ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: CM Bommai

ಕೇವಲ ಜೀವನೋಪಾಯಕ್ಕಾಗಿ ಅಲ್ಲ, ಆರ್ಥಿಕ ಅಭಿವೃದ್ಧಿ ಸಾಧಿಸುವ ಮೂಲಕ ವiಹಿಳಾ ಸಬಲೀಕರಣದ ಧ್ಯೇಯವನ್ನು ಸರ್ಕಾರ ಹೊಂದಿದೆ.

ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ಬಸವರಾಜ್ ಬೊಮ್ಮಾಯಿ

  • Share this:
    ಉಡುಪಿ, ಏಪ್ರಿಲ್ 11 :  ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆಯನ್ನು (Vidhyanidhi Scheme) ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ತಿಳಿಸಿದರು. ಇಲ್ಲಿನ ಶ್ರೀ ಕ್ಷೇತ್ರ ಉಚ್ಚಿಲ ಇವರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಿಸಲಾಗುವುದು. ಮೀನುಗಾರರ 8 ಬಂದರುಗಳಲ್ಲಿ ಹೂಳು ತೆಗೆಯುವ ಕೆಲಸವನ್ನು ಮಾಡಲಾಗುವುದು. ಮೀನುಗಾರ ವೃತ್ತಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಪ್ರತಿ ಗ್ರಾಮಪಂಚಾಯತಿ ಕೆರೆಗಳಲ್ಲಿ ಮೀನುಗಾರರಿಗೆ ಕೆರೆಗಳನ್ನು ಮೀಸಲಿಟ್ಟು, ಮೀನಿನ ಕೃಷಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

    ಮಹಿಳಾ ಸಬಲೀಕರಣ:
    ಸ್ತ್ರೀಶಕ್ತಿ ಸಂಘಗಳ ಸಾಲಗಳ ಮರುಪಾವತಿ ಶೇ.95 ರಷ್ಟಿದೆ. ಇದು ಮಹಿಳೆಯರ ಪರಿಶ್ರಮ ಹಾಗೂ ಪ್ರಮಾಣಿಕತೆಯನ್ನು ತೋರಿಸುತ್ತದೆ. ರಾಜ್ಯದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಆ್ಯಂಕರ್ ಬ್ಯಾಂಕ್ ಜೋಡಿಸಿ ಸ್ತ್ರೀ ಶಕ್ತಿ ಸಂಘಗಳಿಗೆ 1.5 ಲಕ್ಷ ರೂ.ಗಳಷ್ಟು ಸಾಲ ಸೌಲಭ್ಯ ನೀಡಲಾಗುವುದು. ಇದರಿಂದ ಸುಮಾರು 4 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಕೇವಲ ಜೀವನೋಪಾಯಕ್ಕಾಗಿ ಅಲ್ಲ, ಆರ್ಥಿಕ ಅಭಿವೃದ್ಧಿ ಸಾಧಿಸುವ ಮೂಲಕ ವiಹಿಳಾ ಸಬಲೀಕರಣದ ಧ್ಯೇಯವನ್ನು ಸರ್ಕಾರ ಹೊಂದಿದೆ.

    ಮೀನುಗಾರರಿಗೆ 10 ತಿಂಗಳ ಡೀಸೆಲ್ ಸಬ್ಸಿಡಿ :
    100 ಡಾ. ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುವುದು. ರಾಜ್ಯದ ಆಯ್ದ ಜಿಲ್ಲೆಗಳಲ್ಲಿ 1000 ಹಾಸ್ಟೆಲ್‍ಗಳ ಕ್ಲಸ್ಟರ್ ನಿರ್ಮಿಸಲಾಗುವುದು. ಮೊಗವೀರ ಸಮುದಾಯದ ಮಕ್ಕಳಿಗೆ ವಸತಿ ನಿಲಯ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪೂರೈಸಲಾಗುವುದು. ಮೀನುಗಾರರಿಗೆ 10 ತಿಂಗಳಿಗೆ ಬೇಕಾಗುವ ಡೀಸೆಲ್ ವೆಚ್ಚವನ್ನು ಸಂಪೂರ್ಣವಾಗಿ ಸಬ್ಸಿಡಿ ನೀಡಲಾಗುವುದು. ಮೊಗವೀರರ ಮಹಾಸಂಘ ಕೋರಿರುವಂತೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ 5 ಕೋಟಿ ರೂ.ಗಳನ್ನು ಮುಜರಾಯಿ ಇಲಾಖೆ ಮೂಲಕ ನೀಡಲಾಗುವುದು. ಮೀನುಗಾರರ ದುಡಿಮೆ, ಸಾಹಸಗಳನ್ನು ಪ್ರೋತ್ಸಾಹಿಸಿ ಅವರ ಒಳಿತಿಗಾಗಿ ಸರ್ಕಾರ ಸದಾ ಸ್ಪಂದಿಸುತ್ತದೆ ಎಂದರು.

    ಇದನ್ನು ಓದಿ: ಬೆಂಗಳೂರಿನ ಮತ್ತೊಂದು ಸ್ಕೂಲ್​ಗೆ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಮೇಲ್; ಶಾಲೆಯಲ್ಲಿ ಪೊಲೀಸರ ಪರಿಶೀಲನೆ

    ಸಮಸ್ಯೆಗೆ ಪರಿಹಾರ ಒದಗಿಸುವ ಚಿಂತನೆ ನಾಯಕನಿಗಿರಬೇಕು. ಕೋವಿಡ್ ಸೇರಿದಂತೆ ಯಾವುದೇ ಸಂಕಷ್ಟದ ಸಮಯದಲ್ಲಿನ ಸ್ಪಂದನೆಯಿಂದ ಸರ್ಕಾರದ ಜೀವಂತಿಕೆ ನಿರೂಪಿತವಾಗುತ್ತದೆ. ಕೋವಿಡ್ ಅಲೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕತೆಯ ಅಭಿವೃದ್ಧಿಗಾಗಿ ಶ್ರಮವಹಿಸಿ ಸುಮಾರು 15 ಸಾವಿರ ಕೋಟಿಗೂ ಮೀರಿದ ಆರ್ಥಿಕತೆಯನ್ನು ಸರ್ಕಾರ ತಲುಪಿದೆ. ರೈತರಿಗೆ ಡೀಸೆಲ್ ವೆಚ್ಚ,. ಕೋವಿಡ್ ಪ್ರಾಣಕಳೆದುಕೊಂಡವರಿಗೆ ಪರಿಹಾರ, ಪ್ರವಾಹದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಹಾರಗಳನ್ನು ನೀಡಲಾಗಿದೆ ಎಂದರು.

    ಇದನ್ನು ಓದಿ: Tirupati ವೆಂಕಟೇಶ್ವರ ದೇವಾಲಯಗೆ 5 ಕೋಟಿ ಮೌಲ್ಯದ ವಿದೇಶದ ಭೂಮಿ ದಾನ

    ಕಾನೂನು ಕ್ರಮ ಕೈಗೆ ತೆಗೆದುಕೊಳ್ಳದಂತೆ ಎಚ್ಚರಿಕೆ

    ಇದಕ್ಕೂ ಮುನ್ನ ಉಡುಪಿ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು,  ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆ ಸಂದೇಶ ನೀಡಿದರು

    ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಮುಖ್ಯಮಂತ್ರಿಗಳು ಮೌನವಾಗಿದ್ದೀರಿ ಎಂದು ವಿಪಕ್ಷ ಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನನ್ನ ಕ್ರಮಗಳೇ ಮಾತನಾಡುತ್ತಿವೆ. ನಾವು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳ ಬೇಕು, ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಮಗೆ ತಿಳಿದಿದೆ. ಇವರಿಂದ ಏನು ಕಲಿಯಬೇಕಿಲ್ಲ ಎಂದು ತಿರುಗೇಟು  ನೀಡಿದರು
    Published by:Seema R
    First published: