ಸಿಎಂ ಮಗಳ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಿಎಂ ಪ್ರವಾಸದಿಂದ ವಾಪಸಾಗುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಆರ್​ ಶಂಕರ್​ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

 • Share this:
  ಬೆಂಗಳೂರು (ಆ. 22): ಕಳೆದ ಎರಡು ದಿನಗಳ ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ ಮುಗಿಸಿ ಇಂದು ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಈ ನಡುವೆ ಮುಖ್ಯಮಂತ್ರಿಗಳ ಮಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನಲೆ ಪ್ರವಾಸ ಮುಗಿಸಿ ಬಂದ ತಕ್ಷಣವೇ ಅವರು ಮಗಳನ್ನು ದಾಖಲು ಮಾಡಿರುವ ಅಪೊಲೋ ಆಸ್ಪತ್ರೆಗೆ ತೆರಳಿದ್ದಾರೆ. ಶೇಷಾದ್ರಿಪುರಂ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ತೆರಳಿದ ಅವರು ಮಗಳ ಆರೋಗ್ಯ ವಿಚಾರ ಮಾಡಿದ್ದಾರೆ. ಇನ್ನು ಪ್ರವಾಸ ಮುಗಿಸಿ ಮುಖ್ಯಮಂತ್ರಿಗಳು ತಮ್ಮ ಮನೆಗೆ ಭೇಟಿ ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳ ದಂಡು ಸಿಎಂ ಮನೆಗೆ ಆಗಮಿಸಿದ್ದು, ಲಾಬಿಗೆ ಮುಂದಾಗಿದ್ದಾರೆ.

  ಸಿಎಂ ವಾಪಸಾಗುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ ಆರ್​ ಶಂಕರ್​ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟರು. ಈಗಾಗಲೇ ಸಚಿವ ಸ್ಥಾನಕ್ಕಾಗಿ ಸಿಎಂ ಮೇಲೆ ಒತ್ತಡ ಹೇರುತ್ತಿರುವ ಆರ್​ ಶಂಕರ್​, ಈ ಸಂಬಂಧ ವರಿಷ್ಠರ ಜೊತೆ ಚರ್ಚಿಸಿ ಮಂತ್ರಿ ಪದವಿ ಸ್ಥಾನ ನೀಡುವಂತೆ ಮನವಿ ಮಾಡಿದರು ಎನ್ನಲಾಗಿದೆ.

  ಇದಕ್ಕೆ ಮುನ್ನ ಸಚಿವ ಸ್ಥಾನದ ಆಕಾಂಕ್ಷಿಯಾಗಿರ ಬಗ್ಗೆ ಮಾತನಾಡಿದ ಎನ್ ಮಹೇಶ್​, ನನಗೆ ಬೇರೆ ಆಯ್ಕೆ ಇರಲಿಲ್ಲ, ಅದಕ್ಕಾಗಿ ನಾನು ಬಿಜೆಪಿ ಸೇರಿದ್ದೇನೆ. ಇಲ್ಲಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಮಾಡುವ ಕೆಲಸ ಮಾಡ್ತಿದ್ದೇನೆ. ನಾನು ಮಂತ್ರಿ ಸ್ಥಾನ ಬೇಕು ಎಂದು ವರಿಷ್ಠರ ಬಳಿ ಏನು ಕೇಳಿಲ್ಲ, ಅವರು ಕೂಡ ಏನು ಚರ್ಚೆ ಮಾಡಿಲ್ಲ. ಆದರೆ ಪಕ್ಷಕ್ಕೆ ಬಂದು ಈಗ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೇನೆ. ಮುಂದೆ ಏನು ಮಾಡಬೇಕು ಎಂಬುದು ಪಕ್ಷದ ನಾಯಕರ ವಿವೇಚನೆ ಬಿಟ್ಟದ್ದು ಎನ್ನುವ ಮೂಲಕ ಪರೋಕ್ಷವಾಗಿ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟರು.

  ಇದನ್ನು ಓದಿ: ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್​​ ಪಾದಯಾತ್ರೆ; ದೇವೇಗೌಡ

  ಕಳೆದ ಎರಡು ದಿನಗಳಿಂದ ಬೆಳಗಾವಿ, ಹುಬ್ಬಳ್ಳಿ, ವಿಜಯಪುರ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದ ಸಿಎಂಗೆ ಬೆಳಗಾವಿಯಲ್ಲೂ ಸಚಿವಾಕಾಂಕ್ಷಿಗಳು ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳ ಸಭೆಗೆ ಸಚಿವಾಕಾಂಕ್ಷಿಯಾಗಿದ್ದ ಅಭಯ್ ಪಾಟೀಲ್  ಗೈರಾಗುವ ಮೂಲಕ ಅಸಮಾಧಾನ ತೋರಿದರು. ಜೊತೆಗೆ ಜಾರಕಿಹೊಳಿ ಸಹೋದರರು ಕೂಡ ಸಭೆ ಸೇರಿದಂತೆ ಇತರೆ ಸಮಯದಲ್ಲಿ ಸಿಎಂ ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸದಂತೆ ಅಂತರ ಕಾಯ್ದುಕೊಂಡಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Seema R
  First published: