Basavaraj Bommai: ದೇಶದಲ್ಲಿ ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್​ನವ್ರಿಂದ, 'ಕೈ' ನಾಯಕರ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ

ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರೋ ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಕಾಂಗ್ರೆಸ್ ಈ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ಮುಂದಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ಡಿಕೆಶಿ

ಸಿಎಂ ಬಸವರಾಜ ಬೊಮ್ಮಾಯಿ, ಡಿಕೆಶಿ

  • Share this:
ಬೆಂಗಳೂರು (ಏ.14): ಸಚಿವ ಕೆ. ಎಸ್​ ಈಶ್ವರಪ್ಪ (K.S Eshwarappa) ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ (Congress)​ ಪ್ರತಿಭಟನೆಗಿಳಿದಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ಮುಂಭಾಗ ಕಾಂಗ್ರೆಸ್ ನಾಯಕರು ದಿಢೀರ್ ಪ್ರತಿಭಟನೆ (Protest) ನಡೆಸಿದ್ದಾರೆ. ಅಹೋರಾತ್ರಿ ಪ್ರತಿಭಟನೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D.K Shivakumar) ಘೋಷಿಸಿದ್ದಾರೆ. ಇನ್ನು ಕಾಂಗ್ರೆಸ್​ ಅಹೋರಾತ್ರಿ ಪ್ರತಿಭಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಕಿಡಿಕಾರಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ, ಆದ್ರೆ ಕಾಂಗ್ರೆಸ್ ನವ್ರಿಗೆ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ. ಅವರು ಅಧಿಕಾರದಲ್ಲಿದ್ದಾಗ ಹೇಗೆ ನಡೆದುಕೊಂಡ್ರು ಅಂತ ಆತ್ಮಾವಲೋಕನ ಮಾಡ್ಕೊಂಡ್ರೆ ಸಾಕು ಅವರ ನಡವಳಿಕೆ ಜನಕ್ಕೂ ಗೊತ್ತಿದೆ ಎಂದು ಕಾಂಗ್ರೆಸ್​ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

 ಕಾಂಗ್ರೆಸ್​ನವರೇ ಭ್ರಷ್ಟಾಚಾರದ ಗಂಗೋತ್ರಿ

ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರೋ ಕಾಂಗ್ರೆಸ್​ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಕಾಂಗ್ರೆಸ್ ಈ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ಮುಂದಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಡೀ ದೇಶದಲ್ಲಿ ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್ ನವ್ರಿಂದ, ಕಾಂಗ್ರೆಸ್ ನವರೇ ಭ್ರಷ್ಟಾಚಾರದ ಗಂಗೋತ್ರಿ ಎಂದ್ರು. ಎಸ್ಸಿ, ಎಸ್ಟಿ ಸಮುದಾಯದ ಹಾಸಿಗೆ ದಿಂಬಿನಲ್ಲೂ ಅವರು ಭ್ರಷ್ಟಾಚಾರ ನಡೆಸಿದ್ದಾರೆ. ಯಾವ ಇಲಾಖೆಯನ್ನು ಬಿಟ್ಟಿಲ್ಲ ಭ್ರಷ್ಟಾಚಾರ  ನಡೆಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

‘ಯಾವುದೇ ಆಧಾರವಿಲ್ಲದೇ ಆರೋಪ ಸರಿಲಯಲ್ಲ’

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಎಸ್ ಈಶ್ವರಪ್ಪ ಪರ ಬ್ಯಾಟ್ ಬೀಸಿರುವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ, ಯಾವುದೇ ಆಧಾರವಿಲ್ಲದೇ ಈಶ್ವರಪ್ಪ ಅವರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಉಮೇಶ್ ಕತ್ತಿ, ನಮ್ಮ ಬೆಳಗಾವಿ ಜಿಲ್ಲೆಯವರಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದು ದು:ಖದ ಸಂಗತಿ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖಾ ವರದಿ ಬಂದ ಮೇಲಷ್ಟೇ ಈ ಕುರಿತು ಪ್ರತಿಕ್ರಿಯಿಸುವುದಾಗಿ ಹೇಳಿದರು.

ಇದನ್ನೂ ಓದಿ: Ambedkar Jayanti: ಅನೇಕರು ಅಂಬೇಡ್ಕರ್ ಹೆಸರೇಳಿ ಮೇಲೆ ಬಂದಿದ್ದಾರೆ; ಉತ್ತಮ ಸ್ಥಾನ ಪಡೆದು ಸಮಾಜವನ್ನೇ ಮರೆತಿದ್ದಾರೆ- CM ಬೊಮ್ಮಾಯಿ

ಈಶ್ವರಪ್ಪ ರಾಜೀನಾಮೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ತನಿಖೆ ಆರಂಭಿಕ ಹಂತದಲ್ಲಿರುವುದರಿಂದ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಉಮೇಶ್ ಕತ್ತಿ ಅಭಿಪ್ರಾಯಪಟ್ಟರು.

ಉಮೇಶ್​ ಕತ್ತಿ ಗರಂ

ಇನ್ನು ಆರೋಗ್ಯ ಸಚಿವ ಸಚಿವ ಡಾ. ಸುಧಾಕರ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಬೆಂಗಳೂರಿನಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪ್ಯಯ ನೀಡಿರುವ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ನಾಳೆ ನನ್ನ ಹೆಸರೂ ಹೇಳಬಹುದು. ನಿಮ್ಮ ಹೆಸರೂ ಹೇಳಬಹುದು. ಹೀಗೆ ಹೇಳುವವರು ಬಹಳ‌ ಜನ ಇದ್ದಾರೆ ಎಂದು ಕಿಡಿಕಾರಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರಣೆ ಮುಗಿದ ಬಳಿಕ ತನಿಖಾ ವರದಿ ಬರಲಿದೆ. ಆ ವರದಿ ಬಂದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಹೈಕಮಾಂಡ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಉಮೇಶ್ ಕತ್ತಿ ಸ್ಪಷ್ಟಪಡಿಸಿದರು.

ಇದನ್ನು ಓದಿ: Santosh Patil ಆತ್ಮಹತ್ಯೆ ವಿಚಾರದಲ್ಲಿ ರಾಜಕೀಯ ಬಣ್ಣ; ಎಚ್​ಡಿಕೆ ಹೇಳಿಕೆ ಪುನರುಚ್ಚರಿಸಿದ ದೇವೇಗೌಡ 

ಕಾಂಗ್ರೆಸ್ ನಾಯಕರಿಗೆ ಬೇರೆ ಉದ್ಯೋಗವಿಲ್ಲ

ಇನ್ನು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬಕ್ಕೆ ಕಾಂಗ್ರೆಸ್ ಬೆಂಬಲ ನೀಡುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಉಮೇಶ್ ಕತ್ತಿ, ಕಾಂಗ್ರೆಸ್ ನಾಯಕರಿಗೆ ಬೇರೆ ಉದ್ಯೋಗವಿಲ್ಲ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ಹೀಗೆ ಎಲ್ಲರೂ ರಾಜಕೀಯವಾಗಿ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಏನೇ ವಿವಾದ ಸಿಕ್ಕರೂ ಅದನ್ನೇ ಹಿಡಿದುಕೊಂಡು ರಾಜಕಾರಣ ಆರಂಭಿಸುತ್ತಾರೆ ಎಂದು ಉಮೇಶ್ ಕತ್ತಿ ತೀವ್ರ ವಾಗ್ದಾಳಿ ನಡೆಸಿದರು.
Published by:Pavana HS
First published: