Drug Mafia: ಡ್ರಗ್ಸ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ನಕಾರ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಖಾಲಿ ಇರುವ 4 ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತರೆ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ಮಾಡಿದರು. 

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

  • Share this:
ನವದೆಹಲಿ, ಸೆ. 8: ರಾಜ್ಯದಲ್ಲಿ ಡ್ರಗ್ಸ್ (Drugs) ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಚರ್ಚೆ ಆಗುತ್ತಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಪ್ರಕರಣದ ಬಗೆಗಿನ ಪ್ರಶ್ನೆಯೊಂದಕ್ಕೆ 'ಅದು ಪೊಲೀಸರ ಕೆಲಸ' ಎಂದು ಹೇಳಿ ನುಣುಚಿಕೊಂಡಿದ್ದಾರೆ‌.

ರಾಜ್ಯದಲ್ಲಿ ನಿಫಾ ವೈರಸ್  (Nifa Virus) ಆತಂಕಕಾರಿಯಾಗಿ ಹೆಚ್ಚಳ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ನಿಫಾ ವೈರಸ್ ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿ ಜೊತೆ ಮಾತನಾಡಿದ್ದೇನೆ. ವೈರಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ' ಎಂದು ಹೇಳಿದರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ (Parliament Affairs Minister Prahlad Joshi) ಅವರ ಪುತ್ರಿ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ಬಂದಿರುವ ಬಸವರಾಜ ಬೊಮ್ಮಾಯಿ ಬುಧವಾರ ಕೇಂದ್ರ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ಸಚಿವ ಜಿತೀಂದ್ರ ಸಿಂಗ್ (Union Minister for Personal, Public Grecians and Pensions, Jithindra Sing), ಕೇಂದ್ರ ಸಾರಿಗೆ ಮತ್ತು  ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Union Minister of Road and Transport, Nitin Gadkari), ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ  (Union Minister of Housing and Urban Developments, Hardip Sing Puri) ಹಾಗೂ ಕೇಂದ್ರ ಬಂದರು, ಹಡಗು, ಜಲಸಾರಿಗೆ ಮತ್ತು ಆಯುಷ್ ಖಾತೆ ಸಚಿವ ಸರ್ಬಾನಂದ ಸೋನೋವಾಲ್ (Union Minister of Ports, Shipping and Waterways and Minister of AYUSH) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಬಳಿಕ‌ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, 'ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದೆ. ಆಡಳಿತ್ಮಾಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದೆ.‌‌ ಬಳಿಕ ಸಚಿವ  ರಾಜೀವ್ ಚಂದ್ರಶೇಖರ್ ಭೇಟಿ ಮಾಡಿ ಎಲೆಕ್ಟ್ರಾನಿಕ್ ವಸ್ತುಗಳ ಉತ್ಪಾದಕ ಘಟಕ ಸ್ಥಾಪನೆ ಮತ್ತು ರಾಜ್ಯದಲ್ಲಿ ಆಫ್ಟಿಕಲ್ ಫೈಬರ್ ಇಂಟರ್ ನೆಟ್ ಅಳವಡಿಸುವ ಬಗ್ಗೆ ಚರ್ಚೆ ನಡೆಸಿದೆ. ರಾಜ್ಯ ಮಟ್ಟದ ಕೌಶಲ್ಯ ಅಭಿವೃದ್ಧಿ ಕೇಂದ್ರ ಆರಂಭಿಸುವ ಬಗ್ಗೆ ಚರ್ಚೆ ಮಾಡಿದೆ ಎಂದು ಹೇಳಿದರು.

ಇದನ್ನು ಓದಿ: Poornachandra Tejaswi: ತೇಜಸ್ವಿ ಕೃತಿಗಳಲ್ಲಿ ಪ್ರಕೃತಿಯ ಮಹತ್ವದ ಅನಾವರಣ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ದಾಬಸ್ ಪೇಟೆಯಿಂದ ಹೊಸೂರು ರೋಡ್ ರಸ್ತೆ ನಿರ್ಮಾಣದ ಬಗ್ಗೆ ಚರ್ಚೆ ಮಾಡಿದ್ದೇನೆ. ಯೋಜನೆ ಆರಂಭಿಸಲು ಮನವಿ ಮಾಡಿದ್ದೇನೆ. ಈ ರಸ್ತೆಯಿಂದ ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗೆಹರಿಲಿದೆ. ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಸಂಪೂರ್ಣಗೊಳಿಸಲು ಮನವಿ ಮಾಡಿದ್ದೇನೆ. ವಿಜಯಪುರದಿಂದ ಸಂಕೇಶ್ವರ 80 ರಿಂದ 120 ಕಿಲೋಮೀಟರ್ ಗೆ ವಿಸ್ತರಿಸಲು ಕೇಳಿದ್ದೇನೆ. ರಾಜ್ಯದ 5 ಹೆದ್ದಾರಿಗಳನ್ನು 'ಭಾರತ ಮಾಲಾ ಎರಡನೇ ಯೋಜನೆಯಡಿ' ರಾಷ್ಟ್ರೀಯ ಹೆದ್ದಾರಿ ಮಾಡಲು ಮನವಿ ಮಾಡಿದ್ದೇನೆ. ಇದಲ್ಲದೆ ಪ್ರವಾಹ ಪರಿಸ್ಥಿತಿ ವೇಳೆ ಹಾಳಾದ ರಸ್ತೆ ಪರಿಹಾರವಾಗಿ 184 ಕೋಟಿ ರೂಪಾಯಿ ಬಿಡುಗಡೆ ಮಾಡಲು ಅವರು ಒಪ್ಪಿದ್ದಾರೆ ಎಂದು ವಿವರಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಖಾಲಿ ಇರುವ 4 ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತರೆ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ಮಾಡಿದರು. 
Published by:HR Ramesh
First published: