕೆಲ ದಿನಗಳ ಹಿಂದೆ ನಡೆದ ತಮ್ಮದೇ ಸಮುದಾಯದ ಎಸ್ಟಿ ಸಮಾವೇಶಕ್ಕೆ ಗೈರಾಗುವ ಮೂಲಕ ಅಸಮಾಧಾನ ಹಾಕಿದ್ದರು.
ಕೆಲ ದಿನಗಳ ಹಿಂದೆ ಮಾತನಾಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagowda Patil Yatnal), ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ. ಮಂತ್ರಿ ಆಗುವರ ಪಟ್ಟಿಯಲ್ಲಿ ರಮೇಶ್ ಜಾರಕಿಹೊಳಿ ಅವರ ಹೆಸರು ಮೊದಲ ಸ್ಥಾನದಲ್ಲಿದೆ ಎಂದು ಹೇಳಿದ್ದರು.
ಸಂಪುಟ ಸೇರಲು ಕಾಯುತ್ತಿರುವ ಈಶ್ವರಪ್ಪ
ಇನ್ನು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (Former Minister KS Eshwarappa) ಸಹ ಸಂಪುಟ ಸೇರಲು ಕಾಯುತ್ತಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನೆಲೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಇದನ್ನೂ ಓದಿ: D K Shivakumar: ಸಿಎಂ ಕುರ್ಚಿ ಮೇಲೆ ಡಿಕೆ ಶಿವಕುಮಾರ್ ಕಣ್ಣು! ಸಭೆಯಲ್ಲಿ ಹೊರಬಂತು ಡಿಕೆ ಮನದಾಸೆ
ಯುವ ಶಾಸಕರಿಂದ ಹೊಸ ಕೂಗು
ಈ ಎಲ್ಲಾ ಬೆಳವಣಿಗೆ ನಡುವೆ ಬಿಜೆಪಿಯ ಯುವ ಶಾಸಕರಿಂದ ಹೊಸ ಕೂಗು ಕೇಳಿ ಬಂದಿದೆ ಎಂದು ಹೇಳಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದು, ಪಕ್ಷ ಹೊಸ ಮುಖಗಳಿಗೆ ಮಣೆ ಹಾಕಬೇಕು. ಇದರಿಂದ ಚುನಾವಣೆಯಲ್ಲಿ ಯುವ ಪೀಳಿಗೆ ಮತಗಳನ್ನು ಸೆಳೆಯಬಹುದು ಎಂದು ಹೇಳಿದ್ದಾರಂತೆ. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ