• Home
 • »
 • News
 • »
 • state
 • »
 • Basavaraja Bommai| ಬೊಮ್ಮಾಯಿ-ಕೇಂದ್ರ ಸಚಿವರ ಭೇಟಿ; ಕೃಷ್ಣ-ಮೇಕೆದಾಟು ಸೇರಿದಂತೆ ಹಲವು ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ!

Basavaraja Bommai| ಬೊಮ್ಮಾಯಿ-ಕೇಂದ್ರ ಸಚಿವರ ಭೇಟಿ; ಕೃಷ್ಣ-ಮೇಕೆದಾಟು ಸೇರಿದಂತೆ ಹಲವು ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ!

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಅಂತರರಾಜ್ಯ ಜಲವಿವಾದ ಕಾಯ್ದೆಯ ಪ್ರಕಾರ ರಾಜ್ಯದ ನಿಲುವು ಸಕಾರಾತ್ಮಕವಾಗಿದ್ದು ರಾಜ್ಯದ ಅಟಾರ್ನಿ ಜನರಲ್ ರವರ ಸಲಹೆ ಮೇರೆಗೆ ಮುಂದಿನ ನಡೆ ಇಡಲಿದೆ. ಅಂತರರಾಜ್ಯ ಕಲಹಗಳನ್ನು ಬಗೆಹರಿಸುವ ಕುರಿತಂತೆ ಇಂದು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸುದೀರ್ಘ ಚರ್ಚೆ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಮುಂದೆ ಓದಿ ...
 • Share this:

  ನವ ದೆಹಲಿ (ಆಗಸ್ಟ್ 25): ಅಂತಾರಾಜ್ಯ ನದಿ ವಿವಾದಗಳ (Inter state water Dispute) ಕಾರಣಕ್ಕಾಗಿ ಕೃಷ್ಣ ಮೇಲ್ದಂಡೆ ಯೋಜನೆ (Krishna Meldande), ಎತ್ತಿನಹೊಳೆ ಯೋಜನೆ (ettinahole) ಮತ್ತು ಮೇಕೆದಾಟು (Mekedatu) ಯೋಜನೆ ಸೇರಿದಂತೆ ಕರ್ನಾಟಕ ದಲ್ಲಿ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳು ಇನ್ನೂ ಪೂರ್ಣವಾಗದೆ ಹಾಗೆಯೇ ಉಳಿದಿದೆ. ಇದು ಸಾಮಾನ್ಯವಾಗಿ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಮೇಕೆದಾಟು ಯೋಜನೆ ಸಮಸ್ಯೆ ಯಂತೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಮಿಳುನಾಡು ಸರ್ಕಾರ (Tamilnadu) ಖ್ಯಾತೆ ತೆಗೆಯುತ್ತಲೇ ಇದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಲು ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ನೇತೃತ್ವದ ಸರ್ಕಾರ ಮುಂದಾಗಿದ್ದು, ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಎಲ್ಲಾ ಅಂತಾರಾಜ್ಯ ನದಿ ವಿವಾದಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದು ವರದಿಯಾಗಿದೆ.


  ಕೇಂದ್ರ ಸಚಿವರ ಜೊತೆಗಿನ ಸಭೆಯ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, "ಇಂದು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತದ ಬಗ್ಗೆ ಚರ್ಚಿಸಲಾಯಿತು. ಬ್ರಿಜೇಶ್ ಕುಮಾರ್ ಮಿಶ್ರಾ ಟ್ರಿಬ್ಯೂ ನಲ್ ನ ಅಧಿಸೂಚನೆ ಹೊರಡಿಸಲು ಕರ್ನಾಟಕ ಹಾಗೂ ಮಹಾರಾಷ್ಟ್ರ ಒಟ್ಟಾಗಿ ಬೇಡಿಕೆ ಇಟ್ಟಿದೆ. ಜಲವಿವಾದ ಪ್ರಕರಣ ಬಹುದಿನಗಳಿಂದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಉಳಿದ್ದಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಪ್ರಕರಣ ಇತ್ಯರ್ಥ ಗೊಳಿಸಲು ಮನವಿ ಮಾಡಲಾಯಿತು" ಎಂದು ಮಾಹಿತಿ ನೀಡಿದ್ದಾರೆ.


  ಅಲ್ಲದೆ, "ಅಂತರರಾಜ್ಯ ಜಲವಿವಾದ ಕಾಯ್ದೆಯ ಪ್ರಕಾರ ರಾಜ್ಯದ ನಿಲುವು ಸಕಾರಾತ್ಮಕವಾಗಿದ್ದು ರಾಜ್ಯದ ಅಟಾರ್ನಿ ಜನರಲ್ ರವರ ಸಲಹೆ ಮೇರೆಗೆ ಮುಂದಿನ ನಡೆ ಇಡಲಿದೆ. ಅಂತರರಾಜ್ಯ ಕಲಹಗಳನ್ನು ಬಗೆಹರಿಸುವ ಕುರಿತಂತೆ ಇಂದು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸುದೀರ್ಘ ಚರ್ಚೆ ಮಾಡಲಾಗಿದೆ. ತಮಿಳುನಾಡು ಸರ್ಕಾರದ ಕಾವೇರಿ - ಗುಂಡಾರ್ ನದಿ ಜೋಡಣೆ ಯೋಜನೆಗೆ ಅನುಮತಿ ಇಲ್ಲದಿರುವುದರಿಂದ ಅನುಷ್ಠಾನ ಕಷ್ಟ ಸಾಧ್ಯ. ಮೇಕೆದಾಟು, ಮಲಪ್ರಭ ಯೋಜನೆಗಳ ಬಗ್ಗೆಯೂ ಚರ್ಚುಸಲಾಗಿದ್ದು, ಕಾವೇರಿ ಹಾಗೂ ಎತ್ತಿನಹೊಳೆ ಬಗ್ಗೆ ನಿರ್ದಿಷ್ಟ ಪ್ರಸ್ತಾವನೆಯೊಂದಿಗೆ ಪುನ: ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು.


  ಇದನ್ನೂ ಓದಿ: Justice Nagarathna| ಸುಪ್ರೀಂನ ನ್ಯಾಯಾಧೀಶೆಯಾಗಿ ಜಸ್ಟೀಸ್​ ನಾಗರತ್ನ ಆಯ್ಕೆ; 2027ಕ್ಕೆ ಇವರೇ ಮೊದಲ ಮಹಿಳಾ ಸಿಜೆಐ!


  ಮಹದಾಯಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾನೂನು ತಂಡದೊಂದಿಗೆ ಚರ್ಚಿಸಲಾಗುವುದು. ರಾಜ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೋರಾಟ ಮಾಡಲಾಗುವುದು ಎಂದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ನಿಲುವು ನ್ಯಾಯಸಮ್ಮತವಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗಿದೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


  ಇದೇ ಸಂದರ್ಭದಲ್ಲಿ ರಾಜ್ಯದ ಕೃಷಿ ಚಟುವಟಿಕೆ ಮತ್ತು ಖರೀದಿ ಕೇಂದ್ರಗಳ ಸ್ಥಾಪನೆಯ ಬಗ್ಗೆಯೂ ಮಾತನಾಡಿರು ಬಸವರಾಜ ಬೊಮ್ಮಾಯಿ, "ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಖರೀದಿಗೆ ಕೇಂದ್ರದ ಅನುಮತಿ ದೊರೆತಿದ್ದು
  ಖರೀದಿ ಬಗ್ಗೆ ಆದೇಶ ಸದ್ಯದಲ್ಲಿಯೇ ಹೊರಬೀಳಲಿದೆ.


  ಇದನ್ನೂ ಓದಿ: Delhi University Controversy| ವಿವಾದದಲ್ಲಿ ದೆಹಲಿ ವಿವಿ; ಮಹಾಶ್ವೇತಾದೇವಿ ಸೇರಿದಂತೆ ಪ್ರಮುಖ ದಲಿತ ಲೇಖಕರ ಪಠ್ಯ ಹೊರಕ್ಕೆ!


  ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಹೊಸ ಕೃಷಿ ನೀತಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇದಲ್ಲದೆ, ರೈತರ ಮಕ್ಕಳಿಗಾಗಿ ರೈತ ವಿದ್ಯಾನಿಧಿ , ವಿದ್ಯಾರ್ಥಿ ವೇತನ ಯೋಜನೆಗಳ ಉದ್ಘಾಟಿಸಲು ಕೇಂದ್ರ ಕೃಷಿ ಸಚಿವರು ಮುಂದಿನ ತಿಂಗಳ 5 ನೇ ತಾರೀಖಿನಂದು ಬೆಂಗಳೂರಿಗೆ ಆಗಮಿಸಲಿದ್ದಾರೆ" ಎಂದು ಅವರು ತಿಳಿಸಿದರು.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು