Bommai with Yash: ಒಂದೇ ವೇದಿಕೆ ಮೇಲೆ ಸಿಎಂ ಜೊತೆ ನಟ ಯಶ್! ನಾನೇ 2 ಗಂಟೆ ಹೆಚ್ಚು ಕೆಲ್ಸ ಮಾಡ್ತೀನಿ ಅಂದ್ರು ಬೊಮ್ಮಾಯಿ!

ರಾಕಿಂಗ್ ಸ್ಟಾರ್ ಯಶ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಒಟ್ಟಿಗೆ ಬೆಂಗಳೂರಿಂದ ಮೈಸೂರಿಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಒಂದೇ ವೇದಿಕೆ ಮೇಲೆ ಕುಳಿತುಕೊಂಡಿದ್ದಾರೆ! ಅರೇ ಇದೇನಪ್ಪಾ ಹೊಸ ನ್ಯೂಸ್.. ಯಶ್ ರಾಜಕೀಯಕ್ಕೆ ಧುಮುಕಿದ್ರಾ? ಬಿಜೆಪಿ ಸೇರಿದ್ರಾ ಅಂತ ನೀವು ಕನ್‌ಫ್ಯೂಸ್ ಮಾಡ್ಕೋಬೇಡಿ. ಅಸಲಿ ನ್ಯೂಸ್ ಇಲ್ಲಿದೆ ಓದಿ...

ಬಸವರಾಜ ಬೊಮ್ಮಾಯಿ ಹಾಗೂ ನಟ ಯಶ್

ಬಸವರಾಜ ಬೊಮ್ಮಾಯಿ ಹಾಗೂ ನಟ ಯಶ್

  • Share this:
ಮೈಸೂರು: ನಟ (Actor) ರಾಕಿಂಗ್ ಸ್ಟಾರ್ ಯಶ್ (Rocking Star Yash) ಹಾಗೂ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಇಂದು ಒಟ್ಟಿಗೆ ಬೆಂಗಳೂರಿಂದ (Bengaluru) ಮೈಸೂರಿಗೆ (Mysuru) ತೆರಳಿದ್ದಾರೆ. ಅಷ್ಟೇ ಅಲ್ಲ ಒಂದೇ ವೇದಿಕೆ ಮೇಲೆ ಕುಳಿತುಕೊಂಡಿದ್ದಾರೆ. ಅರೇ ಇದೇನಪ್ಪಾ ಹೊಸ ನ್ಯೂಸ್.. ಯಶ್ ರಾಜಕೀಯಕ್ಕೆ (Politics) ಧುಮುಕಿದ್ರಾ? ಬಿಜೆಪಿ (BJP) ಸೇರಿದ್ರಾ ಅಂತ ನೀವು ಕನ್‌ಫ್ಯೂಸ್ ಮಾಡ್ಕೋಬೇಡಿ. ಸಿಎಂ ಹಾಗೂ ಯಶ್ ಇಬ್ಬರೂ ಮೈಸೂರಿನಲ್ಲಿ ನಡೆದ ಮೈಸೂರು ವಿಶ್ವವಿದ್ಯಾಲಯದಲ್ಲಿ (Mysore University) ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ಊಹೋಪೋಹದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಒಟ್ಟಿಗೆ ಮೈಸೂರಿಗೆ ತೆರಳಿದ ಬೊಮ್ಮಾಯಿ-ಯಶ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಿದ್ದರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಜೊತೆಗಿದ್ದರು. ವಿಶೇಷ ಅಂದ್ರೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚಿತ್ರ ನಟ, ರಾಕಿಂಗ್ ಸ್ಟಾರ್ ಯಶ್ ಕೂಡ ಜೊತೆಯಲ್ಲಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಯಶ್ ಹೆಲಿ ಕ್ಯಾಪ್ಟರ್ ನಲ್ಲಿ ಮೈಸೂರಿಗೆ ತೆರಳಿದರು.

ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾದ ಯಶ್, ಬೊಮ್ಮಾಯಿ

ಇನ್ನು ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ಮೈಸೂರು ವಿಶ್ವವಿದ್ಯಾಲಯದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ಜನೋತ್ಸವ ಆಯೋಜಿಸಲಾಗಿತ್ತು. ಈ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸರಾಜ ಬೊಮ್ಮಾಯಿ ಮತ್ತು ನಟ ರಾಕಿಂಗ್ ಸ್ಟಾರ್ ಯಶ್ ಭಾಗಿಯಾದರು. ಇವರೊಂದಿಗೆ ಅನೇಕ ಗಣ್ಯರೂ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: Yash Raksha Bandhana: ರಾಕಿ ಭಾಯ್‌ಗೆ ರಾಖಿ ಕಟ್ಟಿದ ರಾಕಿಂಗ್ ಸಿಸ್ಟರ್! ಯಶ್-ನಂದಿನಿ ಬಾಂಧವ್ಯದ ಫೋಟೋಗಳು ಇಲ್ಲಿವೆ

ಸಿಎಂ ಬದಲಾವಣೆ ವಿಚಾರಕ್ಕೆ ಬೊಮ್ಮಾಯಿ ಹೇಳಿದ್ದೇನು?

ಇನ್ನು ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ ಆಗುತ್ತೆ ಅಂತ ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾಂಗ್ರೆಸ್‌ನ ಟ್ವೀಟ್ ಹೊಸದೇನಲ್ಲ. ಸಿಎಂ ಬದಲಾವಣೆ ಚರ್ಚೆಗೆ ಯಾವುದೇ ಆಧಾರವಿಲ್ಲ. ಕಾಂಗ್ರೆಸ್‌ ನಾಯಕರ ಮನಸ್ಸಿನಲ್ಲೇ ಅತಂತ್ರತೆ ಇದೆ ಅಂತ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ರು.

ನಾನು 2 ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ

ಇನ್ನು ಕಾಂಗ್ರೆಸ್‌ನವರ ಟೀಕೆಗಳಿಂದ ನನ್ನ ನಿರ್ಣಯಗಳು ಗಟ್ಟಿ ಆಗುತ್ತವೆ. ಬರುವಂತಹ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಎರಡು ತಾಸು ಹೆಚ್ಚು ಕೆಲಸ ಮಾಡ್ತೀನಿ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

ಇದನ್ನೂ ಓದಿ: BS Yediyurappa: ಪಕ್ಷದಿಂದ ನನಗೆ ಅನ್ಯಾಯ ಆಗಿಲ್ಲ, ಸಿಎಂ ಬದಲಾವಣೆ ಇಲ್ಲ; ಬಿ ಎಸ್ ಯಡಿಯೂರಪ್ಪ

ಕೋವಿಡ್‌ನಿಂದ ಗುಣಮುಖರಾದ ಬಳಿಕ ಪ್ರವಾಸ

ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದ್ದು, ಇದೀಗ ಗುಣಮುಖರಾಗಿದ್ದಾರೆ. ಕೋವಿಡ್ ನಿಂದ ಗುಣಮುಖರಾದ ಬಳಿಕವೇ ಇಂದು ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ತೆರಳದರು. ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಬಳಿಕ ಮಂಡ್ಯ ಜಿಲ್ಲೆಗೆ ತೆರಳಲಿರುವ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
Published by:Annappa Achari
First published: